Homeಅಂತರಾಷ್ಟ್ರೀಯದೋಣಿ ಮುಳುಗಿ ಕನಿಷ್ಠ 27 ಸಾವು, 100 ನಾಪತ್ತೆ

ದೋಣಿ ಮುಳುಗಿ ಕನಿಷ್ಠ 27 ಸಾವು, 100 ನಾಪತ್ತೆ

- Advertisement -
- Advertisement -

ನೈಜೀರಿಯಾ: ದೋಣಿ ಮುಳುಗಿ ಕನಿಷ್ಠ 27 ಸಾವು, 100 ಮಂದಿ ನಾಪತ್ತೆಯಾಗಿರುವ ದುರ್ಘಟನೆ ನೈಜೀರಿಯಾದಲ್ಲಿ ನಡೆದಿದೆ.

ಇಲ್ಲಿಯವರೆಗೆ ರಕ್ಷಣಾ ತಂಡವು 27 ಶವಗಳನ್ನು ನದಿಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ಸ್ಥಳೀಯ ಮುಳುಗುದಾರರು ಇನ್ನೂ ಶೋಧನಾ ಕಾರ್ಯವನ್ನು ಮುಂದುವರಿಸಿದ್ದಾರೆ ಎಂದು ಕೋಗಿ ರಾಜ್ಯ ತುರ್ತು ಸೇವೆಗಳ ವಕ್ತಾರ ಸಾಂಡ್ರಾ ಮೂಸಾ ತಿಳಿಸಿದ್ದಾರೆ.

ಈ ದುರ್ಘಟನೆ  ನಡೆದು 12 ಗಂಟೆಗಳು ಕಳೆದರೂ ಇಲ್ಲಿಯವರೆಗೆ ಬದುಕುಳಿದವರು ಯಾರೊಬ್ಬರು ಪತ್ತೆಯಾಗಿಲ್ಲವೆಂದು ಅವರು ಹೇಳಿದ್ದಾರೆ.

ಅಲ್ಲಿನ ಆಡಳಿತವು ಈ ಘಟನೆಗೆ ಯಾವುದೇ ಕಾರಣವನ್ನು ದೃಢಪಡಿಸಿಲ್ಲ. ಅಲ್ಲಿನ ಮಾಧ್ಯಮಗಳು ಧೋಣಿಯಲ್ಲಿ ಹೆಚ್ಚಿನ ಜನದಟ್ಟನೆಯೇ ಕಾರಣವೆಂದು ಹೇಳಿವೆ. ನೈಜೀಯಾದ ಕಡಿದಾದ ಪ್ರದೇಶಗಳಲ್ಲಿ ಉತ್ತಮ ರಸ್ತೆಗಳು ಲಭ್ಯವಿಲ್ಲದೇ ಇರುವ ಕಾರಣ ದೋಣಿಗಳಲ್ಲಿ ಹೆಚ್ಚಿನ ಜನ ಪ್ರಯಾಣಿಸುವುದು ಸರ್ವೆಸಾಮಾನ್ಯವೆಂದು ಹೇಳಲಾಗಿದೆ.

ದೋಣಿಯು ಮುಳುಗಿದ ನಂತರ ರಕ್ಷಣಾ ತಂಡವು ಅದರ ದಿಕ್ಕನ್ನು ಪತ್ತೆ ಹಚ್ಚುವಲ್ಲಿ ಮೊದಲು ಸಾಕಷ್ಟು ಸಮಸ್ಯೆಯನ್ನೇದುರಿಸಿದರು ಎಂದು ನೈಜೀರಿಯಾದ ರಾಷ್ಟ್ರೀಯ ತುರ್ತು ನಿಯಂತ್ರಣ ಮಂಡಳಿಯ ಮೇಲ್ವಿಚಾರಕ ಜಸ್ಟೀನ್ ಉವಾಜುರುಯೋನಿ ಮಾಹಿತಿ ನೀಡಿದ್ದಾರೆ.

ಜಲಸಾರಿಗೆಗಾಗಿ ಸುರಕ್ಷತಾ ಕ್ರಮಗಳು ಮತ್ತು ನಿಬಂಧನೆಗಳನ್ನು ಜಾರಿಗೊಳಿಸಲು ಇಲ್ಲಿನ ಅಧಿಕಾರಿಗಳು ಹೆಣಗಾಡುತ್ತಿರುವ ಮಧ್ಯೆ, ಆಫ್ರಿಕಾದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾದ ನೈಜೀರಿಯಾದಲ್ಲಿ ಇಂತಹ ಮಾರಣಾಂತಿಕ ಘಟನೆ ಹೆಚ್ಚು ಕಳವಳಕ್ಕೆ ಕಾರಣವಾಗಿದೆ ಎಂದು ಜಸ್ಟೀನ್‌ ಹೇಳಿದ್ದಾರೆ.

ಬಹುತೇಕ ಇಂತಹ ಘಟನೆಗಳಿಗೆ  ಪ್ರಯಾಣದಲ್ಲಿ ಹೆಚ್ಚಿನ ಜನದಟ್ಟನೆ ಮತ್ತು ದೋಣಿಗಳನ್ನು ಸರಿಯಾಗಿ ನಿಭಾಯಿಸುವಲ್ಲಿನ ಕೊರತೆಯೇ ಪ್ರಮುಖ ಕಾರಣವಾಗಿದೆ. ಜಲ ಸಾರಿಗೆಗಾಗಿ ಅಲ್ಲಿನ ಆಡಳಿತವು ಪ್ರಯಾಣಿಕರಿಗೆ ಜೀವ ರಕ್ಷಾ ಜಾಕೆಟ್‌ ಗಳನ್ನು ಒದಗಿಸುವಲ್ಲಿ ಸಫಲವಾಗಿಲ್ಲ. ಈ ಜೀವ ರಕ್ಷಾ ಕವಚಗಳ ಲಭ್ಯತೆಯ ಕೊರತೆ ಒಂದೆಡೆಯಾದರೆ, ಲಭ್ಯವಿರುವ  ಕವಚಗಳಿಗೆ ದುಬಾರಿ ಬೆಲೆ ಮತ್ತೊಂದು ಕಾರಣವಾಗಿದೆ.

ಇದನ್ನೂ ಓದಿ...ಗರ್ಭಿಣಿ ಮಹಿಳಾ ಖೈದಿಗೆ 6 ತಿಂಗಳು ಜಾಮೀನು: ಇದಕ್ಕೆ ನ್ಯಾಯಾಲಯ ನೀಡಿದ ಸಮರ್ಥನೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...