Homeಮುಖಪುಟ'ಪಹಲ್ಗಾಮ್‌ನಲ್ಲಿ ಭದ್ರತಾ ಲೋಪವಾಗಿದೆ': ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡ ಮೋದಿ ಸರ್ಕಾರ; ವರದಿ

‘ಪಹಲ್ಗಾಮ್‌ನಲ್ಲಿ ಭದ್ರತಾ ಲೋಪವಾಗಿದೆ’: ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡ ಮೋದಿ ಸರ್ಕಾರ; ವರದಿ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭದ್ರತಾ ಲೋಪವಾಗಿದೆ ಎಂದು ಗುರುವಾರ (ಏ.24) ನಡೆದ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಒಪ್ಪಿಕೊಂಡಿರುವುದಾಗಿ ಮೂಲಗಳು ಹೇಳಿವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಏನೂ ತಪ್ಪಾಗಿಲ್ಲದಿದ್ದರೆ, ನಾವು ಇಲ್ಲಿ ಏಕೆ ಕುಳಿತುಕೊಳ್ಳುತ್ತಿದ್ದೆವು? ಎಲ್ಲೋ ಕೆಲವು ಕಡೆ ಲೋಪಗಳಾಗಿವೆ, ಅದನ್ನು ನಾವು ಕಂಡುಹಿಡಿಯಬೇಕು” ಎಂದು ಆಡಳಿತ ಪಕ್ಷದ ನಾಯಕರೊಬ್ಬರು ಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಹೇಳಿದ್ದಾಗಿ ವರದಿ ತಿಳಿಸಿದೆ.

ವಿವಿಧ ರಾಜ್ಯಗಳ 26 ಜನರನ್ನು ಬಲಿ ಪಡೆದ ಭಯೋತ್ಪಾದಕ ದಾಳಿಯ ಕುರಿತು ವಿರೋಧ ಪಕ್ಷದ ನಾಯಕರಿಗೆ ಮಾಹಿತಿ ನೀಡಲು ಸರ್ಕಾರ ಸರ್ವಪಕ್ಷ ಸಭೆ ಕರೆದಿತ್ತು.

ಸಭೆಯಲ್ಲಿ, ಹಲವು ಪ್ರತಿಪಕ್ಷ ನಾಯಕರು ಭದ್ರತಾ ಶಿಷ್ಟಾಚಾರಗಳ ಸ್ಪಷ್ಟ ವೈಫಲ್ಯದ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ, ಭದ್ರತಾ ಪಡೆಗಳು ಎಲ್ಲಿದ್ದವು? ಕೇಂದ್ರ ಮೀಸಲು ಪೊಲೀಸ್ ಪಡೆ ಎಲ್ಲಿತ್ತು? ಎಂದು ಹಲವರು ಪ್ರಶ್ನಿಸಿದ್ದಾರೆ ಎಂದು ಮೂಲಗಳು ಹೇಳಿದ್ದಾಗಿ ಇಂಡಿಯಾ ಟುಡೇ ವರದಿ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರ, ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಬಳಿಯ ಬೈಸರನ್ ಹುಲ್ಲುಗಾವಲು ಪ್ರದೇಶವನ್ನು ಪ್ರವಾಸಿಗರ ಭೇಟಿಗೆ ಮುಕ್ತವಾಗಿಸುವ ಮೊದಲು ಸ್ಥಳೀಯ ಅಧಿಕಾರಿಗಳು ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡಿರಲಿಲ್ಲ ಎಂದಿದೆ. ಸಾಂಪ್ರದಾಯಿಕವಾಗಿ ಜೂನ್‌ನಲ್ಲಿ ಅಮರನಾಥ ಯಾತ್ರೆಯವರೆಗೆ ಈ ಪ್ರದೇಶ ಪ್ರವಾಸಿಗರ ಭೇಟಿಗರ ನಿರ್ಬಂಧಿತವಾಗಿರುತ್ತದೆ ಎಂದು ವರದಿ ಹೇಳಿದೆ.

ಘಟನೆಗೆ ತಡವಾಗಿ ಪ್ರತಿಕ್ರಿಯಿಸಿದ ಬಗ್ಗೆಯೂ ಸಭೆಯಲ್ಲಿ ಕಳವಳ ವ್ಯಕ್ತವಾಗಿದೆ. ಮೂಲಗಳ ಪ್ರಕಾರ, ಸರ್ಕಾರಿ ಅಧಿಕಾರಿಗಳು ಈ ಸ್ಥಳವು 45 ನಿಮಿಷಗಳ ಬೆಟ್ಟದ ನಡಿಗೆಯ ದೂರದಲ್ಲಿದೆ ಮತ್ತು ಅಂತಹ ತುರ್ತು ಪರಿಸ್ಥಿತಿಗಳನ್ನು ತ್ವರಿತವಾಗಿ ನಿರ್ವಹಿಸಲು ಯಾವುದೇ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (ಎಸ್‌ಒಪಿ) ಜಾರಿಯಲ್ಲಿಲ್ಲ ಎಂದು ವಿವರಿಸಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು, ಭಾರತ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಎಲ್ಲಾ ಪಕ್ಷಗಳು ಒಪ್ಪಿಕೊಂಡಿವೆ ಎಂದು ಹೇಳಿದ್ದಾರೆ.

“ಭಯೋತ್ಪಾದನೆಯ ವಿರುದ್ಧದ ಈ ಹೋರಾಟದಲ್ಲಿ ಎಲ್ಲಾ ಪಕ್ಷಗಳು ಸರ್ಕಾರದ ಜೊತೆಗಿದ್ದೇವೆ ಎಂದು ಹೇಳಿವೆ. ಎಲ್ಲಾ ರಾಜಕೀಯ ಪಕ್ಷಗಳು ಈ ಸಂದೇಶವನ್ನು ನೀಡಿವೆ ಮತ್ತು ಎಲ್ಲಾ ಪಕ್ಷಗಳ ನಾಯಕರು ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ಅದನ್ನು ಬೆಂಬಲಿಸುತ್ತೇವೆ ಎಂದು ಒಂದೇ ಧ್ವನಿಯಲ್ಲಿ ಹೇಳಿದ್ದಾರೆ. ಸಭೆ ಸಕಾರಾತ್ಮಕವಾಗಿ ಕೊನೆಗೊಂಡಿದೆ” ಎಂದು ರಿಜಿಜು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮಕ್ಕೆ ವಿರೋಧ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಯಾರೆಲ್ಲ ಭಾಗವಹಿಸಿದ್ದರು

ಸರ್ವಪಕ್ಷ ಸಭೆಯಲ್ಲಿ ಸರ್ಕಾರದ ಪರವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್. ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇದ್ದರು.

ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಪ್ರಮುಖ ಸಂಸದೀಯ ನಾಯಕರು, ರಾಜ್ಯಸಭೆಯ ಸದನದ ನಾಯಕ ಜೆ.ಪಿ. ನಡ್ಡಾ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದರು.

ಸುಪ್ರಿಯಾ ಸುಳೆ (ಎನ್‌ಸಿಪಿ-ಎಸ್‌ಪಿ), ಪ್ರಫುಲ್ ಪಟೇಲ್ (ಎನ್‌ಸಿಪಿ), ಅಸಾದುದ್ದೀನ್ ಓವೈಸಿ (ಎಐಎಂಐಎಂ), ಸಸ್ಮಿತ್ ಪಾತ್ರ (ಬಿಜೆಡಿ), ಲವು ಶ್ರೀ ಕೃಷ್ಣ ದೇವರಾಯಲು (ಟಿಡಿಪಿ), ಶ್ರೀಕಾಂತ್ ಶಿಂಧೆ (ಶಿವಸೇನೆ), ಸಂಜಯ್ ಸಿಂಗ್ (ಎಎಪಿ), ಸುದೀಪ್ ಬಂಡೋಪಾಧ್ಯಾಯ (ಟಿಎಂಸಿ), ಪ್ರೇಮಚಂದ್ ಗುಪ್ತಾ (ಆರ್‌ಜೆಡಿಕೆ), ಶಿವಪಾಲ್ (ಆರ್‌ಜೆಡಿ) ಸಭೆಯಲ್ಲಿ ಉಪಸ್ಥಿತರಿದ್ದರು.

ಪಹಲ್ಗಾಮ್ ದಾಳಿಕೋರರಿಗೆ ‘ಊಹೆಗೂ ಮೀರಿದ’ ಶಿಕ್ಷೆ: ಚುನಾವಣೆಗೆ ಸಜ್ಜಾದ ಬಿಹಾರದಲ್ಲಿ ಪ್ರಧಾನಿ ಮೋದಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...