Homeಮುಖಪುಟಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ...

ಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ : ಕಾಂಗ್ರೆಸ್ ದಲಿತ ಮುಖಂಡ

- Advertisement -
- Advertisement -

ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ಪುತ್ರ ತನ್ನ ಪುತ್ರನ ಮೇಲೆ ಹಲ್ಲೆ ನಡೆಸಿದ್ದು, ಅವರ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ತಮ್ಮ ಇಡೀ ಕುಟಂಬ ಮತ್ತು ದಲಿತ ಸಮುದಾಯದ ಹಲವು ಮಂದಿ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ ಎಂದು ಕಾಂಗ್ರೆಸ್‌ನ ಜುನಾಗಢ ನಗರ ಎಸ್‌ಸಿ, ಎಸ್‌ಟಿ ಘಟಕದ ಅಧ್ಯಕ್ಷ ರಾಜೇಶ್ ಸೋಲಂಕಿ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ರಾಜೀನಾಮೆ ಪಡೆದು, ಅವರ ಪತಿಯನ್ನು ಬಂಧಿಸಬೇಕು ಎಂದು ರಾಜೇಶ್ ಸೋಲಂಕಿ ಆಗ್ರಹಿಸಿದ್ದಾರೆ. ರಾಜೇಶ್ ಅವರು ದಲಿತ ಸಮುದಾಯದ ಅನೌಪಚಾರಿಕ ಸಮಘಟನೆಯಾದ ಜುನಾಗಢ ಜಿಲ್ಲಾ ಅನುಸೂಚಿತ ಜಾತಿ ಸಮಾಜದ ಮುಖ್ಯಸ್ಥರೂ ಆಗಿದ್ದಾರೆ. ರಾಜೇಶ್ ಅವರ ಮಗ ಸಂಜಯ್ ಸೋಲಂಕಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ನ್ಯಾಷನಲ್ ಸ್ಟೂಡೆಂಡ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ)ನ ನಾಯಕರಾಗಿದ್ದಾರೆ.

ಸಂಜಯ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗೊಂಡಾಲ್ ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ಪುತ್ರ ಜ್ಯೋತಿರಾದಿತ್ಯಸಿಂಹ ಅಲಿಯಾಸ್ ಗಣೇಶ್ ಅನ್ನು ಬಂಧಿಸಲಾಗಿದೆ.

ಬುಧವಾರ, ರಾಜೇಶ್ ಸೋಲಂಕಿ ಅವರು ಜುನಾಗಢ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮತಾಂತರಕ್ಕೆ ರಾಜ್ಯ ಸರ್ಕಾರದ ಅನುಮತಿ ಪಡೆಯಲು ಅರ್ಜಿ ನಮೂನೆ ಪಡೆದುಕೊಂಡಿದ್ದಾರೆ. ಗೀತಾಬಾ ಮತ್ತು ಆಕೆಯ ಪತಿ ಜಯರಾಜ್‌ಸಿಂಹ ಜಡೇಜಾ ವಿರುದ್ಧ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತಾನು ಮತ್ತು ಸೋಲಂಕಿ ಕುಟುಂಬದ ಸುಮಾರು 150 ಸದಸ್ಯರು ಇಸ್ಲಾಂಗೆ ಮತಾಂತರಗೊಳ್ಳುವುದಾಗಿ ಜುಲೈ 6 ರಂದು ರಾಜೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಮೇ 30 ಮತ್ತು 31ರ ಮಧ್ಯರಾತ್ರಿಯಲ್ಲಿ ಸಂಜಯ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 15 ರೊಳಗೆ ಬಿಜೆಪಿಯು ಗೀತಾಬಾ ಅವರ ರಾಜೀನಾಮೆ ಪಡೆಯಬೇಕು ಮತ್ತು ಐಪಿಸಿ ಸೆಕ್ಷನ್ 120 ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಜಯರಾಜ್‌ಸಿಂಹ ಅವರನ್ನು ಬಂಧಿಸಬೇಕು ಎಂದು ರಾಜೇಶ್ ಒತ್ತಾಯಿಸಿದ್ದಾರೆ.

ಮೇ 31 ರಂದು ಡ್ರೈವಿಂಗ್ ವಿಚಾರದಲ್ಲಿ ವಾಗ್ವಾದ ನಡೆದ ನಂತರ ಶಾಸಕರ ಪುತ್ರ ಜ್ಯೋತಿರಾದಿತ್ಯಸಿಂಹ ಮತ್ತು ಇತರರು ಜುನಾಗಢದಿಂದ ತನ್ನನ್ನು ಅಪಹರಿಸಿದ್ದರು ಎಂದು ಸಂಜಯ್ ನೀಡಿರುವ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳು ತನ್ನನ್ನು ರಾಜ್‌ಕೋಟ್ ಜಿಲ್ಲೆಯ ಗೊಂಡಾಲ್‌ಗೆ ಕರೆದೊಯ್ದು, ಪಿಸ್ತೂಲ್ ತೋರಿಸಿ ಬೆದರಿಸಿ, ಬಟ್ಟೆ ಬಿಚ್ಚಿ, ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದು ಸಂಜಯ್ ದೂರಿನಲ್ಲಿ ಆರೋಪಿಸಿದ್ದಾರೆ.

ಪೊಲೀಸರು ಜ್ಯೋತಿರಾದಿತ್ಯಸಿಂಹ ಮತ್ತು ಇತರ 10 ಜನರನ್ನು ಕೊಲೆ ಯತ್ನದ ಆರೋಪ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಬಂಧಿಸಿದ್ದಾರೆ. ಎಲ್ಲಾ ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮೂರು ಬಾರಿ ಗೊಂಡಾಲ್‌ನ ಶಾಸಕರಾಗಿದ್ದ ಜ್ಯೋತಿರಾದಿತ್ಯಸಿಂಹ ಅವರ ತಂದೆ ಜಯರಾಜ್‌ಸಿಂಹ ಕೂಡ ಸಂಜಯ್‌ನನ್ನು ಅಪಹರಿಸಿ ಹಲ್ಲೆ ನಡೆಸಿದ ಸಂಚಿನ ಭಾಗವಾಗಿದ್ದರು ಎಂದು ಸಂಜಯ್ ತಂದೆ ರಾಜೇಶ್ ಆರೋಪಿಸಿದ್ದಾರೆ.

“ಕಳೆದ 25 ವರ್ಷಗಳಿಂದ ಬಿಜೆಪಿ ಗುಜರಾತ್‌ನಲ್ಲಿ ಆಡಳಿತ ನಡೆಸುತ್ತಿದ್ದು, ಈ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಸುಮಾರು 5,000 ಪ್ರಕರಣಗಳು ದಾಖಲಾಗಿವೆ. ಉನಾ ದೌರ್ಜನ್ಯದ ಸಂತ್ರಸ್ತರಿಗೆ ಎಂಟು ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ. ನಾಗರಿಕರನ್ನು ರಕ್ಷಿಸುವುದು ಗುಜರಾತ್ ಸರ್ಕಾರದ ಕರ್ತವ್ಯ. ಹಾಲಿ ಶಾಸಕಿ ಮತ್ತು ಮಾಜಿ ಶಾಸಕನ ಮಗ ನನ್ನ ಮಗನನ್ನು ಅಪಹರಿಸಿದ್ದಾರೆ” ಎಂದು ರಾಜೇಶ್ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಮಾಧ್ಯಮಗಳಿಗೆ ಹೇಳಿದ್ದಾರೆ.

“ಆಗಸ್ಟ್ 15 ರವರೆಗೆ ಸರ್ಕಾರ ಮತ್ತು ಬಿಜೆಪಿಗೆ ಸಮಯ ನೀಡಿದ್ದೇವೆ. ಸರ್ಕಾರ ಮತ್ತು ಬಿಜೆಪಿ ನಮ್ಮ ಮಾತುಗಳನ್ನು ಕೇಳದಿದ್ದರೆ ಮತ್ತು ನಮ್ಮ ಬೇಡಿಕೆಗಳನ್ನು ಒಪ್ಪದಿದ್ದರೆ, ಗಾಂಧಿನಗರಕ್ಕೆ ಬೃಹತ್ ರ್‍ಯಾಲಿ ನಡೆಸುತ್ತೇವೆ. ದಲಿತರಿಗೆ ನ್ಯಾಯ ಕೊಡಿಸುವಂತೆ ಮುಖ್ಯಮಂತ್ರಿ, ರಾಜ್ಯಪಾಲರು ಮತ್ತು ಬಿಜೆಪಿ ಅಧ್ಯಕ್ಷರಿಗೆ ಮನವಿ ಸಲ್ಲಿಸುತ್ತೇವೆ. ಆ ನಂತರವೂ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಇಸ್ಲಾಂಗೆ ಮತಾಂತರಗೊಳ್ಳುತ್ತೇವೆ” ಎಂದು ರಾಜೇಶ್ ತಿಳಿಸಿದ್ದಾರೆ.

ಇದನ್ನೂ ಓದಿ : ಮಾಜಿ ಸಿಎಂ ಸೂಚನೆ ಮೇರೆಗೆ ನನಗೆ ಚಿತ್ರಹಿಂಸೆ ನೀಡಲಾಗಿತ್ತು ಎಂದ ಟಿಡಿಪಿ ಶಾಸಕ: ಜಗನ್ ಮೋಹನ್ ರೆಡ್ಡಿ, ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...