Homeಮುಖಪುಟಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಅಸ್ಟ್ರಾಜೆನೆಕಾ

ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಅಸ್ಟ್ರಾಜೆನೆಕಾ

- Advertisement -
- Advertisement -

ಜಾಗತಿಕವಾಗಿ ತನ್ನ ಕೋವಿಡ್-19 ಲಸಿಕೆಯನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ‘ಕೋವಿಶೀಲ್ಡ್’ ಲಸಿಕೆ ತಯಾರಕ ಕಂಪನಿ ಅಸ್ಟ್ರಾಜೆನೆಕಾ ಹೇಳಿದೆ.

ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಅಸ್ಟ್ರಾಜೆನೆಕಾ ಒಪ್ಪಿಕೊಂಡ ಬೆನ್ನಲ್ಲೇ ಲಸಿಕೆ ಹಿಂಪಡೆಯಲು ಮುಂದಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಆದರೆ, ಕಂಪನಿ ಬೇಡಿಕೆ ಕುಸಿತದ ಸಬೂಬು ಹೇಳಿದೆ.

ಬ್ರಿಟಿಷ್-ಸ್ವೀಡಿಷ್ ಬಹುರಾಷ್ಟ್ರೀಯ ಔಷಧೀಯ ಕಂಪನಿಯಾದ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಜೊತೆಗೂಡಿ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಪುಣೆಯ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ವಿತರಣೆ ಮಾಡಿತ್ತು.

ಕೋವಿಡ್-19 ಲಸಿಕೆಗೆ ಜಾಗತಿಕವಾಗಿ ಬೇಡಿಕೆ ಕುಸಿದಿದೆ. ಅಲ್ಲದೆ, ಕೋವಿಡ್‌ನ ಹೊಸ ರೂಪಾಂತರಗಳಿಗೆ ಹೊಸ ರೀತಿಯ ಲಸಿಕೆಗಳನ್ನು ಅಭಿವೃದ್ದಿಪಡಿಸಲಾಗಿದೆ. ಈ ಕಾರಣಗಳಿಕೆ ಲಸಿಕೆ ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದೇವೆ ಎಂದು ಅಸ್ಟ್ರಾಜೆನೆಕಾ ತಿಳಿಸಿದೆ.

ಅಸ್ಟ್ರಾಜೆನೆಕಾ ಐರೋಪ್ಯ ಒಕ್ಕೂಟದಲ್ಲಿ ಕೋವಿಡ್ ಲಸಿಕೆಯ ಮಾರಾಟವನ್ನು ಈಗಾಗಲೇ ಸ್ಥಗಿತಗೊಳಿಸಿದೆ. ಇನ್ನು ಮುಂದೆ ಲಸಿಕೆ ತಯಾರಿಸುವುದಿಲ್ಲ ಮತ್ತು ಮಾರಾಟ ಮಾಡುವುದಿಲ್ಲ ಎಂದಿದೆ. ಇದೇ ರೀತಿ ಇತರ ರಾಷ್ಟ್ರಗಳಲ್ಲೂ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದಿದೆ.

ಅಸ್ಟ್ರಾಜೆನೆಕಾದ ಕೋವಿಡ್ ಲಸಿಕೆಯಿಂದ ಭಾರೀ ಅಡ್ಡಪರಿಣಾಮಗಳು ಬೀರಿವೆ. ಇದರಿಂದ ಅನೇಕ ಜನರು ಅಂಗಾಗ ವೈಫಲ್ಯದಂತ ಸಮಸ್ಯೆಗೆ ಸಿಲುಕಿದ್ದಾರೆ. ಲಸಿಕೆಯಿಂದ ಸಾವುಗಳೂ ಸಂಭವಿಸಿವೆ ಎಂದು ಆರೋಪಿಸಿ ಯುಕೆಯಲ್ಲಿ ಅಸ್ಟ್ರಾಜೆನೆಕಾ ವಿರುದ್ದ 100 ಮಿಲಿಯನ್ ಪೌಂಡ್ ಮೊತ್ತದ ಮೊಕ್ಕದ್ದಮೆ ಹೂಡಲಾಗಿದೆ.

ಅರ್ಜಿದಾರರು ಮಾಡಿರುವ ಆರೋಪಗಳನ್ನು ನ್ಯಾಯಾಲಯದಲ್ಲಿ ಒಪ್ಪಿಕೊಂಡಿರುವ ಅಸ್ಟ್ರಾಜೆನೆಕಾ ತನ್ನ ಕೋವಿಡ್ ಲಸಿಕೆ ‘Thrombosis with Thrombocytopenia Syndrome'(TTS)ನಂತಹ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟು ಮಾಡಬಹುದು ಎಂದಿದೆ.

TTS ಮಾನವರಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಮತ್ತು ರಕ್ತದಲ್ಲಿ ಪ್ಲೇಟ್‌ಲೆಟ್ ಕೊರತೆಗೆ ಕಾರಣವಾಗುತ್ತದೆ. ಈ ಕಾರಣಗಳಿಂದ ಯುಕೆಯಲ್ಲಿ 81ಕ್ಕೂ ಅಧಿಕ ಸಾವುಗಳು ಸಂಭವಿಸಿವೆ ಎಂದು ಆರೋಪಿಸಲಾಗಿದೆ. ಆದರೆ, ಕೋವಿಡ್ ಲಸಿಕೆ ಹಿಂತೆಗೆದುಕೊಳ್ಳುವ ನಿರ್ಧಾರ ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ ಎಂದು ಅಸ್ಟ್ರಾಜೆನೆಕಾ ಹೇಳಿದೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ವಿರುದ್ದ ಬ್ಲೂ ಕಾರ್ನರ್ ನೋಟಿಸ್: ಏನಿದು ರೆಡ್, ಬ್ಲೂ ಬಣ್ಣ ಆಧಾರಿತ ನೋಟಿಸ್‌? ಡಿಟೇಲ್ಸ್‌..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...