Homeಕರ್ನಾಟಕಸಿದ್ದು ಕೊಲೆಗೆ ಕರೆ ಕೊಟ್ಟ ಅಶ್ವತ್ಥ ನಾರಾಯಣ: ಬೊಮ್ಮಾಯಿಯ ಮೌನ, ಸಮ್ಮತಿಯ ಲಕ್ಷಣವೇ?; ಸಿದ್ದರಾಮಯ್ಯ ಪ್ರತಿಕ್ರಿಯೆ

ಸಿದ್ದು ಕೊಲೆಗೆ ಕರೆ ಕೊಟ್ಟ ಅಶ್ವತ್ಥ ನಾರಾಯಣ: ಬೊಮ್ಮಾಯಿಯ ಮೌನ, ಸಮ್ಮತಿಯ ಲಕ್ಷಣವೇ?; ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ್ ಅವರು ಫೆ.15, ಬುಧವಾರದಂದು ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ”ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದಾಕಿ” ಎಂದು ಕರೆ ಕೊಟ್ಟಿದ್ದಾರೆ. ಇದು ಇದೀಗ ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದೆ.

”ಮನಸ್ಸು ಮಾಡಿದ್ರೆ ಏನ ಬೇಕಾದ್ರೂ ಸಾಧಸ್ತಾರೆ.. ರಾಜಕೀಯ ದಿಕ್ಸೂಚಿ ಮಂಡ್ಯದಿಂದಲೇ ಕಾಣಬೇಕು. ಇಲ್ಲದಿದ್ರೆ, ಟಿಪ್ಪು ಜಾಗಕ್ಕೆ ಸಿದ್ದರಾಮಯ್ಯ ಬಂದಬಿಡ್ತಾರೆ. ಟಿಪ್ಪು ಬೇಕಾ? ಸಾವರ್ಕರ್ ಬೇಕಾ? ಹುರಿಗೌಡ ನಂಜೇಗೌಡ ಟಿಪ್ಪುವನ್ನು ಹೊಡದಾಕಿದ ಹಾಗೆ ಸಿದ್ದರಾಮಯ್ಯರನ್ನು ನೀವು ಹೊಡದಾಕಬೇಕು” ಎಂದು ಸಿಎನ್ ಅಶ್ವತ್ಥ ನಾರಾಯಣ ಕಾರ್ಯಕರ್ತರಿಗೆ ಕರೆ ಕೊಡುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ.

ಇದನ್ನೂ ಓದಿ: ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ಈ ಬಗ್ಗೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಪ್ರತಿಕ್ರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ”ಟಿಪ್ಪು ಸುಲ್ತಾನನ್ನು ಹೊಡದಾಕಿದಂತೆ, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹೊಡದಾಕಬೇಕು ಎಂದು ಅಶ್ವತ್ಥ ನಾರಾಯಣ ಹೇಳತಾರೆ.. ಅಂದ್ರೆ ಅವರು ಮನುಷ್ಯರೋ.., ರಾಕ್ಷಸರೋ.. ಅಂತ ತಿಳ್ಕೊಳಿ ನೀವು… ನನ್ನನ್ನ ಹೊಡದಾಕೋಕೆ ಬಂದ್ರೆ ನೀವು ಬಿಡ್ತೀರಾ ಎಂದು ಕಾರ್ಯಕರ್ತರನ್ನು ಕೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಟಿಪ್ಪು ಅಧಿಕಾರಕ್ಕೆ ಬಂದ ಹಾಗೆ ಎನ್ನುತ್ತಾರೆ, ನಾನು ಟಿಪ್ಪು, ಸೇವಾಲಾಲ್, ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಎಲ್ಲರನ್ನೂ ಗೌರವಿಸ್ತೀನಿ.. ನಾನು ಮನುಷ್ಯತ್ವ ಇರೋನು ಹಿಂದೂಗಳನ್ನು, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ್ ಎಲ್ಲರನ್ನೂ ಪ್ರೀತಸ್ತೀನಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಈ ವಿಚಾರವಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ”ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ಜನರಿಗೆ ಕರೆ ನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ (ಬಂದೂಕು) ಹಿಡಿದುಕೊಂಡು ಬಂದು ಬಿಡಿ” ಎಂದಿದ್ದಾರೆ.

”ನನ್ನ ಹತ್ಯೆಗೆ ಡಾ.ಸಿಎನ್ ಅಶ್ವತ್ಥ್ ನಾರಾಯಣ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ” ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸಿಟ್ಟು ಹೊರಹಾಕಿದ್ದಾರೆ.

”ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ?” ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...