Homeಕರೋನಾ ತಲ್ಲಣಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ಲಸಿಕೆ ಹಾಕಿಸಿಕೊಂಡಿದ್ದ ವ್ಯಕ್ತಿಗೆ ಅನಾರೋಗ್ಯ ಉಂಟಾಗಿದೆ. ಹೀಗಾಗಿ ನಾವು ಸ್ವಯಂಪ್ರೇರಿತರಾಗಿ ವಿಶ್ವದಾದ್ಯಂತ ನಡೆಯುತ್ತಿರುವ ಲಸಿಕೆ ಪ್ರಯೋಗ ನಿಲ್ಲಿಸಿದ್ದೇವೆ- ಅಸ್ಟ್ರಾಜೆನೆಕಾದ ವಕ್ತಾರರು

- Advertisement -
- Advertisement -

ಬ್ರಿಟಿಷ್-ಸ್ವೀಡಿಷ್ ಫಾರ್ಮಾ ಕಂಪನಿ ಅಸ್ಟ್ರಾಜೆನೆಕಾ COVID-19 ಲಸಿಕೆಯ ಹಂತ 3 ಕ್ಲಿನಿಕಲ್ ಪ್ರಯೋಗಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ. ಪ್ರಯೋಗದಲ್ಲಿ ಲಸಿಕೆ ಪಡೆದಿದ್ದ ವ್ಯಕ್ತಿಯೊಬ್ಬರಿಗೆ ಅನಾರೋಗ್ಯ ಉಂಟಾಗಿದ್ದು, ಅದಕ್ಕೆ ಕಾರಣವೇನು ಅನ್ನೋದು ಗೊತ್ತಾಗದ ಹಿನ್ನೆಲೆಯಲ್ಲಿ ಕ್ಲೀನಿಕಲ್ ಟೆಸ್ಟ್ ತಾತ್ಕಾಲಿಕವಾಗಿ​ ಸ್ಥಗಿತಗೊಳಿಸಿದೆ ಎಂದು STAT ನ್ಯೂಸ್ ವರದಿ ಮಾಡಿದೆ.

STAT ವರದಿಗಾರ್ತಿ ರೆಬೆಕಾ ರಾಬಿನ್ಸ್ ಸೆಪ್ಟೆಂಬರ್ 9 ರಂದು ಕಂಪನಿಯು ಬಿಡುಗಡೆ ಮಾಡಿದ ಹೇಳಿಕೆಯನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ವಿಶ್ವದಾದ್ಯಂತ ಕೊರೊನಾ ಲಸಿಕೆ ಅಭಿವೃದ್ಧಿಪಡಿಸುತ್ತಿರುವವರ ಪೈಕಿ ಅಸ್ಟ್ರಾಜೆನೆಕಾ ಮುಂಚೂಣಿಯಲ್ಲಿದ್ದು, ಆಕ್ಸ್​​ಫರ್ಡ್​​ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಲಸಿಕೆ ಕಂಡುಹಿಡಿದಿತ್ತು. ಸದ್ಯ ಲಸಿಕೆಯ ಕೊನೇ ಹಂತವಾದ ಫೇಸ್​​-3 ಪರೀಕ್ಷೆ ನಡೆಸುತ್ತಿರುವ 9 ಕಂಪನಿಗಳ ಪೈಕಿ ಅಸ್ಟ್ರಾಜೆನೆಕಾ ಕೂಡ ಒಂದಾಗಿದೆ.

ಲಸಿಕೆ ಹಾಕಿಸಿಕೊಂಡಿದ್ದ ವ್ಯಕ್ತಿಗೆ ಅನಾರೋಗ್ಯ ಉಂಟಾಗಿದೆ. ಹೀಗಾಗಿ ನಾವು ಸ್ವಯಂಪ್ರೇರಿತರಾಗಿ ವಿಶ್ವದಾದ್ಯಂತ ನಡೆಯುತ್ತಿರುವ ಲಸಿಕೆ ಪ್ರಯೋಗ ನಿಲ್ಲಿಸಿದ್ದೇವೆ. ಸ್ವತಂತ್ರ ಸಮಿತಿಯೊಂದು ಲಸಿಕೆಯ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದು ಅಸ್ಟ್ರಾಜೆನೆಕಾದ ವಕ್ತಾರರು ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ಉಲ್ಬಣವಾಗುತ್ತಿರುವ ನಿಟ್ಟಿನಲ್ಲಿ ವಿಶ್ವದಲ್ಲಿ ಅತಿದೊಡ್ಡ ಪ್ರಮಾಣದಲ್ಲಿ ಲಸಿಕೆಗಳನ್ನು ತಯಾರಿಸುವ ಪುಣೆಯ ಸೀರಮ್ ಸಂಸ್ಥೆ  ಭಾರತದಲ್ಲಿ AZD1222 ಲಸಿಕೆ ವಿತರಿಸಲು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಈ ನಿಟ್ಟಿನಲ್ಲಿ 3,300 ಕೋಟಿ ರೂಪಾಯಿಗಳಿಗೂ ಅಧಿಕ ಹಣವನ್ನು ಹೂಡಿಕೆ ಮಾಡಿದೆ.

ಆಗಸ್ಟ್ ತಿಂಗಳ ಆರಂಭದಲ್ಲಿ ಸೀರಮ್ ಸಂಸ್ಥೆಯ ಸಿಇಒ ಆದರ್‌ ಪೂನವಾಲ್ಲಾ, ಶೇಕಡಾ 70 ರಿಂದ 80 ರಷ್ಟು ಖಚಿತವಾಗಿ ಲಸಿಕೆ 3 ನೇ ಹಂತವನ್ನು ದಾಟುತ್ತದೆ. ಪ್ರಯೋಗದಲ್ಲಿ ಸಫಲವಾಗುತ್ತದೆ ಎಂದು ನ್ಯೂಯಾರ್ಕ್ ಟೈಮ್ಸ್‌ ಜೊತೆ ವಿಶ್ವಾಸ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...