Homeಮುಖಪುಟಐಷಾರಾಮಿ ಕಾರು ಕಳುಹಿಸದ್ದಕ್ಕೆ ರಾಜ್ಯಪಾಲರ ಪುತ್ರನಿಂದ ಹಲ್ಲೆ: ಒಡಿಶಾ ರಾಜಭವನ ಸಿಬ್ಬಂದಿ ಆರೋಪ

ಐಷಾರಾಮಿ ಕಾರು ಕಳುಹಿಸದ್ದಕ್ಕೆ ರಾಜ್ಯಪಾಲರ ಪುತ್ರನಿಂದ ಹಲ್ಲೆ: ಒಡಿಶಾ ರಾಜಭವನ ಸಿಬ್ಬಂದಿ ಆರೋಪ

- Advertisement -
- Advertisement -

ಪುರಿ ರೈಲು ನಿಲ್ದಾಣದಿಂದ ಕರೆದುಕೊಂಡು ಬರಲು ಐಷಾರಾಮಿ ಕಾರುಗಳನ್ನು ಕಳುಹಿಸದ ಕಾರಣಕ್ಕೆ ಒಡಿಶಾ ರಾಜ್ಯಪಾಲರ ಪುತ್ರ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಒಡಿಶಾ ರಾಜಭವನದ ಸಿಬ್ಬಂದಿಯೊಬ್ಬರು ಆರೋಪಿಸಿದ್ದಾರೆ.

ರಾಜ್ಯಪಾಲ ರಘುಬರ್ ದಾಸ್ ಅವರ ಪುತ್ರ ಹಲ್ಲೆ ನಡೆಸಿರುವುದಾಗಿ ಅಧಿಕಾರಿ ಬೈಕುಂಠ ಪ್ರಧಾನ್ ತಿಳಿಸಿದ್ದಾರೆ.

ಬೈಕುಂಠ ಪ್ರಧಾನ್ ರಾಜಭವನದಲ್ಲಿ ರಾಜ್ಯಪಾಲರ ಸಚಿವಾಲಯದ ಗೃಹ ವಿಭಾಗದ ಸಹಾಯಕ ವಿಭಾಗ ಅಧಿಕಾರಿಯಾಗಿದ್ದಾರೆ. ಪುರಿಯ ರಾಜಭವನ ಆವರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯ ಸಿದ್ಧತೆಯ ಮೇಲ್ವಿಚಾರಣೆಗೆ ತನ್ನನ್ನು ನಿಯೋಜಿಸಿದ್ದ ಸಂದರ್ಭದ, ಜುಲೈ 7ರಂದು ರಾತ್ರಿ ರಾಜ್ಯಪಾಲ ರಘುಬರ್ ದಾಸ್ ಅವರ ಪುತ್ರ ಲಲಿತ್ ಕುಮಾರ್ ಮತ್ತು ಇತರ ಐವರು ತನಗೆ ಕಪಾಳಮೋಕ್ಷ ಮಾಡಿ, ಹೊಡೆದು, ಒದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ಜುಲೈ 10ರಂದು ಪ್ರಧಾನ್ ಅವರು ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಲಿಖಿತ ದೂರನ್ನು ಸಲ್ಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ಮಾಹಿತಿ ಪಡೆಯಲು ರಾಜಭವನದ ಅಧಿಕಾರಿಗಳು ಮತ್ತು ಪ್ರಧಾನ ಕಾರ್ಯದರ್ಶಿ ಸಾಸ್ವತ್ ಮಿಶ್ರಾ ಅವರಿಗೆ ಕರೆಮಾಡಿ, ಸಂದೇಶ ಕಳುಹಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೂರಿನಲ್ಲಿ, “ಪುರಿಯ ರಾಜಭವನದ ಉಸ್ತುವಾರಿಯಾಗಿರುವ ನಾನು ಜುಲೈ 7-8ರಂದು ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯ ಸಿದ್ಧತೆಯನ್ನು ಮೇಲ್ವಿಚಾರಣೆ ಮಾಡಲು ಜುಲೈ 5ರಿಂದ ಭುವನೇಶ್ವರದ ರಾಜಭವನದಲ್ಲಿದ್ದೆ. ಜುಲೈ 7ರಂದು ರಾತ್ರಿ 11.45 ರ ಸುಮಾರಿಗೆ ಕಚೇರಿ ಕೊಠಡಿಯಲ್ಲಿ ಕುಳಿತಿದ್ದಾಗ, ರಾಜ್ಯಪಾಲರ ವೈಯಕ್ತಿಕ ಅಡುಗೆಯವರು ಬಂದು ಕುಮಾರ್ ಅವರನ್ನು ತಕ್ಷಣ ನೋಡಬೇಕೆಂದು ಹೇಳಿದರು” ಎಂದು ತಿಳಿಸಿದ್ದಾರೆ.

“ಕುಮಾರ್ ನನ್ನನ್ನು ನೋಡಿದ ತಕ್ಷಣ ನಿಂದಿಸಲು ಆರಂಭಿಸಿದರು. ಆಕ್ಷೇಪಾರ್ಹವಾದ ಭಾಷೆ ಬಳಸಿದರು. ನಾನು ಆಕ್ಷೇಪಿಸಿದಾಗ ನನಗೆ ಕಪಾಳಮೋಕ್ಷ ಮಾಡಿದ್ದಾರೆ. ನಾನು ಕೋಣೆಯಿಂದ ಹೊರಗೆ ಓಡಿ ಅನೆಕ್ಸ್‌ನ ಹಿಂದೆ ಅಡಗಿಕೊಂಡಿದ್ದೆ. ಆದರೆ, ಕುಮಾರ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳು ನನ್ನನ್ನು ಪತ್ತೆ ಹೆಚ್ಚಿ ಲಿಫ್ಟ್ ಮೂಲಕ ಕೋಣೆಗೆ ಎಳೆದೊಯ್ದಿದ್ದಾರೆ” ಎಂದು ಪ್ರಧಾನ್ ಆರೋಪಿಸಿದ್ದಾರೆ.

“ಭದ್ರತಾ ಸಿಬ್ಬಂದಿ ಮತ್ತು ಅಲ್ಲಿದ್ದ ಇತರರು ಈ ಘಟನೆಗೆ ಸಾಕ್ಷಿಯಾಗಿದ್ದಾರೆ. ಕುಮಾರ್ ನನಗೆ ಮತ್ತೆ ಕಪಾಳಮೋಕ್ಷ ಮಾಡಿದರು. ನನ್ನ ಮುಖದ ಮೇಲೆ ಗುದ್ದಿದರು. ನನ್ನ ದೇಹದ ಪ್ರತಿಯೊಂದು ಭಾಗಕ್ಕೂ ಒದ್ದಿದ್ದಾರೆ. ನನ್ನ ಎಡ ಪಾದವನ್ನು ತಿರುಚಿದರು. ನನ್ನನ್ನು ಕೊಂದರೆ ಯಾರೂ ನನ್ನನ್ನು ಉಳಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು” ಎಂದು ಹೇಳಿದ್ದಾರೆ.

“ಈ ಬಗ್ಗೆ ಜುಲೈ 8ರಂದು ಸಂಜೆ 4.30ಕ್ಕೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಮೌಖಿಕವಾಗಿ ವಿವರಿಸಿದ್ದು, ಜುಲೈ 10ರಂದು ಪತ್ರವನ್ನು ಮೇಲ್ ಮಾಡಿದ್ದೇನೆ” ಎಂದು ಪ್ರಧಾನ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಶುಕ್ರವಾರ ಭುವನೇಶ್ವರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನ್ ಅವರ ಪತ್ನಿ ಸಯೋಜ್, “ಜುಲೈ 11ರಂದು ಸೀ ಬೀಚ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದೆವು. ಆದರೆ ನಮ್ಮ ದೂರು ಸ್ವೀಕರಿಸಿಲ್ಲ. ಆದ್ದರಿಂದ, ನಾವು ದೂರನ್ನು ಪೊಲೀಸರಿಗೆ ಮೇಲ್ ಮಾಡಿದ್ದೇವೆ” ಎಂದು ಹೇಳಿದರು.

ಪುರಿ ರೈಲ್ವೆ ನಿಲ್ದಾಣದಲ್ಲಿ ತಮ್ಮನ್ನು ಬರಮಾಡಿಕೊಳ್ಳಲು ಎರಡು ಐಷಾರಾಮಿ ವಾಹನಗಳನ್ನು ಕಳುಹಿಸದಿರುವುದಕ್ಕೆ ಪ್ರಧಾನ್ ಮೇಲೆ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತನ್ನ ಪಾದರಕ್ಷೆಯನ್ನು ನೆಕ್ಕಲು ಕುಮಾರ್ ಹೇಳಿದ್ದಾರೆ ಎಂದೂ ಕೂಡಾ ದೂರಿನಲ್ಲಿ ಆರೋಪಿಸಲಾಗಿದೆ. ಇನ್ನು ಪುರಿ ಪೊಲೀಸ್ ವರಿಷ್ಠಾಧಿಕಾರಿ ಪಿನಾಕ್ ಮಿಶ್ರಾ ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.

“ನನ್ನ ಪತಿಯನ್ನು ರಾಷ್ಟ್ರಪತಿಗಳ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ. ರಾಜ್ಯಪಾಲರ ಮಗನ ಸೇವೆಗಾಗಿ ಅಲ್ಲ” ಎಂದು ಸಯೋಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಧಾನ್ ಅವರು ಜುಲೈ 10 ರಂದು ರಾಜ್ಯಪಾಲರು ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆಯ ಬಗ್ಗೆ ಚರ್ಚಿಸಿದ್ದಾರೆ. ಆದರೆ, ಈ ವೇಳೆ ಅವರ ನಡವಳಿಕೆಯನ್ನೇ ಬದಲಾಯಿಕೊಳ್ಳಲು ಸೂಚಿಸಿದ್ದಾರೆ. 2019 ರಲ್ಲಿ ಎಎಸ್‌ಒ ಕೆಲಸಕ್ಕೆ ನೇಮಕ ಆಗುವ ಮುನ್ನ ಪ್ರಧಾನ್ ಸುಮಾರು 20 ವರ್ಷಗಳ ಕಾಲ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ಸಯೋಜ್ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ವರದಿ ಹಂಚಿಕೊಂಡಿರುವ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಈ ಪ್ರಕರಣದಲ್ಲಿ ಯಾರು ಕ್ರಮ ಕೈಗೊಳ್ಳಲಿದ್ದಾರೆ? ಮೋದಿ ಈ ರಾಜ್ಯಪಾಲರನ್ನು ವಜಾಗೊಳಿಸಬಹುದೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ : ಕಾಂಗ್ರೆಸ್ ದಲಿತ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...