HomeಮುಖಪುಟElection Results 2021 Live Updates: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಮತ ಎಣಿಕೆ ಇದುವರೆಗೂ

Election Results 2021 Live Updates: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಮತ ಎಣಿಕೆ ಇದುವರೆಗೂ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಬಹುನಿರೀಕ್ಷಿತ ಪಂಚರಾಜ್ಯ ಚುನಾವಣೆಗಳ ಮತ ಎಣಿಕೆ ಇಂದು ನಡೆಯುತ್ತಿದೆ. ಚುನಾವಣೋತ್ತರ ಸಮೀಕ್ಷೆಗಳು ತಮಿಳುನಾಡಿನಲ್ಲಿ ಮಾತ್ರ ಆಡಳಿತ ಬದಲಾವಣೆ ಎಂದು ಹೇಳಿದ್ದವು. ಇದರ ಜೊತೆಗೆ ರಾಜ್ಯದ ಒಂದು ಲೋಕಸಭೆ ಮತ್ತು ಎರಡು ವಿಧಾನಸಭೆಯ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.

ಪ್ರಸ್ತುತ ಎಣಿಕೆಯಂತೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಬಿಜೆಪಿ ಭಾರಿ ಜಿದ್ದಾಜಿದ್ದಿನ ಹೋರಾಟದಲ್ಲಿದೆಯಾದರೂ ಟಿಎಂಸಿ ಪಕ್ಷ ಮುನ್ನಡೆಯಲ್ಲಿದೆ. ಕೇರಳದಲ್ಲಿ ನಿರೀಕ್ಷೆಯಂತೆ ಎಡಪಕ್ಷಗಳ ಒಕ್ಕೂಟ ಮುನ್ನಡೆಯಲ್ಲಿದೆ. ಆದರೆ ವಿಶೇಷವೇನೆಂದರೆ ಬಿಜೆಪಿ ಅಲ್ಲಿ ಎರಡು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ತಮಿಳುನಾಡಿನಲ್ಲಿ ಆಡಳಿತ ಪಕ್ಷವಾದ ಎಐಎಡಿಎಂಕೆ ಈ ಭಾರಿ ಮುಗ್ಗರಿಸಲಿದೆ ಎಂದು ಸಮೀಕ್ಷೆಗಳು ತಿಳಿಸಿದ್ದವು, ಅದರಂತೆ ಅದು ಹಿನ್ನಡೆಯಲ್ಲಿದ್ದು, ವಿರೋಧ ಪಕ್ಷವಾದ ಡಿಎಂಕೆ ಭಾರಿ ಮುನ್ನಡೆಯಲ್ಲಿದೆ.

ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ಅಸ್ಸಾಂನಲ್ಲಿ ನಿರೀಕ್ಷೆಯಂತೆ ಬಿಜೆಪಿ ಮುನ್ನಡೆಯಲ್ಲಿದೆ. ಪುದುಚೇರಿಯಲ್ಲಿ ಇತ್ತೀಚೆಗೆ ಬಿಜೆಪಿ ಆಪರೇಷನ್ ಕಮಲ ಮೂಲಕ ಅಲ್ಲಿನ ಸರ್ಕಾರವನ್ನು ಕೆಡವಿತ್ತು. ಆದರೆ ಅಲ್ಲಿಯೂ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದ್ದು ಒಂದು ಸ್ಥಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಕರ್ನಾಟಕದಲ್ಲಿ ನಡೆದ ಎರಡು ವಿಧಾನಸಭಾ ಉಪಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಒಂದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಪಶ್ಚಿಮಬಂಗಾಳ

ರಾಜ್ಯದಲ್ಲಿ ಒಟ್ಟು 292 ಕ್ಷೇತ್ರಗಳ ಮತ ಎಣಿಕೆ ಇಂದು ನಡೆಯಲಿದೆ. ಅದರಲ್ಲಿ ಇದುವರೆಗೂ 238 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಟಿಎಂಸಿ 150 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಬಿಜೆಪಿ 86 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಕಾಂಗ್ರೆಸ್ ಮತ್ತು ಎಡಪಕ್ಷಗಳ ಒಕ್ಕೂಟ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಇತರೆ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ:ಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

ಕೇರಳ

ರಾಜ್ಯದ 140 ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಸಿಪಿಎಂ ನೇತೃತ್ವದ ಎಲ್‌ಡಿಎಫ್‌ 94 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಕಾಂಗ್ರೆಸ್ ನೇತೃತ್ವದ ಯುಡಿಎಫ್‌ 45 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ 2 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ತಮಿಳುನಾಡು

234 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಇದುವರೆಗೂ 227 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಡಿಎಂಕೆ ನೇತೃತ್ವದ ಒಕ್ಕೂಟವು 129 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಎಐಎಡಿಎಂಕೆ ನೇತೃತ್ವದ ಒಕ್ಕೂಟ 98 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.(ಇದರಲ್ಲೇ ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆ)
ಕಮಲ್ ಹಾಸನ್ ನೇತೃತ್ವದ ಎಮ್‌ಎನ್‌ಎಮ್‌ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಅಸ್ಸಾಂ

126 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಇದುವರೆಗೂ 110 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಬಿಜೆಪಿ ಮೈತ್ರಿ ಕೂಟ 70 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಕಾಂಗ್ರೆಸ್ ಮೈತ್ರಿ ಕೂಟ 39 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಇತರೆ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ಪುದುಚೇರಿ

30 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಇದುವರೆಗೂ 16 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಬಿಜೆಪಿ ಮೈತ್ರಿ ಕೂಟ 11 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಕಾಂಗ್ರೆಸ್ ಮೈತ್ರಿ ಕೂಟ 4 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಇತರೆ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ಇದನ್ನೂ ಓದಿ: Explainer: ಸದ್ಯಕ್ಕೆ ಲಭ್ಯವಿರುವ ಲಸಿಕೆಗಳೆಷ್ಟು? ತಡವಾಗಲು ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...