Homeಮುಖಪುಟವಿಧಾನಸಭೆ ಚುನಾವಣೆ: ಪಂಜಾಬ್‌ನಲ್ಲಿ ಮತದಾನ; ಯುಪಿಯಲ್ಲಿ ಅಖಿಲೇಶ್‌‌ಗೆ ಅಗ್ನಿಪರೀಕ್ಷೆ

ವಿಧಾನಸಭೆ ಚುನಾವಣೆ: ಪಂಜಾಬ್‌ನಲ್ಲಿ ಮತದಾನ; ಯುಪಿಯಲ್ಲಿ ಅಖಿಲೇಶ್‌‌ಗೆ ಅಗ್ನಿಪರೀಕ್ಷೆ

- Advertisement -
- Advertisement -

ಹೊಸದಿಲ್ಲಿ: ಉತ್ತರ ಪ್ರದೇಶದ 16 ಜಿಲ್ಲೆಗಳಲ್ಲಿನ ಐವತ್ತೊಂಬತ್ತು ಕ್ಷೇತ್ರಗಳಲ್ಲಿ ಇಂದು ಮೂರನೇ ಹಂತದ ಮತದಾನ ಚಲಾವಣೆ ನಡೆಯಲಿದೆ. ಕಾಂಗ್ರೆಸ್ ಆಡಳಿತವಿರುವ ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಎಲ್ಲ ಕ್ಷೇತ್ರಗಳ ಮತದಾನ ಇಂದು ನಡೆಯಲಿದೆ.

ಉತ್ತರ ಪ್ರದೇಶ: ಎಸ್‌ಪಿ ಭದ್ರಕೋಟೆಯಲ್ಲಿ ಮತದಾನ

ಯುಪಿಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಪಂಜಾಬ್‌ನಲ್ಲಿ, ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸ್ಪರ್ಧಿಸುತ್ತಿರುವ ಯಾದವ್ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿಯಲ್ಲಿರುವ ಕರ್ಹಾಲ್ ಸ್ಥಾನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅಖಿಲೇಶ್‌ ವಿರುದ್ಧ ಬಿಜೆಪಿಯು ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಘೇಲ್ ಅವರನ್ನು ಕಣಕ್ಕಿಳಿಸಿದೆ. 1992ರಲ್ಲಿ ಪಕ್ಷ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಎಸ್‌ಪಿ ಈ ಕ್ಷೇತ್ರವನ್ನು ಕೇವಲ ಒಂದು ಬಾರಿ ಮಾತ್ರ ಸೋತಿರುವುದು ಗಮನಾರ್ಹ.

2017ರ ವಿಧಾನಸಭಾ ಚುನಾವಣೆಯಲ್ಲಿ ಈ 59 ಸ್ಥಾನಗಳಲ್ಲಿ ಬಿಜೆಪಿ 49 ಸ್ಥಾನಗಳನ್ನು ಗೆದ್ದುಕೊಂಡರೆ, ಸಮಾಜವಾದಿ ಪಕ್ಷವು 9 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಎಲ್ಲಾ ಸ್ಥಾನಗಳನ್ನು ಕಳೆದುಕೊಂಡಿದೆ. ಇಂದು ಮತದಾನ ನಡೆಯುವ ಕ್ಷೇತ್ರಗಳು ಉತ್ತರ ಪ್ರದೇಶದ ಪಶ್ಚಿಮ, ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿವೆ.

ಪ್ರಮುಖ ಮುಖಗಳು: ಅಖಿಲೇಶ್‌ ಯಾದವ್‌ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ (ಜಸ್ವಂತ್‌ನಗರ), ಬಿಜೆಪಿಯ ಸತೀಶ್ ಮಹಾನಾ (ಕಾನ್ಪುರದ ಮಹಾರಾಜಪುರ), ರಾಮ್‌ವೀರ್ ಉಪಾಧ್ಯಾಯ (ಹತ್ರಾಸ್‌ನ ಸದಾಬಾದ್), ಅಸಿಮ್ ಅರುಣ್ (ಕನೌಜ್ ಸದರ್) ಮತ್ತು ಕಾಂಗ್ರೆಸ್‌ನ ಲೂಯಿಸ್ ಖುರ್ಷಿದ್ (ಫರೂಕಾಬಾದ್ ಸದರ್) ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು. ಲೂಯಿಸ್ ಖುರ್ಷಿದ್ ಅವರು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ಪತ್ನಿ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ದಕ್ಷಿಣ ಯುಪಿಯ ಬುಂದೇಲ್‌ಖಂಡ್ ಪ್ರದೇಶದಲ್ಲಿ, 2017 ರಲ್ಲಿ ಬಿಜೆಪಿ ಎಲ್ಲಾ 19 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದು ಮೊದಲು BSP ಭದ್ರಕೋಟೆಯಾಗಿತ್ತು. ಇಂದು ಮತ ಚಲಾಯಿಸುವ ಮಧ್ಯ ಯುಪಿ ಕ್ಷೇತ್ರಗಳು ಎಸ್‌ಪಿ ಭದ್ರಕೋಟೆಗಳಾಗಿವೆ.

ರಾಜ್ಯದ ದೊಡ್ಡ ನಗರಗಳಲ್ಲಿ ಕಾನ್ಪುರ್ ಒಂದಾಗಿದೆ. ವ್ಯಾಪಾರ ಶಕ್ತಿ ಕೇಂದ್ರವೂ ಹೌದು. ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿತ್ತು.

ಪಂಜಾಬ್‌ ಹೈವೋಲ್ಟೇಜ್‌

ರೈತ ಚಳವಳಿಯ ಮೂಲಕ ಗಮನ ಸೆಳೆದಿರುವ, ಬಿಜೆಪಿಗೆ ಬಹುದೊಡ್ಡ ಹೊಡೆತ ನೀಡಿರುವ ಪಂಜಾಬ್ ರಾಜ್ಯದಲ್ಲಿ ಒಂದೇ ಹಂತದಲ್ಲಿ 117 ಕ್ಷೇತ್ರಗಳ ವಿಧಾನಸಭಾ ಚುನಾವಣೆ ನಡೆಯಲಿದೆ.

2017ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಪಡೆಯುವ ಮೂಲಕ ಎಸ್ಎಡಿ-ಬಿಜೆಪಿ ಒಕ್ಕೂಟದ 10 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತ್ತು. ಎಎಪಿ 20 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಸ್‌ಎಡಿ-ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದವು. ಎರಡು ಸ್ಥಾನಗಳಲ್ಲಿ ಲೋಕ ಇನ್ಸಾಫ್ ಗೆದ್ದಿತ್ತು.

ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡ ತಮ್ಮದೇ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದು, ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ. ಆಮ್ ಆದ್ಮಿ ಪಕ್ಷವು ದೊಡ್ಡ ಪೈಪೋಟಿಯನ್ನು ನೀಡುತ್ತಿದೆ.

ಪ್ರಮುಖ ಮುಖಗಳು: ಚಮ್ಕೌರ್ ಸಾಹಿಬ್ ಕ್ಷೇತ್ರದಿಂದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಅಮೃತಸರ ಪೂರ್ವ ಕ್ಷೇತ್ರದಿಂದ ಎಸ್‌ಎಡಿಯ ಬಿಕ್ರಮ್ ಸಿಂಗ್ ಮಜಿಥಿಯಾ ವಿರುದ್ಧ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಧುರಿಯಿಂದ ಎಎಪಿಯ ಭಗವಂತ್ ಮಾನ್, ಪಟಿಯಾಲದಿಂದ ಕ್ಯಾಪ್ಟನ್ ಅಮರಿಂದರ್ ಸಿಂಗ್, ಜಲಾಲಾಬಾದ್  ವಿಧಾನಸಭಾ ಕ್ಷೇತ್ರದಿಂದ ಸುಖಬೀರ್ ಸಿಂಗ್ ಬಾದಲ್, ಲಂಬಿ ಕ್ಷೇತ್ರದಿಂದ ಪ್ರಕಾಶ್ ಸಿಂಗ್ ಬಾದಲ್, ಮಜಿತಾ ಕ್ಷೇತ್ರದಿಂದ ಗನೀವ್ ಕೌರ್ ಮಜಿಥಿಯಾ ಮತ್ತು ಬಟಿಂಡಾ ಕ್ಷೇತ್ರದಿಂದ ಹರ್ಸಿಮ್ರತ್ ಕೌರ್ ಬಾದಲ್ ಸ್ಪರ್ಧಿಸಿದ್ದಾರೆ.


ಇದನ್ನೂ ಓದಿರಿ: ಆಶೀಶ್‌ ಮಿಶ್ರಾಗೆ ಜಾಮೀನು: ಪಂಜಾಬ್‌ಗೆ ಪಿಎಂ ಭೇಟಿ ವೇಳೆ ಪ್ರತಿಭಟನೆಗೆ ಎಸ್‌ಕೆಎಂ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...