Homeಮುಖಪುಟಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

- Advertisement -
- Advertisement -

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ ನೀಡಿದರು.

ನವದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯನ್ನುದ್ದೇಶಿಸಿ ಅವರು, 2026ರ ಏಪ್ರಿಲ್ 17ರಂದು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ನಡೆಸಿದ ಜಂಟಿ ಹೋರಾಟವನ್ನು ಸ್ಮರಿಸಿದರು. ಕೇಂದ್ರ ಸರ್ಕಾರ ಪ್ರಸ್ತಾಪಿಸಿದ್ದ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ಸೋಲಿಸುವ ಮೂಲಕ ಮೈತ್ರಿಕೂಟವು ತನ್ನ ಶಕ್ತಿಯನ್ನು ಪ್ರದರ್ಶಿಸಿದೆ ಎಂದು ಹೇಳಿದರು. ಅಲ್ಲದೆ, ವಿರೋಧ ಪಕ್ಷಗಳು ಇದೇ ಒಗ್ಗಟ್ಟನ್ನು ಮತ್ತಷ್ಟು ಬಲಪಡಿಸಿಕೊಳ್ಳಬೇಕು ಎಂದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಲಕ್ಷಾಂತರ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಖರ್ಗೆ ಆರೋಪಿಸಿದರು. ಕೇಂದ್ರ ಸರ್ಕಾರ ಸಂವಿಧಾನದ ಮೇಲಿನ ದಾಳಿಗಳನ್ನು ಮುಂದುವರೆಸಿದೆ, ರಾಜಕೀಯ ವಿರೋಧಿಗಳ ವಿರುದ್ಧ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಮತ್ತು ಬಿಜೆಪಿಯೇತರ ಸರ್ಕಾರಗಳ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ದೂರಿದರು.

“ಸಂವಿಧಾನದ ಮೇಲಿನ ದಾಳಿಯು ನಿರಂತರವಾಗಿ ಮುಂದುವರಿದಿದೆ” ಎಂದು ಹೇಳಿದ ಖರ್ಗೆ, ತನಿಖಾ ಸಂಸ್ಥೆಗಳನ್ನು “ರಾಜಕೀಯ ವಿರೋಧಿಗಳನ್ನು ಹೆದರಿಸುವ ಸಾಧನಗಳಾಗಿ ನಿರಂತರವಾಗಿ ಬಳಸಲಾಗುತ್ತಿದೆ” ಎಂದು ಆರೋಪಿಸಿದರು.

ದೇಶದಾದ್ಯಂತ ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಎದುರಿಸುತ್ತಲೇ ಇದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಬಿಜೆಪಿಯೇತರ ಆಡಳಿತದ ಸರ್ಕಾರಗಳು ತಾರತಮ್ಯ ಎದುರಿಸುತ್ತಿವೆ ಎಂದು ಖರ್ಗೆ ಆರೋಪಿಸಿದರು. ನಾಗರಿಕರನ್ನು ಬಾಧಿಸುವ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಲು ವಿರೋಧ ಪಕ್ಷಗಳು ಒಗ್ಗಟ್ಟಾಗಿರಬೇಕು ಎಂದು ಅವರು ಕರೆ ನೀಡಿದರು.

ಪರೀಕ್ಷಾ ವ್ಯವಸ್ಥೆಯ ಹಗರಣಗಳಿಂದ ಲಕ್ಷಾಂತರ ಯುವಕರ ಆಶೋತ್ತರಗಳಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಹೇಳುವ ಮೂಲಕ ಖರ್ಗೆ ಅವರು ನಿರುದ್ಯೋಗ ಮತ್ತು ನೇಮಕಾತಿ ಕುರಿತು ಕಳವಳ ವ್ಯಕ್ತಪಡಿಸಿದರು. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಪ್ರಸ್ತಾಪಿಸಿದ ಅವರು, ಹೆಚ್ಚುತ್ತಿರುವ ಆಡಳಿತಾತ್ಮಕ ವೈಫಲ್ಯಗಳ ವಿರುದ್ಧ ವಿರೋಧ ಪಕ್ಷಗಳು ಸಂಘಟಿತವಾಗಿ ಪ್ರತಿಕ್ರಿಯಿಸಬೇಕು ಎಂದು ಕರೆ ನೀಡಿದರು.

ದುರ್ಬಲ ಹೂಡಿಕೆ, ಖಾಸಗಿ ಏಕಸ್ವಾಮ್ಯದ ಬೆಳವಣಿಗೆ, ಎಂಎಸ್‌ಎಂಇಗಳು ಎದುರಿಸುತ್ತಿರುವ ಸವಾಲುಗಳು ಮತ್ತು ದಮನಿತ ಸಮುದಾಯಗಳ ಮೇಲಿನ ದೌರ್ಜನ್ಯಗಳ ಕುರಿತು ಖರ್ಗೆ ಮತ್ತಷ್ಟು ಕಳವಳ ವ್ಯಕ್ತಪಡಿಸಿದರು. ಭಾರತದ ಸುದೀರ್ಘ ಇತಿಹಾಸದ ಮೌಲ್ಯಗಳು ಮತ್ತು ನಿಲುವುಗಳೊಂದಿಗೆ ಕೇಂದ್ರ ಸರ್ಕಾರವು ರಾಜಿ ಮಾಡಿಕೊಂಡಿದೆ ಎಂದು ಪ್ರತಿಪಾದಿಸುವ ಮೂಲಕ ಸರ್ಕಾರದ ವಿದೇಶಾಂಗ ನೀತಿಯನ್ನು ಟೀಕಿಸಿದರು.

ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 23 ವಿರೋಧ ಪಕ್ಷಗಳ ಪ್ರತಿನಿಧಿಗಳು ಮತ್ತು ಪಕ್ಷೇತರ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಭಾಗವಹಿಸಿದ್ದರು.

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಐಎನ್‌ಸಿ), ಸಮಾಜವಾದಿ ಪಾರ್ಟಿ (ಎಸ್‌ಪಿ), ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಶಿವಸೇನಾ (ಯುಬಿಟಿ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಪವಾರ್ ಬಣ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) ಲಿಬರೇಶನ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ವಿಡುದಲೈ ಚಿರುತ್ತೈಗಳ್ ಕಚ್ಚಿ, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ಕೇರಳ ಕಾಂಗ್ರೆಸ್, ಕೇರಳ ಕಾಂಗ್ರೆಸ್ (ಎಂ), ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿ, ಭಾರತ ಆದಿವಾಸಿ ಪಾರ್ಟಿ, ಲೋಕದಳ, ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ಮತ್ತು ಶೇತ್ಕರಿ ಕಾಮಗಾರ್ ಪಕ್ಷಗಳ ಪ್ರತಿನಿಧಿಗಳು ಇಂಡಿಯಾ ಒಕ್ಕೂಟದ ಸಭೆಯಲ್ಲಿ ಭಾಗವಹಿಸಿದ್ದರು.











ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...