Homeಮುಖಪುಟ16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ..

16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ..

ನಿರ್ಭಯ ಅತ್ಯಾಚಾರ ನಡೆದ 2012ರಲ್ಲಿ ಭಾರತದಲ್ಲಿ ಸುಮಾರು 1574 ದಲಿತ ಮಹಿಳೆಯರ ಮೇಲೆ ಅತ್ಯಾಚಾರವೆಸಗಲಾಗಿತ್ತು. 651 ದಲಿತರ ಕೊಲೆಯಾಗಿತ್ತು ಇದರಲ್ಲಿ ಶಿಕ್ಷೆಯಾಗಿದ್ದು ಎಷ್ಟು ಜನರಿಗೆ?

- Advertisement -
- Advertisement -

ನಾವೆಲ್ಲಾ ಹಿಂದೂ, ನಾವೆಲ್ಲಾ ಒಂದು’ ಎಂಬ ಘೋಷವಾಕ್ಯ ಭಾರತದ ಮಟ್ಟಿಗೆ ಸಾಕಷ್ಟು ಚಿರಪರಿಚಿತ ಮತ್ತು ಬಹಳ ಪರಿಣಾಮಕಾರಿಯಾಗಿ ಅದನ್ನು ಒಂದು ವಲಯ ಬಳಸಿಕೊಂಡು ಮುನ್ನುಗ್ಗಿದೆ. ಅದರಲ್ಲೂ ಕಳೆದ ನಾಲ್ಕಾರು ವರ್ಷಗಳಿಂದ ಈ ಘೋಷವಾಕ್ಯ ಕೆಲವರನ್ನು ಅಧಿಕಾರದ ಗದ್ದುಗೆಗೆ ಏರಿಸುವಷ್ಟರ ಮಟ್ಟಿಗೆ ಪ್ರಭಾವಶಾಲಿಯೂ ಆಗಿರುವುದು ಸುಳ್ಳಲ್ಲ. ಆದರೆ, ಹಿಂದೂ ಎಂಬ ಕಲ್ಪಿತ ಚೌಕಟ್ಟಿನೊಳಗೆ ದಲಿತರಿಗೆ ನಿಜವಾಗಿಯೂ ಪ್ರವೇಶ ಸಿಕಿದೆಯೇ? ದಲಿತರು ಹಿಂದೂಗಳಾಗಿದ್ದರೆ ಈ ಸಮಾಜದಲ್ಲಿ ಅವರೂ ಸಹ ಸಮಾನ ಸ್ಥಾನಮಾನ ಗೌರವಾಧರಗಳಿಗೆ ಅರ್ಹರಲ್ಲವೇ? ಇವೆಲ್ಲಾ ಜಿಜ್ಞಾಸೆಗಳಿಗೂ ದೊಡ್ಡ ಇತಿಹಾಸವೇ ಇದೆ.

ಆದರೆ, ಭಾರತೀಯ ಸಮಾಜ ಮತ್ತು ರಾಜಕೀಯ ಈವರೆಗೆ ದಲಿತರನ್ನು ಕೇವಲ ಮತಗಳನ್ನಾಗಷ್ಟೇ ನೋಡಿವೆಯೇ ವಿನಃ ಮನುಷ್ಯರನ್ನಾಗಿ ಕಂಡಿಲ್ಲ ಎಂಬುದಕ್ಕೆ ನಮ್ಮೆದುರು ಸಾಕಷ್ಟು ನಿದರ್ಶನಗಳಿವೆ. ಈ ನಿದರ್ಶನಗಳಿಗೆ ಹೊಸ ಸೇರ್ಪಡೆಯೇ ವಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಗಾಳ ಗ್ರಾಮದ ಪರಿಶಿಷ್ಟ ಜಾತಿಯ ಯುವಕ ಅನಿಲ ಇಂಗಳಗಿಯ ಹತ್ಯೆ! (27 ಆಗಸ್ಟ್ 2020)

28 ವರ್ಷದ ಯುವಕ ಅನಿಲ ಇಂಗಳಗಿ ಇಂದು ನಮ್ಮ ಜೊತೆ ಇಲ್ಲ. ಇದಕ್ಕೆ ಕಾರಣ ಜಾತಿ ಎಂಬ ವಿಷಬೀಜ. ಇಷ್ಟಕ್ಕೂ ಅನಿಲ ಕೊಲೆಗೀಡಾಗುವಷ್ಟರ ಮಟ್ಟಿಗೆ ಮಾಡಿದ ತಪ್ಪಾದರೂ ಏನು ಗೊತ್ತಾ? ದೇವಾಲಯದ ಕಟ್ಟೆ ಮೇಲೆ ಪರಿಶಿಷ್ಟ ಜಾತಿಗೆ ಸೇರಿದ ಅನಿಲ ತಮಗೆ ಸರಿಸಮಾನವಾಗಿ ಕುಳಿತಿದ್ದ ಎಂಬ ಏಕೈಕ ಕಾರಣಕ್ಕೆ ಮೇಲ್ಜಾತಿಯವರು ಆತನನ್ನು ಚಾಕುವಿನಿಂದ ಇರಿದು ಕೊಂದು ಪರಾರಿಯಾಗಿದ್ದಾರೆ.

ಅಸಲಿಗೆ ಕರ್ನಾಟಕ ಅಥವಾ ಭಾರತದ ಮಟ್ಟಿಗೆ ಜಾತಿ ತಾರತಮ್ಯ ಮತ್ತು ವೈಷಮ್ಯದ ಕಾರಣಕ್ಕಾಗಿ ಕೊಲೆಗೀಡಾದ ಮೊದಲ ವ್ಯಕ್ತಿಯಲ್ಲ ಅನಿಲ ಇಂಗಳಗಿ. ಹಾಗೆಯೇ ಈತ ಕೊನೆಯ ವ್ಯಕ್ತಿಯಾಗಿರಲೂ ಸಾಧ್ಯವಿಲ್ಲ ಎಂಬುದು ನಮಗೆ ಗೋಚರಿಸುತ್ತದೆ. ವರ್ಷದಿಂದ ವರ್ಷಕ್ಕೆ, ದಿನದಿಂದ ದಿನಕ್ಕೆ ದಲಿತರ ಮೇಲಿನ ಹಲ್ಲೆ, ದೌರ್ಜನ್ಯ, ಕೊಲೆ, ಅತ್ಯಾಚಾರ ಪ್ರಕರಣಗಳು ಏರುತ್ತಲೇ ಇದೆ.

ಹಾಗಾದರೆ ಭಾರತದಲ್ಲಿ ಪ್ರತಿವರ್ಷ ದಲಿತರ ಮೇಲಾಗುತ್ತಿರುವ ದೌರ್ಜನ್ಯಗಳ ಪ್ರಮಾಣವೆಷ್ಟು? ದಲಿತ ಹೆಣ್ಣು ಮಕ್ಕಳ ಮೇಲಾಗುತ್ತಿರುವ ಅತ್ಯಾಚಾರ ಪ್ರಕರಣಗಳೆಷ್ಟು? ಯಾವ-ಯಾವ ರಾಜ್ಯದಲ್ಲಿ ದಲಿತರ ಮೇಲೆ ಅತಿಹೆಚ್ಚು ದೌರ್ಜನ್ಯಗಳಾಗುತ್ತಿವೆ? ಈ ಪೈಕಿ ಎಷ್ಟು ಪ್ರಕರಣಗಳು ದಾಖಲಾಗಿ ಅಪರಾಧಿಗಳಿಗೆ ಶಿಕ್ಷೆಯಾಗಿದೆ? ತನಿಖೆಯೇ ನಡೆಯದೆ ಹಾದಿ ತಪ್ಪಿದ ಪ್ರಕರಣಗಳ ಸಂಖ್ಯೆ ಎಷ್ಟು? ಸರಕಾರದ ಸಂಸ್ಥೆಯೇ ನೀಡುವ ಅಂಕಿಅಂಶಗಳು ಬೆಚ್ಚಿಬೀಳಿಸುತ್ತವೆ.

ವರ್ಷವೊಂದಕ್ಕೆ ದಲಿತರ ಮೇಲಾಗುವ ದೌರ್ಜನ್ಯಗಳು ಎಷ್ಟು ಗೊತ್ತಾ?

ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (ಎನ್‍ಸಿಆರ್‌ಬಿ ) ನೀಡುವ ಅಂಕಿಅಂಶಗಳ ಪ್ರಕಾರ 2017-18ರಲ್ಲಿ ದಲಿತರ ಮೇಲೆ ಎಸಗಲಾಗಿರುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಭಾರತದಾದ್ಯಂತ ದಾಖಲಾಗಿರುವ ಅಪರಾಧ ಪ್ರಕರಣಗಳ ಸಂಖ್ಯೆ 5,775. ಈ ಪೈಕಿ 3172 (ಶೇ.55) ರಷ್ಟು ಪ್ರಕರಣಗಳು ಉದ್ದೇಶಪೂರ್ವಕವಾಗಿ ಅವಮಾನಿಸಿದ ಹಾಗೂ ಬೆದರಿಸಿ ದೈಹಿಕವಾಗಿ ಹಲ್ಲೆ ನಡೆಸಿದ ಪ್ರಕರಣಗಳಾಗಿವೆ.

ಇದಲ್ಲದೆ, 47 ಭೂ ಕಬಳಿಕೆ, 63 ಸಾಮಾಜಿಕ ಬಹಿಷ್ಕಾರ ಪ್ರಕರಣಗಳು ದಾಖಲಾಗಿವೆ. ಸಾರ್ವಜನಿಕ ಸ್ಥಳಗಳನ್ನು ಬಳಸಬಾರದು ಎಂಬ ಕಾರಣಕ್ಕೆ ಹಲ್ಲೆಯಾದ ಸುಮಾರು 12 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಕರ್ನಾಟಕದಲ್ಲೇ. ರಾಜ್ಯದಲ್ಲಿ 1175 ಪ್ರಕರಣಗಳು ದಾಖಲಾಗಿದ್ದರೆ, ಎರಡನೇ ಸ್ಥಾನದಲ್ಲಿರುವ ಉತ್ತರಪ್ರದೇಶದಲ್ಲಿ 804 ಪ್ರಕರಣಗಳು ದಾಖಲಾಗಿವೆ.

ಇದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯಾದರೆ, ಇನ್ನೂ ದಲಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆ ಬರೋಬ್ಬರಿ 43,203. ಈ ಸಂಖ್ಯೆ 2016-17ಕ್ಕಿಂತ ಶೇ.6ರಷ್ಟು ಅಧಿಕ ಎಂದು ಅಂಕಿಅಂಶಗಳೇ ಹೇಳುತ್ತಿವೆ. ಆದರೆ, ಇಷ್ಟು ಪ್ರಮಾಣದ ಪ್ರಕರಣಗಳ ಪೈಕಿ ತನಿಖೆಗೆ ಒಳಗಾಗಿರುವ ಮತ್ತು ಶಿಕ್ಷೆಯಾಗಿರುವ ಪ್ರಕರಣಗಳ ಸಂಖ್ಯೆ ಕೇವಲ ಶೇ.23 ರಷ್ಟು ಮಾತ್ರ.

ಕೊಲೆ-ಅತ್ಯಾಚಾರಕ್ಕೀಡಾಗುವ ದಲಿತರ ಸಂಖ್ಯೆ ಎಷ್ಟು ಗೊತ್ತಾ?

ಭಾರತ ಸರ್ಕಾರದ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋದ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ 2007-17ರ ನಡುವಣ ಹತ್ತು ವರ್ಷಗಳ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ಪ್ರಮಾಣ ಶೇ. 66ರಷ್ಟು ಹೆಚ್ಚಾಗಿದೆ. ಪ್ರತಿನಿತ್ಯ 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ ನಡೆಸಲಾಗುತ್ತಿದೆ. ಪ್ರತಿವಾರಕ್ಕೆ 13 ದಲಿತರು ಮೇಲ್‍ಜಾತಿಯವರಿಂದ ಕೊಲೆಗೀಡಾಗುತ್ತಿದ್ದಾರೆ.

ದೇಶದಲ್ಲಿ ನಿತ್ಯ ಸರಾಸರಿ ಆರು ಮಂದಿ ದಲಿತ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಲಾಗುತ್ತಿದೆ. 2012ರ ದೆಹಲಿ ನಿರ್ಭಯಾ ಅತ್ಯಾಚಾರ ಪ್ರಕರಣ ಇಡೀ ಭಾರತದ ಗಮನ ಸೆಳೆದಿತ್ತು. ದೊಡ್ಡ ಮಟ್ಟದ ಹೋರಾಟಕ್ಕೆ ಕಾರಣವಾಗಿ ಕೊನೆಗೆ ಅಪರಾಧಿಗಳನ್ನು ಪತ್ತೆಹಚ್ಚಿ ಅವರಿಗೆ ಗಲ್ಲುಶಿಕ್ಷೆಯನ್ನೂ ನೀಡಲಾಗಿತ್ತು.

ಆದರೆ, ಅದೇ ವರ್ಷ ಭಾರತದಲ್ಲಿ ಸುಮಾರು 1574 ದಲಿತ ಮಹಿಳೆಯರ ಮೇಲೆ ಅತ್ಯಾಚಾರವೆಸಗಲಾಗಿತ್ತು. 651 ದಲಿತರ ಕೊಲೆಯಾಗಿತ್ತು. ಇದಲ್ಲದೆ ದಲಿತರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದಂತಹ ಹೇಯ ಕೃತ್ಯಗಳೂ ಸಹ ದಾಖಲಾಗಿವೆ. ಆದರೆ, ಇಂತಹ ಹೀನ ಅಪರಾಧಗಳಲ್ಲಿ ಭಾಗಿಯಾದ ಎಷ್ಟು ಜನರಿಗೆ ಶಿಕ್ಷೆಯಾಗಿದೆ ಎಂದು ಹುಡುಕುತ್ತಾ ಹೊರಟರೆ ಫಲಿತಾಂಶ ಮಾತ್ರ ಕಡಿಮೆಯಲ್ಲಿ ಕಡಿಮೆ.

ಕರ್ನಾಟಕದ ಅಂಕಿಸಂಖ್ಯೆ ಏನು?

‘ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯಿದೆ’ ಅನುಷ್ಠಾನದ 2019ರ ವಾರ್ಷಿಕ ರಾಜ್ಯ ವರದಿ ಪ್ರಕಾರ ಕರ್ನಾಟಕದಲ್ಲಿ ಪ್ರತಿ ಐದು ದಿನಕ್ಕೊಬ್ಬ ದಲಿತ ವ್ಯಕ್ತಿಯ ಕೊಲೆಯಾದರೆ, ಎರಡು ದಿನಕ್ಕೊಂದು ದಲಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಯುತ್ತಿದೆ. ಆದರೆ ಶಿಕ್ಷೆಯಾಗುತ್ತಿರುವ ಆರೋಪಿಗಳ ಪ್ರಮಾಣ ಬೆರಳೆಣಿಕೆ ಮಾತ್ರ ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ ಶೇ. 11.92ರಷ್ಟು ಹೆಚ್ಚಾಗಿವೆ. ಆದರೆ ಆರೋಪಿಗಳಿಗೆ ಶಿಕ್ಷೆಯಾಗುವ ಪ್ರಮಾಣ ಕೇವಲ ಶೇ.3.79ರಷ್ಟು ಮಾತ್ರ. ಇತ್ತೀಚಿನ ವರ್ಷಗಳಲ್ಲಿ ಕೊಲೆ ಯತ್ನದ ಪ್ರಕರಣಗಳು ಕಡಿಮೆಯಾದರೂ, ಅತ್ಯಾಚಾರದ ಪ್ರಕರಣಗಳು ಮಾತ್ರ ಹೆಚ್ಚಾಗುತ್ತಲೇ ಇವೆ.

ಕಳೆದ ವರ್ಷ 2,140 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಕೇವಲ 121 ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ. ಉಳಿದವು ಇತ್ಯರ್ಥವಾಗಿಲ್ಲ. 375 ಪ್ರಕರಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ. ನ್ಯಾಯಾಲಯದ ಮೆಟ್ಟಿಲೇರಿದ ಪ್ರಕರಣಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಈ ವರ್ಷ ಶೇ29.57ರಷ್ಟು ಹೆಚ್ಚಾಗಿವೆ. ಬೆಂಗಳೂರು ನಗರದಲ್ಲಿಯೇ ಹೆಚ್ಚು ದೌರ್ಜನ್ಯಗಳು ದಾಖಲಾಗಿವೆ ಎನ್ನುತ್ತಿವೆ ಅಂಕಿಅಂಶಗಳು.

ಈ ಎಲ್ಲಾ ಅಂಕಿಅಂಶಗಳು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಮಾಹಿತಿಯನ್ನು ಆಧರಿಸಿ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ನೀಡುವ ಅಂಕಿಅಂಶಗಳು. ಇನ್ನು ಈ ದೇಶ ಹಲವು ರಾಜ್ಯಗಳ ಅನೇಕ ಕುಗ್ರಾಮಗಳಲ್ಲಿ ಹೆಣ್ಣುಮಕ್ಕಳ ಮೇಲಾಗುವ ಅತ್ಯಾಚಾರ ಕೊಲೆಗಳು ಅಲ್ಲಲ್ಲಿನ ಪಂಚಾಯಿತಿ ಕಟ್ಟೆಗಳಲ್ಲೇ ಸದ್ದಿಲ್ಲದೆ ಬಗೆಹರಿದುಬಿಡುತ್ತವೆ ಅಂದರೆ ಸಂತ್ರಸ್ತರ ದನಿಯನ್ನು ಅಡಗಿಸಿ ಮೌನವಾಗಿಸಲಾಗುತ್ತಿದೆ. ದಾಖಲಾಗುವ ಪ್ರಕರಣಗಳ ಸಂಖ್ಯೆಗಿಂತ ಹೀಗೆ ದಾಖಲಾಗದೆ ಉಳಿದ ಸಂಖ್ಯೆಯೇ ಹೆಚ್ಚು ಎನ್ನಲಾಗುತ್ತಿದೆ.

ಮಿಸ್ರಿಯಾ

ಭಾರತದಲ್ಲಿ ದಲಿತರ ಮೇಲಿನ ಇಂತಹ ದೌರ್ಜನ್ಯಗಳನ್ನು ತಡೆಯುವ ಸಲುವಾಗಿಯೇ ಕಟ್ಟುನಿಟ್ಟಿನ ಕಾನೂನುಗಳನ್ನು ರಚಿಸಲಾಗಿದೆ. ಆದರೆ, ಕಾನೂನು ರಚನೆ ಮಾಡಿದವರು ಈವರೆಗೆ ಈ ಕಾನೂನನ್ನು ತಳಮಟ್ಟದ ಜನರ ರಕ್ಷಣೆಗೆ ನಿಖರವಾಗಿ ಮತ್ತು ಸಂಪೂರ್ಣವಾಗಿ ಬಳಸದಂತೆ ಮಾಡಿರುವುದು ವಿಪರ್ಯಾಸ. ಪರಿಣಾಮ ದಿನದ ಸರಾಸರಿ ದಲಿತರ ಸಾವಿನ ಅಂಕಿ ಏರುತ್ತಲೇ ಇದೆ. ಡಾ. ಅಂಬೇಡ್ಕರ್ ಅವರ ಮುಂದಾಳತ್ವದಲ್ಲಿ ಮೂಡಿದ ಸಂವಿಧಾನಕ್ಕೆ ಬೆಲೆ ಸಿಕ್ಕುವ ದಿನಗಳು ಬರುವುದೆಂದು? ಅಂಬೇಡ್ಕರ್ ಅವರನ್ನು ಹಿಂದುತ್ವದ ತೆಕ್ಕೆಗೆ ತೆಗೆದುಕೊಳ್ಳಲು ಹಗಲು ರಾತ್ರಿ ಎನ್ನದೆ ಕೆಲಸ ಮಾಡುತ್ತಿರುವ ಸಂಘ ಪರಿವಾರದವರು ದಲಿತರ ದೌರ್ಜನ್ಯಗಳು ಮತ್ತು ಕೊಲೆಗಳ ಬಗ್ಗೆ ಸೊಲ್ಲೆತ್ತದೆ ಇರುವುದೇಕೆ? ಸರ್ವರ ಶ್ರೇಯೋಭಿವೃದ್ಧಿಯ ಬಗ್ಗೆ ಭಾಷಣ ಬಿಗಿರುವ ರಾಜಕಾರಿಣಿಗಳು ‘ಅಭಿವೃದ್ಧಿ’ ಪದವನ್ನು ಪಠಿಸುವ ಸಮಯದ ಒಂದಂಶದಲ್ಲಿ ದೇಶವನ್ನು ಹಿಂದಕ್ಕೆ ತೆಗೆದುಕೊಂಡು ಹೋಗುತ್ತಿರುವ ಈ ವಿದ್ಯಮಾನಗಳ ಬಗ್ಗೆ ತಲೆಕೆಡಿಸಿಕೊಂಡರೆ ಅವರ ಅಭಿವೃದ್ಧಿ ಗಿಣಿಪಾಠಕ್ಕೆ ಅರ್ಥ ಬಂದೀತು.


ಇದನ್ನು ಓದಿ: ಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತ ಸಮುದಾಯದ ಮೇಲೆ ಆಗುತ್ತಿರುವ ದೌರ್ಜನ್ಯ ಪ್ರಕರಣಗಳು ಈ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯಕೃತ್ಯ ಎಂದು ಈ ಲೇಖನದಲ್ಲಿ ಮೂಡಿಬಂದಿದೆ ಈ ಪತ್ರಿಕೆಗೆ ಮತ್ತು ಲೇಖಕರಿಗೆ ಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...