Homeಮುಖಪುಟಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

ಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

'ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟ ಏರಿಕೆಯಾದಂತೆ ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ'

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಮಹಿಳಾ ಶಕ್ತಿ ಹಿಡಿತ ಸಾಧಿಸಿದ್ದು, ಉತ್ತರಾಖಂಡ ಮತ್ತು ಗೋವಾದಲ್ಲಿ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರ ಮತಗಳು ಹೆಚ್ಚಾಗಿವೆ. ಮಣಿಪುರದಲ್ಲಿ ಮೊದಲ ಹಂತದಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ ಆರನೇ ಹಂತದವರೆಗಿನ ಮತದಾನದಲ್ಲಿ ಮಹಿಳೆ ಮತದಾರ ಸಂಖ್ಯೆ ಹೆಚ್ಚಿದೆ. ಅಲ್ಲದೆ, ಪಂಜಾಬ್‌ನಲ್ಲಿ ಪುರುಷ ಮತ್ತು ಮಹಿಳಾ ಮತಗಳು ಬಹುತೇಕ ಸಮಾನಾಗಿದ್ದು, ಮಹಿಳೆಯರಿಗಿಂತ ಪುರುಷರ ಮತಗಳ ಸಂಖ್ಯೆ ಕೇವಲ 0.08% ಹೆಚ್ಚಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರ ನಂತರ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಇತ್ತೀಚೆಗೆ ನಡೆದ ಆರನೇ ಹಂತದ ಮತದಾನದಲ್ಲಿಯೂ ಮಹಿಳೆಯರು 62.62% ಮತ್ತು ಪುರುಷರು 51.03% ರಷ್ಟು ಮತ ಚಲಾಯಿಸಿದ್ದಾರೆ. ಆದರೂ, ಯುಪಿಯಲ್ಲಿ ಎಲ್ಲಾ ಆರು ಹಂತಗಳಲ್ಲಿ ಮಹಿಳಾ ಮತದಾನದ ಪ್ರಮಾಣವು 2017 ಕ್ಕಿಂತ ಕಡಿಮೆಯಾಗಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶ ತಿಳಿಸುತ್ತದೆ.

ಹೆಚ್ಚಿನ ಮತಗಳನ್ನು ದಾಖಲಿಸುತ್ತಿರುವ ಮಹಿಳಾ ಮತಗಳ ಟ್ರೆಂಡ್ 7ನೇ ಹಂತದ ಚುನಾವಣೆಯಲ್ಲೂ ಮುಂದುವರೆಯುವುದೇ ಎಂಬುದನ್ನು ನೋಡಬೇಕಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಇತರ ರಾಜ್ಯಗಳ ಚುನಾವಣೆಯಲ್ಲಿಯೂ ಮಹಿಳಾ ಶಕ್ತಿ ತಮ್ಮ ಪ್ರಾತಿನಿಧ್ಯವನ್ನು ಮುನ್ನೆಲೆಗೆ ತರುವುದೇ ಎಂಬ ಕುತೂಹಲವನ್ನು ಹುಟ್ಟುಹಾಕಿವೆ.

ಕಳೆದ ದಶಕದಿಂದೀಚೆಗೆ, ಬಿಹಾರದಂತಹ ರಾಜ್ಯಗಳಲ್ಲಿಯೂ ಸಹ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 2010 ರಲ್ಲಿ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವು ಸಾಧಿಸುವಲ್ಲಿ ಮಹಿಳಾ ಮತದಾರರು ನಿರ್ಣಾಯಕ ಪಾತ್ರವಹಿಸಿದ್ದಾರೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ – ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

“ಚುನಾವಣಾ ರಾಜಕಾರಣದ ಮತದಾನದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಹೆಚ್ಚಳವು 2014 ರಿಂದ ಅಥವಾ ಅದಕ್ಕಿಂತ ಮುಂಚೆಯೇ ಕಂಡುಬಂದಿದೆ. ಯಾವುದೇ ಪಕ್ಷ ಅಥವಾ ರಾಜಕಾರಣಿಯ ಗೆಲುವಿಗೆ ಅವರ ಬೆಂಬಲವು ಭಾರೀ ಅತ್ಯಗತ್ಯವಾಗುತ್ತದೆ. ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟಗಳಲ್ಲಿ ಏರಿಕೆಯಾದಂತೆ ಅವರು ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗವು ಮಹಿಳೆಯರಿಗೆ ಹೆಚ್ಚು ಅನುಕೂಲಕರವಾದ ಚುನಾವಣಾ ವ್ಯವಸ್ಥೆಯನ್ನು ಮಾಡುವುದರ ಮೇಲೆ ಚುನಾವಣಾ ರಾಜಕಾರಣದಲ್ಲಿ ಮಹಿಳೆಯ ಪಾತ್ರವು ಕೇಂದ್ರೀಕರಿಸಿದೆ” ಎಂದು ರಾಜಕೀಯ ವಿಜ್ಞಾನಿ ಮತ್ತು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ (ಸಿಪಿಆರ್) ನಲ್ಲಿ ಸಹವರ್ತಿ ರಾಹುಲ್ ವರ್ಮಾ ಹೇಳುತ್ತಾರೆ.

ಆದರೂ, “ಮಹಿಳೆ ಮತ್ತು ಪುರುಷ ಮತದಾರರ ನಡುವಿನ ಈ ಗಮನಾರ್ಹ ಅಂತರದಲ್ಲಿ ನಾವು ಒಂದು ವಿಚಾರವನ್ನು ಗಮನಿಸಬೇಕಾಗುತ್ತದೆ. ಪುರುಷರಲ್ಲಿ ಕೆಲವರು ಉದ್ಯೋಗಕ್ಕಾಗಿ ರಾಜ್ಯಗಳನ್ನು ತೊರೆದು ವಲಸೆ ಹೋಗಿದ್ದಾರೆ. ಇದೂ ಕೂಡ ಮತದಾರರ ಶೇಕಡಾವಾರು ಬದಲಾವಣೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಮತದಾನದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಲು ಅಥವಾ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಲು ಚುನಾವಣಾ ಆಯೋಗವು ಕೆಲವು ಕ್ರಮಗಳನ್ನು ತೆಗೆದುಕೊಂಡಿತು. “1. ಹೆಚ್ಚಿನ ಮಹಿಳೆಯರನ್ನು ಮತಗಟ್ಟೆಗಳ ಅಧಿಕಾರಿಗಳನ್ನಾಗಿ ನೇಮಿಸಲಾಯಿತು. 2. ಮತಗಟ್ಟೆಗಳಲ್ಲಿ ಶಿಶುಪಾಲನಾ ಸೌಲಭ್ಯ. 3. ತಮ್ಮದೇ ಆದ ಸಾಮಾಜಿಕ-ಸಾಂಸ್ಕೃತಿಕ ಪರಿಸರದಲ್ಲಿ ಮತದಾನಕ್ಕೆ ಮಹಿಳೆಯರನ್ನು ಪ್ರೇರೇಪಿಸಲು ಬ್ಲಾಕ್ ಮಟ್ಟದ ಮಹಿಳಾ ಅಧಿಕಾರಿಗಳ ನೇಮಕ. 4. ಮತದಾನದಲ್ಲಿ ಇವಿಎಂಗಳ ಬಳಕೆಯು ಹೆಚ್ಚಿನ ಮಹಿಳೆಯರು ಮತದಾನ ಕೇಂದ್ರದಲ್ಲಿ ಸುರಕ್ಷಿತ ಮತದಾನ ಮಾಡುವಂತೆ ಮಾಡಿದೆ” ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುರುಷ ಮತ್ತು ಮಹಿಳಾ ಮತದಾನದ ನಡುವಿನ ವ್ಯತ್ಯಾಸವು ಉತ್ತರಾಖಂಡದಲ್ಲಿ ಹೆಚ್ಚು ಗಮನಾರ್ಹವಾಗಿದೆ. ಮಹಿಳಾ ಮತದಾರರ ಪೈಕಿ 67.2% ಮತದಾನವಾಗಿದ್ದು, 62.6% ಪುರುಷರ ಮತದಾನವಾಗಿದೆ. ಗೋವಾದಲ್ಲಿ 80.96% ಮಹಿಳಾ ಮತದಾನವಾಗಿದ್ದು, 78.19% ಪುರುಷರ ಮತದಾನವಾಗಿದೆ. ಮಣಿಪುರದಲ್ಲಿ ನಡೆದ ಮೊದಲ ಹಂತದ ಮತದಾನದಲ್ಲಿ 87.2% ಪುರುಷರು ಮತ್ತು 89.94% ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ಆದರೆ, ಪಂಜಾಬ್‌ನಲ್ಲಿ 2017ರ ಚುನಾವಣೆಯಲ್ಲಿ ಮಹಿಳಾ ಮತದಾನ 78.16% ದಾಖಲಿಸಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ 71.91% ಗೆ ಕುಸಿದಿದೆ.

ಕುತೂಹಲಕಾರಿಯಾಗಿ, ಲೈಂಗಿಕ ಅಲ್ಪಸಂಖ್ಯಾತರದ ಮತದಾನವು ಗೋವಾದಲ್ಲಿ 88.89%, ಮಣಿಪುರದಲ್ಲಿ 81.1%, ಪಂಜಾಬ್‌ನಲ್ಲಿ 23.61% ರಿಂದ 38.79%, ಉತ್ತರಾಖಂಡದಲ್ಲಿ 8.65% ರಿಂದ 25.35% ಗೆ ಏರಿಕೆಯಾಗಿದೆ ಮತ್ತು ಯುಪಿಯಲ್ಲಿ ಎಲ್ಲಾ ಹಂತಗಳಲ್ಲಿ ಗಮನಾರ್ಹ ಸುಧಾರಣೆಯನ್ನು ಕಂಡಿದೆ.

2017 ರ ಚುನಾವಣೆಗೆ ಹೋಲಿಸಿದರೆ, ಒಟ್ಟಾರೆ ಮತದಾನದ ಪ್ರಮಾಣವು ಪಂಜಾಬ್ (77.4% ರಿಂದ 71.95% ಕ್ಕೆ), ಉತ್ತರಾಖಂಡ (65.56% ರಿಂದ 65.37%) ಮತ್ತು ಗೋವಾ (81.27% ರಿಂದ 79.61%) ಕ್ಕೆ ಕುಸಿದಿದೆ. ಆದರೆ, ಮಣಿಪುರ 1 ನೇ ಹಂತದಲ್ಲಿ 85.9% ರಿಂದ 88.9% ಕ್ಕೆ ಏರಿಕೆಯಾಗಿದೆ. ಯುಪಿಯಲ್ಲಿ, 1, 2 ಮತ್ತು 6 ಹಂತಗಳಲ್ಲಿ ಒಟ್ಟಾರೆ ಮತದಾನವು 2017 ಕ್ಕಿಂತ ಕಡಿಮೆಯಾಗಿದೆ. ಆದರೆ, 3, 4 ಮತ್ತು 5 ನೇ ಹಂತದಲ್ಲಿ ಮತದಾನವು ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ.


ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...