Homeಕರ್ನಾಟಕವಿಧಾನಸಭೆ, ಸಂಸತ್ತಿನ ಅಧಿವೇಶನಗಳು ಪುನರಾರಂಭ : ಬಜೆಟ್ ಮೇಲೆ ಚರ್ಚೆ

ವಿಧಾನಸಭೆ, ಸಂಸತ್ತಿನ ಅಧಿವೇಶನಗಳು ಪುನರಾರಂಭ : ಬಜೆಟ್ ಮೇಲೆ ಚರ್ಚೆ

- Advertisement -
- Advertisement -

ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಇಂದಿನಿಂದ (ಮಾ.10) ಆರಂಭಗೊಂಡಿದ್ದು, ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಕುರಿತ ಚರ್ಚೆ ಶುರುವಾಗಿದೆ.

ಜನವರಿ 31ರಂದು ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗಿತ್ತು. ಅಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿದ ಬಳಿಕ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ್ದರು. ಮರುದಿನ, ಅಂದರೆ ಫೆಬ್ರವರಿ 1ರಂದು ವಿತ್ತ ಸಚಿವೆ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ಆ ಬಳಿಕ ಚರ್ಚೆಗಳು ನಡೆದು, ಫೆಬ್ರವರಿ 13ರಂದು ಮೊದಲ ಹಂತದ ಅಧಿವೇಶನ ಮುಕ್ತಾಯಗೊಂಡಿತ್ತು.

ಇಂದಿನಿಂದ (ಮಾ.10) ಎರಡನೇ ಹಂತದ ಅಧಿವೇಶನ ಆರಂಭಗೊಂಡಿದ್ದು, ಏಪ್ರಿಲ್ 4ರಂದು ಬಜೆಟ್ ಅಧಿವೇಶನ ಮುಕ್ತಾಯಗೊಳ್ಳಲಿದೆ.

ಕೇಂದ್ರವನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸಜ್ಜು

ಎರಡನೇ ಹಂತದ ಬಜೆಟ್ ಅಧಿವೇಶನದಲ್ಲಿ ಮತದಾರರ ಪಟ್ಟಿಗಳಲ್ಲಿ ಆಗಿರುವ ಅಕ್ರಮ, ವಕ್ಫ್ ಮಸೂದೆ, ಸಂಸದೀಯ ಕ್ಷೇತ್ರಗಳ ಪುನರ್‌ವಿಂಗಡನೆ ಮತ್ತು ಟ್ರಂಪ್ ಆಡಳಿತ ಭಾರತದ ಆಮದಿನ ಮೇಲೆ ಸುಂಕ ಹೇರಿರುವುದು ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಕಟ್ಟಿ ಹಾಕಲು ಈಗಾಗಲೇ ವಿಪಕ್ಷಗಳು ಸಜ್ಜಾಗಿವೆ.

ಕ್ಷೇತ್ರ ಪುನರ್‌ವಿಂಗಡನೆ ಮತ್ತು ಹಿಂದಿ ಹೇರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಗಳ ನಡುವೆ ಈಗಾಗಲೇ ಜಟಾಪಟಿ ಏರ್ಪಟ್ಟಿದೆ. ಈ ವಿಚಾರ ಮುಂದಿಟ್ಟುಕೊಂಡು ಸಂಸತ್ತಿನಲ್ಲಿ ಡಿಎಂಕೆ ಸಂಸದರು ಕೇಂದ್ರದ ವಿರುದ್ದ ಪ್ರತಿಭಟನೆ ವ್ಯಕ್ತಪಡಿಸುವ ಸಾಧ್ಯತೆ ಇದೆ.

ಕ್ಷೇತ್ರ ಪುನರ್‌ವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಮಾತ್ರವಲ್ಲ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಕೂಡ ಸಂಸದೀಯ ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದು, ಅಲ್ಲಿನ ಆಡಳಿತ, ಪ್ರತಿಪಕ್ಷಗಳಿಗೆ ಮನದಟ್ಟು ಮಾಡಿ ಕೇಂದ್ರದ ವಿರುದ್ದ ಪ್ರತಿಭಟನೆಗೆ ಇಳಿಸಲು ಡಿಎಂಕೆ ಯೋಜನೆ ರೂಪಿಸಿದೆ.

ವಕ್ಫ್‌ ಮಸೂದೆ ಮಂಡನೆ ಮತ್ತು ಪ್ರತಿಪಕ್ಷಗಳ ವಿರೋಧ

ಬಹು ಚರ್ಚಿತ ವಿಷಯವಾಗಿರುವ ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಕೇಂದ್ರ ಸರ್ಕಾರ ಈ ಬಾರಿಯ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ.

ವಕ್ಫ್‌ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಪ್ರಸ್ತಾಪಿಸಿದ 14 ತಿದ್ದುಪಡಿಗಳನ್ನು ಕೇಂದ್ರ ಸಚಿವ ಸಂಪುಟ ಕಳೆದ ವಾರ ಅನುಮೋದಿಸಿದೆ. ಜೆಪಿಸಿಯಲ್ಲಿ ಆಡಳಿತ ಪಕ್ಷದ ಸದಸ್ಯರು ಪ್ರಸ್ತಾಪಿಸಿದ ತಿದ್ದುಪಡಿಗಳನ್ನು ಮಾತ್ರ ಅನುಮೋದಿಸಲಾಗಿದೆ. ಪ್ರತಿಪಕ್ಷಗಳು ಕೋರಿದ ತಿದ್ದುಪಡಿಗಳಲ್ಲಿಎಲ್ಲವನ್ನು ತಿರಸ್ಕರಿಸಲಾಗಿದೆ. ಇದು ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ವಕ್ಫ್ ಮಸೂದೆಯನ್ನು ವಿರೋಧಿಸಲು ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ನಾಯಕರು ಇತರ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ವಕ್ಫ್‌ ತಿದ್ದುಪಡಿ ಮಸೂದೆಯ ವಿರುದ್ದ ಸಂಸತ್ತಿನ ಹೊರಗೆಯೂ ದೇಶದಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಭಾನುವಾರ (ಮಾ.9) ಮಂಗಳೂರು ನಗರದಲ್ಲೂ ಮುಸ್ಲಿಂ ಧಾರ್ಮಿಕ ನಾಯಕರ ನೇತೃತ್ವದಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಪ್ರತಿಭಟನೆ ನಡೆದಿದೆ.

ರಾಜ್ಯ ಬಜೆಟ್ ಅಧಿವೇಶನ

ಮಾರ್ಚ್ 3ರಂದು ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಾರಿ ಬರೋಬ್ಬರಿ 4 ಲಕ್ಷ ಕೋಟಿ ರೂಪಾಯಿ ಮೊತ್ತದ ಬಜೆಟ್ ಮಂಡಿಸಿದ್ದಾರೆ.

ಬಜೆಟ್ ಮಂಡನೆಯ ಬಳಿಕ ಮುಂದೂಡಿಕೆಯಾಗಿದ್ದ ಸದನ, ಇಂದಿನಿಂದ (ಮಾ.10) ಪುನರಾರಂಭಗೊಂಡಿದೆ. ಇಂದಿನಿಂದ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿವೆ. ಮಾರ್ಚ್ 21ರಂದು ಅಧಿವೇಶನ ಕೊನೆಗೊಳ್ಳಲಿದೆ.

ಸಿಎಂ ಸಿದ್ದರಾಮಯ್ಯ ಮಂಡಿಸಿದ ಈ ಬಾರಿಯ ಬಜೆಟ್‌ ಅನ್ನು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ‘ಹಲಾಲ್ ಬಜೆಟ್’ ‘ಪಾಕಿಸ್ತಾನಿ ಬಜೆಟ್’ ಎಂದೆಲ್ಲ ಟೀಕಿಸಿವೆ. ಬಜೆಟ್‌ನಲ್ಲಿ ಮುಸ್ಲಿಮರಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡಲಾಗಿದೆ ಎಂಬ ಸುಳ್ಳು ಆರೋಪವನ್ನು ಮಾಡಿದೆ. ಇದಕ್ಕೆ ಈಗಾಗಲೇ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಪ್ರತ್ಯುತ್ತರ ಕೊಟ್ಟಿದ್ದಾರೆ.

ಬಜೆಟ್ ಮೇಲಿನ ಚರ್ಚೆ ವೇಳೆ ‘ಮುಸ್ಲಿಂ ಪರ ಬಜೆಟ್’ ಎಂದು ಆರೋಪಿಸಿ ಬಿಜೆಪಿ ಸರ್ಕಾರದ ಮೇಲೆ ಮುಗಿಬೀಳುವುದು ದಟ್ಟವಾಗಿದೆ. ಇದನ್ನು ರಾಜ್ಯ ಸರ್ಕಾರ ಹೇಗೆ ಎದುರಿಸಲಿದೆ. ತನ್ನ ಬಜೆಟ್‌ ಅನ್ನು ಹೇಗೆ ಸಮರ್ಥಿಸಿಕೊಳ್ಳಿದೆ ಎಂಬುವುದನ್ನು ಕಾದು ನೋಡಬೇಕಿದೆ.

ಎನ್‌ಇಪಿ-ಕ್ಷೇತ್ರ ಪುನರ್‌ವಿಂಗಡಣೆ ನಿರ್ಣಯದ ಕುರಿತು ಸಭೆ ನಡೆಸಿದ ಡಿಎಂಕೆ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...