Homeಮುಖಪುಟವಿಧಾನಸಭೆ ಉಪಚುನಾವಣೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು?

ವಿಧಾನಸಭೆ ಉಪಚುನಾವಣೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು?

- Advertisement -
- Advertisement -

ದೇಶದ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಜೂನ್. 23) ಪ್ರಕಟಗೊಂಡಿದೆ.

ಗುಜರಾತ್‌ನ ಕಾಡಿ ಮತ್ತು ವಿಸಾವದರ್, ಕೇರಳದ ನಿಲಂಬೂರ್, ಪಶ್ಚಿಮ ಬಂಗಾಳದ ಕಾಳಿಗಂಜ್, ಮತ್ತು ಪಂಜಾಬ್‌ನ ಲುದಿಯಾನ ಪಶ್ಚಿಮ ಕ್ಷೇತ್ರಗಳಿಗೆ ಜೂನ್ 19ರಂದು ಮತದಾನ ನಡೆದಿತ್ತು.

ಕೇರಳದಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿ ಆರ್ಯಡನ್ ಶೌಕತ್ ಅವರು 11, 077 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಶೌಕತ್ ಅವರು 77,737 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಆಡಳಿತರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಮೈತ್ರಿಕೂಟದ ಸಿಪಿಐ(ಎಂ) ಅಭ್ಯರ್ಥಿ ಎಂ. ಸ್ವರಾಜ್ 66,660 ಮತಗಳನ್ನು ಗಳಿಸಿದ್ದಾರೆ.

ಇನ್ನುಳಿದಂತೆ, ಬಿಜೆಪಿ ಅಭ್ಯರ್ಥಿ ಮೋಹನ್ ಜಾರ್ಜ್ 8,648 ಮತಗಳನ್ನು ಗಳಿಸಿದರೆ, ಎಸ್‌ಡಿಪಿಐನ ಸಾದಿಕ್ ನಡುತೊಡಿ 2,075 ಮತಗಳನ್ನು ಪಡೆದುಕೊಂಡಿದ್ದಾರೆ. 630 ನೋಟಾ ಮತಗಳು ಚಲಾವಣೆ ಆಗಿವೆ. ಒಟ್ಟು 10 ಅಭ್ಯರ್ಥಿಗಳು ನಿಲಂಬೂರ್‌ ಕಣದಲ್ಲಿದ್ದರು.

ಗುಜರಾತ್‌ನ ಕಾಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಂದ್ರ ಕುಮಾರ್ (ರಾಜುಭಾಯಿ) ದಾನೇಶ್ವರ್ ಛಾವ್ಡ 39, 452 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮೇಶ್‌ಭಾಯಿ ಛಾವ್ಡ ವಿರುದ್ದ ಗೆಲುವು ದಾಖಲಿಸಿದ್ದಾರೆ. ದಾನೇಶ್ವರ್ ಛಾವ್ಡ 99,742 ಮತಗಳನ್ನು ಪಡೆದುಕೊಂಡಿದ್ದು, ರಮೇಶ್ಭಾಯಿ ಛಾವ್ಡ 60,290 ಮತಗಳನ್ನು ಗಳಿಸಿದ್ದಾರೆ.

ಇನ್ನುಳಿದಂತೆ ಆಮ್‌ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಛಾವ್ಡ ಜಗದೀಶ್‌ಭಾಯಿ ಛಾವ್ಡ 3090 ಮತಗಳನ್ನು ಪಡೆದರೆ, ಪ್ರಜಾಶಕ್ತಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಡಾ.ಗಿರೀಶ್‌ಭಾಯಿ ಜೀತಾಭಾಯಿ ಕಪಾಡಿಯಾ 1335 ಮತಗಳನ್ನು ಪಡೆದಿದ್ದಾರೆ.

ಗುಜರಾತ್‌ನ ಮತ್ತೊಂದು ಕ್ಷೇತ್ರ ವಿಸಾವದರ್‌ನಲ್ಲಿ ಎಎಪಿ ಅಭ್ಯರ್ಥಿ ಇಟಾಲಿಯಾ ಗೋಪಾಲ್ 17,554 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕಿರಿತ್ ಪಟೇಲ್ ವಿರುದ್ದ ಗೆಲುವು ದಾಖಲಿಸಿದ್ದಾರೆ. ಇಟಾಲಿಯಾ ಗೋಪಾಲ್ ಅವರು 75,942 ಮತಗಳನ್ನು ಪಡೆದರೆ, ಕಿರಿತ್ ಪಟೇಲ್ 58,388 ಮತಗಳನ್ನು ಗಳಿಸಿದ್ದಾರೆ.

ಇನ್ನುಳಿದಂತೆ ಕಾಂಗ್ರೆಸ್ ಅಭ್ಯರ್ಥಿ ನಿತಿನ್ ರಾನ್‌ಪರಿಯ ಅವರು 5,501 ಮತಗಳನ್ನು ಪಡೆದಿದ್ದು, ಸ್ವತಂತ್ರ ಅಭ್ಯರ್ಥಿ ಹಿತೇಶ್‌ಭಾಯಿ ಪ್ರೇಮ್‌ಜಿಭಾಯಿ ವಾಘಸಿಯಾ ಅವರು 3,224 ಮಗಳನ್ನು ಪಡೆದಿದ್ದಾರೆ.

ಪಂಜಾಬ್‌ನ ಲುದಿಯಾನ ಪಶ್ಚಿಮ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಸಂಜೀವ್ ಅರೋರ ಅವರು 10,637 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರತ್ ಭೂಷಣ್ ಅಶು ವಿರುದ್ದ ಜಯಗಳಿಸಿದ್ದಾರೆ. ಸಂಜೀವ್ ಅರೋರ ಅವರು 35,179 ಮತಗಳನ್ನು ಪಡೆದರೆ, ಭರತ್ ಭೂಷಣ್ 24, 542 ಮತಗಳನ್ನು ಗಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಜೀವನ್ ಗುಪ್ತಾ ಅವರು 20,323 ಮತಗಳೊಂದಿಗೆ ಮೂರನೇ ಸ್ಥಾನ ಪಡೆದಿದ್ದು, ಶಿರೋಮಣಿ ಅಕಾಲಿದಳದ ಅಭ್ಯರ್ಥಿ ಅಡ್ವೊಕೇಟ್ ಪರೂಪ್‌ಕಾರ್ ಸಿಂಗ್ ಘುಮಾನ್ ಅವರು 8,203 ಮತಗಳೊಂದಿಗೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಪಶ್ಚಿಮ ಬಂಗಾಳದ ಕಾಳಿಗಂಜ್‌ ಕ್ಷೇತ್ರದಲ್ಲಿ ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಅಲೀಫಾ ಅಹ್ಮದ್ ಅವರು 500,49 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಆಶಿಷ್ ಘೋಶ್ ವಿರುದ್ದ ಜಯಗಳಿಸಿದ್ದಾರೆ. ಅಲೀಫಾ ಅವರು 102,759 ಮತಗಳನ್ನು ಪಡೆದರೆ, ಆಶಿಶ್ ಘೋಷ್ 52,710 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಬೀಲುದ್ದೀನ್ ಶೈಖ್ 28,348 ಮತಗಳನ್ನು ಗಳಿಸಿದ್ದಾರೆ.

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...