ಹಾವೇರಿ ಜಿಲ್ಲೆಯಲ್ಲಿ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ಮಹಿಳೆ ಮೇಲೆ ಹಲ್ಲೆ ನಡೆದಿದೆ. ಮಹಿಳೆಯ ಮಗ ಮಂಜುನಾಥ್ ಎಂಬಾತ ಅದೇ ಗ್ರಾಮದ ಬೇರೆ ಜಾತಿಯ ಯುವತಿಯೊಬ್ಬಳನ್ನು ಪ್ರೀತಿಸಿ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಯುವತಿಯ ಸಂಬಂಧಿಕರು ಅಕೆಯನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ವರದಿಯಾಗಿದೆ. ಈ ಕುರಿತ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿದೆ.
ಜಾತಿ ದೌರ್ಜನ್ಯ ಕೊನೆಯಾಗಲಿ. ಆರೋಪಿಗಳಿಗೆ ಶಿಕ್ಷೆ ಆಗಲಿ pic.twitter.com/SMAefUwZxN
— Mutturaju (@Mutturaju7) May 3, 2024
ಅರೆಮಲ್ಲಾಪುರ ಗ್ರಾಮದ ಚಂದ್ರಪ್ಪ, ಗಂಗಪ್ಪ, ಗುತ್ತೆವ್ವ ಹಲ್ಲೆ ಮಾಡಿದ ಆರೋಪಿಗಳು ಎಂದು ಹೇಳಾಗ್ತಿದೆ. ಹಲ್ಲೆಗೊಳಗಾದ ಮಹಿಳೆಯ ಮಗ ಯುವತಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದಾನೆ ಮತ್ತು ಚಿನ್ನಾಭರಣ ದೋಚಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಗೊಂಡ ಮಹಿಳೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ಮೆರವಣಿಗೆ ಮಾಡಿದ ಅಮಾನುಷ ಘಟನೆ ಕೆಲ ತಿಂಗಳ ಹಿಂದೆ ನಡೆದಿತ್ತು.
ಇದನ್ನೂ ಓದಿ : ಮಹಿಳೆಯ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ


