Homeಕರ್ನಾಟಕPower TV ಬೆಂಬಲಕ್ಕೆ ನಿಂತ ಜನತೆ: ಮುಖ್ಯಮಂತ್ರಿಗೆ ಪತ್ರ ಬರೆದ ಕಾರ್ಯನಿರತ ಪತ್ರಕರ್ತರ ಸಂಘ

Power TV ಬೆಂಬಲಕ್ಕೆ ನಿಂತ ಜನತೆ: ಮುಖ್ಯಮಂತ್ರಿಗೆ ಪತ್ರ ಬರೆದ ಕಾರ್ಯನಿರತ ಪತ್ರಕರ್ತರ ಸಂಘ

ಟ್ವಿಟ್ಟರ್‌ನಲ್ಲಿ #StandwithpowerTv ಟ್ರೆಂಡ್ ಆಗುತ್ತಿದ್ದು, ಹಲವಾರು ಜನರು ಸರ್ಕಾರದ ನಡೆಯನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಕುಟುಂಬದ ಭ್ರಷ್ಟಾಚಾರದ ಕುರಿತು ನಿರಂತರ ವರದಿ ಮಾಡಿದ್ದ ಪವರ್‌ ಟಿವಿ ಕನ್ನಡ ಸುದ್ದಿ ವಾಹಿನಿಯ ಲೈವ್‌ ಬಂದ್‌ ಮಾಡಿರುವುದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದೆ.

ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಬರೆದ ಪತ್ರದಲ್ಲಿ, “ಪವರ್ ಟಿವಿ ಮಾಲೀಕರ ಮೇಲೆ ಆರೋಪ ಬೇರೆ ವಿಚಾರ, ಅದಕ್ಕೆ ತನಿಖೆ ನಡೆಸುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಟಿವಿ ವಾಹಿನಿ ಲೈವ್ ಬಂದ್ ಮಾಡಿರುವುದು ಸರಿಯಾದ ಕ್ರಮ ಅಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿಗಳ ದಾಳಿಗೆ ಬಗ್ಗುವುದಿಲ್ಲ, ಪವರ್ ಟಿವಿ ಪುಟಿದೇಳಲಿದೆ: ರಹಮಾನ್ ಹಾಸನ್

“ಒಂದು ಟಿವಿ ವಾಹಿನಿ ಲೈವ್ ಬಂದ್ ಮಾಡುವುದರಿಂದ ಅದನ್ನು ಅವಲಂಬಿಸಿ ವೃತ್ತಿ ಮಾಡುತ್ತಿರುವ ನೂರಾರು ಪತ್ರಕರ್ತರ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ತಾವು ಈ ಕೂಡಲೇ ಗೃಹ ಸಚಿವರಿಗೆ ನಿರ್ದೇಶನ ನೀಡಿ, ಪವರ್ ಟಿವಿ ವಾಹಿನಿ ಲೈವ್ ಬಂದ್ ತೆರವು ಮಾಡಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ವಿನಂತಿಸಿಕೊಳ್ಳುತ್ತೇವೆ” ಸಂಘವು ತನ್ನ ಪತ್ರದಲ್ಲಿ ಹೇಳಿದೆ.

ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “Power TV”ಯ ಪ್ರಸಾರವನ್ನು ನಿನ್ನೆ ರಾತ್ರಿಯಿಂದ ತಡೆಹಿಡಿಯಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಕೂಡಾ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಹಲವಾರು ಕಡೆ ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ತಯಾರಿಗಳು ನಡೆಯುತ್ತಿವೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಕನ್ನಡ ಚಿತ್ರನಟ, ಚಿಂತಕ ಚೇತನ್, “1975 ರಲ್ಲಿ ಇಂದಿರಾ ಗಾಂಧಿ ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಿದ್ದರು, ಮಾಧ್ಯಮದವರನ್ನು ನಿಶ್ಶಬ್ದಗೊಳಿಸಲಾಗಿತ್ತು ಮತ್ತು 250 ಜನ ಪತ್ರಕರ್ತರನ್ನು ಜೈಲಿಗಟ್ಟಲಾಗಿತ್ತು. ಕರಾಳ ಸಮಯ. ಈಗ ಕರ್ನಾಟಕದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಮುಖ್ಯಮಂತ್ರಿಯ ಕುಟುಂಬದವರಿಂದ ನಡೆದಿದೆ ಎನ್ನಲಾದ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ, ಬಿಜೆಪಿ ಮತ್ತು ಸಿ.ಸಿ.ಬಿ ಸೇರಿ ಪವರ್ ಟೀವಿಯನ್ನು ಮುಚ್ಚಲಾಗಿದೆ. ಎಲ್ಲಾ ಮಾಧ್ಯಮಗಳು ಒಂದಾಗಬೇಕು, ಮತ್ತು ಮಾಧ್ಯಮಕ್ಕಿರುವ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಹಿರಿಯ ಪತ್ರಕರ್ತ ಶಶಿಧರ ಹೆಮ್ಮಾಡಿ, “ಬೆಂಗಳೂರು ಟೆರರ್ ಹಬ್ ಎಂದು ಒಬ್ಬ ಬಿಜೆಪಿ ಎಂಪಿ ಹೇಳುತ್ತಾನೆ. ಅವನದೇ ಪಕ್ಷದ ಸರ್ಕಾರ ಸ್ವತಃ ತಾನೇ ಭಯೋತ್ಪಾದಕ ಸರ್ಕಾರ ಎನ್ನುವುದನ್ನು ಸಾಬೀತುಪಡಿಸಿದ ಮೇಲೆ ಆ ಎಂಪಿ ಹೇಳುವುದರಲ್ಲಿ ವಿಶೇಷವೇನೂ ಇಲ್ಲ. ಪವರ್ ಟಿವಿಯಂತಹ ಒಂದು ಚಾನಲ್ ಅನ್ನೇ ಈ ಭಯೋತ್ಪಾದಕ ಸರ್ಕಾರ ಬಂದ್ ಮಾಡುತ್ತದೆ ಎಂದರೆ ಇದು ತುರ್ತು ಸ್ಥಿತಿಗೂ ಕರಾಳ. ಈ ಸಂದರ್ಭದಲ್ಲಿ ಪವರ್ ಟಿವಿಯ ಪರ ಮತ್ತು ಸರ್ಕಾರದ ಈ ಭಯೋತ್ಪಾದಕ ನೀತಿಯ ವಿರುದ್ಧ ನಿಲ್ಲದ ಮಾಧ್ಯಮದ ಮಂದಿ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರನ _______ ನೆಕ್ಕುವುದೇ ಅತ್ಯಂತ ಸೂಕ್ತ. ಈ ದುಷ್ಟ ಸರ್ಕಾರಕ್ಕೆ ಧಿಕ್ಕಾರವಿರಲಿ. ನಾನು ಪವರ್ ಟಿವಿಯ ಜೊತೆ” ಎಂದು ತಮ್ಮ ಫೇಸ್‌ಬುಕ್‌‌ನಲ್ಲಿ ಬರೆದಿದ್ದಾರೆ.

ಬೆಂಗಳೂರು ಟೆರರ್ ಹಬ್ ಎಂದು ಒಬ್ಬ ಬಿಜೆಪಿ ಎಂಪಿ ಹೇಳುತ್ತಾನೆ. ಅವನದೇ ಪಕ್ಷದ ಸರ್ಕಾರ ಸ್ವತಃ ತಾನೇ ಭಯೋತ್ಪಾದಕ ಸರ್ಕಾರ ಎನ್ನುವುದನ್ನು…

Posted by Shashidhar Hemmady on Monday, September 28, 2020

ಹೋರಾಟಗಾರ್ತಿ ಭಾರತಿ ಪ್ರಶಾಂತ್‌, “#PowerTV ಯವರು ವಿಜಯೇಂದ್ರನ ಬಗ್ಗೆ ಇನ್ನೇನು ಹೇಳಬೇಕಾಗಿಲ್ಲ. ನಿಮ್ಮ ಚಾನೆಲನ್ನು ಮುಚ್ಚಿಸಿದಾಗಲೆ ಜನತೆಗೆ ಅವರ ಭ್ರಷ್ಟಾಚಾರದ ಸ್ಟಷ್ಟತೆ ಸಿಕ್ಕಿತು. ಹೆಗಲು ಮುಟ್ಟಿ ನೋಡಿದ ಕುಂಬಳಕಾಯಿ ಕಳ್ಳ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾದಂಬರಿಗಾರ ಕಾರ್ತಿಕಾದಿತ್ಯ ಬೆಳಗೋಡ್‌‌, “ಯಡಿಯೂರಪ್ಪನವರ ಮಗ ಪ್ರಶ್ನಾತೀತರಾ!? ಪವರ್ ಟಿವಿ ಸುಳ್ಳು ವರದಿ ಪ್ರಸಾರ ಮಾಡಿದ್ದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಿ. ಅದನ್ನು ಬಿಟ್ಟು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಹೊರಡುವ ಕೆಲಸ ಯಡಿಯೂರಪ್ಪನವರಿಗಂತೂ ಶೋಭೆಯಲ್ಲ. ಈ ಕೆಟ್ಟ ಬೆಳವಣಿಗೆಯ ಬಗ್ಗೆ ನಮ್ಮ ‘ನಾ ಖಾವೂಂಗಾ ನಾ ಖಾನೇದೂಂಗಾ’ ಪ್ರಧಾನಿಗಳು ಏನು ಕ್ರಮ ಕೈಗೊಳ್ಳುತ್ತಾರೋ ನೋಡಬೇಕು” ಎಂದು ಬರೆದಿದ್ದಾರೆ.

ಪವರ್ ಟಿವಿಯನ್ನು ರಾತ್ರೋ ರಾತ್ರಿ ಮುಚ್ಚಿಸಿರುವುದು ನಿಜಕ್ಕೂ ಆತಂಕಕಾರಿ. ಇದು ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದೌರ್ಜನ್ಯ. ಒಂದು ವರದಿಯ…

Posted by Kartikaditya Belgodu on Monday, September 28, 2020

ಇಷ್ಟೆ ಅಲ್ಲದೆ ಟ್ವಿಟ್ಟರ್‌ನಲ್ಲಿ #StandwithpowerTv ಟ್ರೆಂಡ್ ಆಗುತ್ತಿದೆ. ಹಲವಾರು ಜನರು ಸರ್ಕಾರದ ನಡೆಯ ವಿರುದ್ದ ಧ್ವನಿ ಎತ್ತಿದ್ದಾರೆ.

ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...