ಅಮೆರಿಕಾದಲ್ಲಿ ಅಬ್ಬರಿಸಲಿರುವ 'ಅಸುರನ್' - 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

2021 ರ ಫೆಬ್ರವರಿಯಲ್ಲಿ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆಯಲಿರುವ 72ನೇ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸಮಾರಂಭದಲ್ಲಿ ಧನುಶ್ ನಟನೆಯ ‘ಅಸುರನ್’ ತಮಿಳು ಚಿತ್ರ ಪ್ರದರ್ಶನಗೊಳ್ಳಲಿದ್ದು, ಅತ್ಯುತ್ತಮ ವಿದೇಶಿ ಚಲನಚಿತ್ರ ವಿಭಾಗದಲ್ಲಿ ಇನ್ನೂ ಹಲವು ಭಾರತೀಯ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಧನುಷ್ ಮತ್ತು ಮಂಜು ವಾರಿಯರ್ ಅಭಿನಯದ, ವೆಟ್ರಿ ಮಾರನ್ ನಿರ್ದೇಶನದ, ಕಾದಂಬರಿ ಆಧಾರಿತ ಚಿತ್ರ ಅಸುರನ್. 2019 ರಲ್ಲಿ ಬಿಡುಗಡೆಯಾಗಿ ಭಾರತದಲ್ಲಿ ಅಬ್ಬರಿಸಿತ್ತು. ಕಥೆ, ಚಿತ್ರಕಥೆ, ನಟನೆ, ಸಂಗೀತ ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಉತ್ತಮ ಪ್ರತಿಕ್ರಿಯೆ ಗಳಿಸಿ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಈಗ ಅಮೆರಿಕಾದ ಸಮಾರಂಭದಲ್ಲಿ ಪ್ರದರ್ಶನಗೊಳ್ಳುವ ಮೂಲಕ ತನ್ನ ಛಾಪನ್ನು ವಿದೇಶದಲ್ಲಿಯೂ ಮೂಡಿಸಲಿದೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸುಧಾ ಕೊಂಗರಾ ನಿರ್ದೇಶಿಸಿದ, ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ತಮಿಳು ಚಿತ್ರವೂ ಪ್ರದರ್ಶನಗೊಳ್ಳಲಿದೆ. ಈ ಚಿತ್ರವು 1990 ರ ದಶಕದಲ್ಲಿ ಕಡಿಮೆ ಬೆಲೆಯಲ್ಲಿ ವಿಮಾನಯಾನವನ್ನು ಪ್ರಾರಂಭಿಸುವ ದೊಡ್ಡ ಕನಸು ಹೊತ್ತ ಸಾಮಾನ್ಯ ವ್ಯಕ್ತಿಯೊಬ್ಬನ ಜೀವನ ಚರಿತ್ರೆಯನ್ನು ಆಧರಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಂತರ ಒಟಿಟಿಯಲ್ಲಿ ಬಿಡುಗಡೆಯಾಗಿ ಅತ್ಯುತ್ತಮ ಪ್ರತಿಕ್ರಿಯೆ ಗಳಿಸಿತ್ತು.

ಇನ್ನು ಭಾರತದಿಂದ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಮಲಯಾಳಂ ಚಿತ್ರ ‘ಜಲ್ಲಿಕಟ್ಟು’ ಕೂಡ ಇಲ್ಲಿ ಪ್ರದರ್ಶನಗೊಳ್ಳಲಿದೆ.

ಈ ಮೇಲಿನ ಚಿತ್ರಗಳೂ ಸೇರಿದಂತೆ ಅತ್ಯುತ್ತಮ ವಿದೇಶಿ ಚಲನಚಿತ್ರ ವಿಭಾಗದಡಿ ಗೋಲ್ಡನ್ ಗ್ಲೋಬ್ಸ್ 2021 ರಲ್ಲಿ ಪ್ರದರ್ಶನಗೊಳ್ಳಲಿರುವ ಭಾರತೀಯ ಚಿತ್ರಗಳ ಪೂರ್ಣ ಪಟ್ಟಿಯನ್ನು ಸಿನಿಮಾ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

  1. ಸೂರರೈ ಪೊಟ್ರು
  2. ಅಸುರನ್
  3. ಜಲ್ಲಿಕಟ್ಟು
  4. ತನ್ಹಾಜಿ
  5. ದಿ ಡಿಸಿಪಲ್
  6. ಲುಡೋ
  7. ಈಬ್ ಅಲ್ಲೆ ಓ
  8. ಹರಾಮಿ
  9. ಜಸ್ಟ್‌ ಲೈಕ್ ದಟ್
  10. ಟ್ರೀಸ್ ಅಂಡರ್‌ ದಿ ಸನ್

ಇದನ್ನೂ ಓದಿ: ಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here