Homeಮುಖಪುಟಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

ಪಂಜಾಬ್ | ನಕಲಿ ಮದ್ಯ ಸೇವಿಸಿ 15 ಮಂದಿ ಸಾವು; 10 ಜನರ ಸ್ಥಿತಿ ಗಂಭೀರ

- Advertisement -
- Advertisement -

ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದ ಐದು ಹಳ್ಳಿಗಳಲ್ಲಿ ವಿಷಕಾರಿ ನಕಲಿ ಮದ್ಯ ಸೇವಿಸಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಪಂಜಾಬ್ ಪೊಲೀಸರು ಪ್ರಮುಖ ಮದ್ಯ ಸರಬರಾಜುದಾರ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. ನಕಲಿ ಮದ್ಯದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ.

ಗಂಭೀರ ಸ್ಥಿತಿಯಲ್ಲಿರುವವರನ್ನು ಅಮೃತಸರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಅಮೃತಸರದ ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಗ್ರಾಮಗಳ ಯುವಕರು ಸಾವಿಗೀಡಾಗಿದ್ದಾರೆ. ಭುಲ್ಲರ್, ತಂಗ್ರಾ ಮತ್ತು ಸಂಧಾ ಗ್ರಾಮಗಳ ನಿವಾಸಿಗಳೂ ನಕಲಿ ಮದ್ಯ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಗ್ರಾಮಗಳ ಅನೇಕ ಮಂದಿ ಅಸ್ವಸ್ಥರಾಗಿದ್ದಾರೆ.

ಅಕ್ರಮ ಮದ್ಯ ವಿತರಣಾ ಜಾಲದ ಕಿಂಗ್‌ಪಿನ್ ಸಾಹಿಬ್ ಸಿಂಗ್ ಮತ್ತು ಮುಖ್ಯ ಪೂರೈಕೆದಾರ ಪ್ರಭ್ಜಿತ್ ಸಿಂಗ್, ಇತರ ಆರೋಪಿಗಳಾದ ಕುಲ್ಬೀರ್ ಸಿಂಗ್, ಗುರ್ಜಂತ್ ಸಿಂಗ್ ಮತ್ತು ನಿಂದರ್ ಕೌರ್ ಅನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಹಿಬ್ ಸಿಂಗ್ ಅನ್ನು ಅಮೃತಸರದ ರಾಜಸಾನ್ಸಿ ಪ್ರದೇಶದಲ್ಲಿ ಬಂಧಿಸಲಾಗಿದೆ. ಶಂಕಿತ ಅಕ್ರಮ ಮದ್ಯ ಪೂರೈಕೆದಾರರನ್ನು ಬಂಧಿಸಲು ಪೊಲೀಸ್ ತಂಡಗಳು ಅಕ್ಕ ಪಕ್ಕದ ರಾಜ್ಯಗಳಿಗೂ ತೆರಳಿವೆ ಎಂದು ವರದಿಯಾಗಿದೆ.

ಅಮೃತಸರ (ಗ್ರಾಮೀಣ) ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣೀಂದರ್ ಸಿಂಗ್ ಮಾತನಾಡಿ, “ನಿನ್ನೆ (ಸೋಮವಾರ) ರಾತ್ರಿ 9:30ರ ಸುಮಾರಿಗೆ ಗ್ರಾಮಗಳ ಜನರು ನಕಲಿ ಮದ್ಯ ಸೇವಿಸಿದ್ದಾರೆ. ನಂತರ ಕೆಲವರಲ್ಲಿ ವಿಷ ಸೇವಿಸಿದ ಲಕ್ಷಣಗಳು ಕಂಡು ಬಂದಿವೆ. ಹಲವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಬಂದಿತ್ತು. ಆರೋಪಿಗಳಿಗೆ ಯಾವ ಸಂಸ್ಥೆಗಳು ಮದ್ಯ ಪೂರೈಸಿವೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಅಕ್ರಮ ಮದ್ಯ ಪೂರೈಕೆದಾರರು ಆನ್‌ಲೈನ್‌ನಲ್ಲಿ ರಾಸಾಯನಿಕವನ್ನು ಆರ್ಡರ್ ಮಾಡಿದ್ದಾರೆ. ನಂತರ ಸ್ಥಳೀಯ ಪೂರೈಕೆದಾರರು ಅಕ್ರಮ ಮದ್ಯವನ್ನು ತಯಾರಿಸಿ ಪ್ಯಾಕೆಟ್‌ಗಳಲ್ಲಿ ಹಾಕಿ ದಿನಗೂಲಿ ಕಾರ್ಮಿಕರಿಗೆ ಮಾರಾಟ ಮಾಡಿದ್ದಾರೆ. ಮುಖ್ಯ ಪೂರೈಕೆದಾರರನ್ನು ಬಂಧಿಸಲು ನಮ್ಮ ತಂಡಗಳು ಇತರ ರಾಜ್ಯಗಳಿಗೆ ತೆರಳಿವೆ. ಭಾರತೀಯ ನ್ಯಾಯ ಸಂಹಿತೆ ಮತ್ತು ಅಬಕಾರಿ ಕಾಯ್ದೆಯಡಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಅವರು ಮಣೀಂದರ್ ಸಿಂಗ್ ತಿಳಿಸಿದ್ದಾರೆ.

ಅಮೃತಸರದ ಉಪ ಆಯುಕ್ತ ಸಾಕ್ಷಿ ಸಾಹ್ನಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

“ಮಜಿತಾ ಪ್ರದೇಶದಲ್ಲಿ ಒಂದು ದುರದೃಷ್ಟಕರ ದುರಂತ ಸಂಭವಿಸಿದೆ. ನಿನ್ನೆ ರಾತ್ರಿ ಐದು ಹಳ್ಳಿಗಳಲ್ಲಿ ಅಕ್ರಮ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ನಮಗೆ ಮಾಹಿತಿ ಬಂದಿತ್ತು. ತಕ್ಷಣ ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿದೆ. ಆ ತಂಡಗಳು ಇನ್ನೂ ಮನೆ ಮನೆಗೆ ತೆರಳಿ ಜನರಲ್ಲಿ ಏನಾದರು ಅಸ್ವಸ್ಥೆಯ ಲಕ್ಷಣಗಳು ಇದೆಯೇ? ಎಂಬುದನ್ನು ಪರಿಶೀಲಿಸುತ್ತಿವೆ. ಅಸ್ವಸ್ಥಗೊಂಡವರನ್ನು ಉಳಿಸಲು ನಾವು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ. ಸರ್ಕಾರ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ,” ಎಂದು ಸಾಹ್ನಿ ಹೇಳಿದ್ದಾರೆ.

“ಪ್ರಾಥಮಿಕ ತನಿಖೆಯಲ್ಲಿ ಮೃತರು ಭಾನುವಾರ ಸಂಜೆ ಒಂದೇ ಮೂಲದಿಂದ ಮದ್ಯ ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ. ಅವರಲ್ಲಿ ಕೆಲವರು ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸ್ಥಳೀಯರು ಈ ವಿಷಯವನ್ನು ಪೊಲೀಸರಿಗೆ ತಿಳಿಸದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ತಡವಾಗಿ ಸಂಜೆ ನಮಗೆ ಮದ್ಯ ಸೇವಿಸಿ ಸಾವನ್ನಪ್ಪಿದ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ” ಎಂದು ಮಜಿತಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಆಬ್ತಾಬ್ ಸಿಂಗ್ ಹೇಳಿದ್ದಾರೆ.

ಐದು ವರ್ಷಗಳ ಹಿಂದೆ ಪಂಜಾಬ್‌ನ ತರಣ್ ತರಣ್, ಅಮೃತಸರ ಮತ್ತು ಗುರುದಾಸ್ಪುರ ಜಿಲ್ಲೆಗಳಲ್ಲಿ ಇದೇ ರೀತಿಯ ಕಳ್ಳಭಟ್ಟಿ ದುರಂತ ಸಂಭವಿಸಿತ್ತು. ಆ ಘಟನೆಯಲ್ಲಿ ಸುಮಾರು 130 ಜನರು ಸಾವನ್ನಪ್ಪಿದ್ದರು ಮತ್ತು ಸುಮಾರು 10ಕ್ಕಿಂತ ಹೆಚ್ಚು ಜನರು ವಿಷಪೂರಿತ ಮದ್ಯ ಸೇವಿಸಿ ದೃಷ್ಟಿ ಕಳೆದುಕೊಂಡಿದ್ದರು.

ಈ ದುರಂತ ಘಟನೆಯು ಪಂಜಾಬ್‌ನ ಗ್ರಾಮೀಣ ಭಾಗಗಳಲ್ಲಿ ನಕಲಿ ಮದ್ಯದ ಅನಿಯಂತ್ರಿತ ಪೂರೈಕೆಯ ಬಗ್ಗೆ ಮತ್ತೊಮ್ಮೆ ಕಳವಳ ಹುಟ್ಟುಹಾಕಿದೆ.

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...