Homeಮುಖಪುಟಧ್ವನಿವರ್ಧಕ ಶಬ್ಧ ಕಡಿಮೆ ಮಾಡುವಂತೆ ಕೇಳಿದ್ದಕ್ಕೆ ಹಲ್ಲೆ; ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಆಸ್ಪತ್ರೆಗೆ ದಾಖಲು

ಧ್ವನಿವರ್ಧಕ ಶಬ್ಧ ಕಡಿಮೆ ಮಾಡುವಂತೆ ಕೇಳಿದ್ದಕ್ಕೆ ಹಲ್ಲೆ; ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಆಸ್ಪತ್ರೆಗೆ ದಾಖಲು

- Advertisement -
- Advertisement -

ದೇವಸ್ಥಾನದಲ್ಲಿ ಹಾಕಿದ್ದ ಧ್ವನಿವರ್ಧಕ ಶಬ್ಧ ಕಡಿಮೆ ಮಾಡುವಂತೆ ಕೇಳಿದ್ದಕ್ಕೆ ಹಿರಿಯ ಸಾಹಿತಿ, ದಲಿತ ಚಳವಳಿ ಮುಖಂಡ ಕೋಟಿಗಾನಹಳ್ಳಿ ರಾಮಯ್ಯ ಮತ್ತು ಅವರ ಪುತ್ರನ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ.

ಕೋಲಾರದ ಪಾಪರಾಜನಹಳ್ಳಿಯಲ್ಲಿ ಇಂದು ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ರಾಮಯ್ಯ ಅವರ ಮೇಲೆ ಹಲ್ಲೆ ನಡೆದಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ. ನಾರಾಯಣಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಪಾಪರಾಜನಹಳ್ಳಿಯ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ, ಬೈರಪ್ಪ, ತೇರಹಳ್ಳಿಯ ಮುನಿಯಪ್ಪ ಮುಂತಾದವರು ತೀವ್ರವಾಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಜಿಲ್ಲೆಯ ಪ್ರಮುಖ ದಲಿತ ಮುಖಂಡರು ಮತ್ತು ಹೋರಾಟಗಾರರು ರಾಮಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಂದು ಬೆಳಗ್ಗೆ ಎಂಟು ಗಂಟೆ ಸುಮಾರಿಗೆ, ಕೋಲಾರ ತಾಲ್ಲೂಕಿನ ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿಯ ಮುನೇಶ್ವರ ದೇವಾಲಯ ಬಳಿ ಘಟನೆ ನಡೆದಿದೆ. ದೇವಾಲಯದಲ್ಲಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಧ್ವನಿವರ್ಧಕ ಶಬ್ಧ ಹೆಚ್ಚು ಮಾಡುತ್ತಿದ್ದರು ಎನ್ನಲಾಗಿದ್ದು, ಇಂದು ಬೆಳಿಗ್ಗೆ ದೇವಸ್ಥಾನದ ಬಳಿಗೆ ತೆರಳಿದ್ದ ರಾಂಯ್ಯನವರು, “ಧ್ವನಿವರ್ಧಕ ಶಬ್ಧ ಕಡಿಮೆ ಮಾಡಿ, ಓದಲು ತೊಂದರೆ ಆಗುತ್ತೆ” ಎಂದು ಕೇಳಿಕೊಂಡಿದ್ದಾರೆ. ರಾಮಯ್ಯ ‘ಬುಡ್ಡಿ ದೀಪ’ದಲ್ಲಿ (ರಾಮಯ್ಯ ನಿವಾಸ) ಇರಬಾರದು ಎಂದು ಗಲಾಟೆ ಮಾಡಿದ ಮಂಜುನಾಥ್, ಬೈರಪ್ಪ, ಸುಬ್ಬು ಸೇರಿದಂತೆ ಇತರರು, ಕಣ್ಣು ಹಾಗೂ ತಲೆಗೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ರಾಮಯ್ಯ ಹಾಗೂ ಮಗ ಮೇಘಾವರ್ಷ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಲಾಗಿದ್ದು, ಕಣ್ಣಿನ ಪರೀಕ್ಷೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಲ್ಲೆ ಮಾಡಿದ ಮಂಜುನಾಥ್ ಮತ್ತು ಇತರರನ್ನು ಕೋಲಾರ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ಎಎಪಿ ಶಾಸಕನ ಬಂಧನಕ್ಕೆ ಕೋರ್ಟ್‌ ಮೆಟ್ಟಿಲೇರಿದ ಜಾರಿ ನಿರ್ದೇಶನಾಲಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವಲೋಕನ…

0
2014 ಮತ್ತು 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರಲ್ಲಿ ದೇಶದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗಿದೆ. ಈ ಬಾರಿ ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ, ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ, ಜನರಲ್ಲಿ ಮೋದಿ...