ಬಾಗಲಕೋಟೆ | ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ

ಬಾಗಲಕೋಟೆ ಜಿಲ್ಲೆ ಛಬ್ಬಿ ಗ್ರಾಮದಲ್ಲಿ ದಲಿತ ಮಹಿಳೆ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವವರ ವಿರುದ್ದ ಕಠಿಣ ಕ್ರಮಕೈಗೊಳ್ಳಲು ರಾಜ್ಯ ಮಹಿಳಾ ಆಯೋಗ ಶನಿವಾರ (ನ.15) ಸೂಚಿಸಿದೆ. ಛಬ್ಬಿ ಗ್ರಾಮದಲ್ಲಿ ದಲಿತ ಮಹಿಳೆಯ ಮೇಲೆ ಪುರುಷರು ಕ್ಷುಲ್ಲಕ ಕಾರಣಕ್ಕೆ ದೌರ್ಜನ್ಯವೆಸಗಿರುವ ಅಮಾನುಷ ಕೃತ್ಯವು ತಡವಾಗಿ ಬೆಳಕಿಗೆ ಬಂದಿರುವ ಬಗ್ಗೆ ವರದಿಯಾಗಿದೆ. ಮಹಿಳೆಯ ಮೇಲೆ ನಡೆದಿರುವ ಈ ಅಮಾನುಷ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿ, ಗಂಭೀರವೆಂದು ಪರಿಗಣಿಸಿರುತ್ತದೆ” ಎಂದು ಮಹಿಳಾ ಆಯೋಗದ ಕಾರ್ಯದರ್ಶಿ ಸೂಚನಾ ಪತ್ರದಲ್ಲಿ ತಿಳಿಸಿದ್ದಾರೆ. … Continue reading ಬಾಗಲಕೋಟೆ | ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ