Homeಮುಖಪುಟದೆಹಲಿ: ಜಂತರ್ ಮಂತರ್‌ನಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ: ಹಲವರ ಬಂಧನ

ದೆಹಲಿ: ಜಂತರ್ ಮಂತರ್‌ನಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ: ಹಲವರ ಬಂಧನ

- Advertisement -
- Advertisement -

ಗಾಝಾದ ಮೇಲೆ ಇಸ್ರೇಲ್ ಯುದ್ಧವನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ ನಡೆದಿದ್ದು, ಈ ವೇಳೆ ಕನಿಷ್ಠ 50 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಜಾ ಪಟ್ಟಿಯ ಮೇಲಿನ ಇಸ್ರೇಲ್ ದಾಳಿಯನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿಗಳ ಸಂಘ(ಎಡಪಂಥೀಯ) ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಜಂತರ್-ಮಂತರ್‌ನಲ್ಲಿ 100ಕ್ಕೂ ಹೆಚ್ಚು ಜನರು ಜಮಾಯಿಸಿದ್ದರು.

ಪ್ರತಿಭಟನಾಕಾರರಿಗೆ ಅನುಮತಿ ಇಲ್ಲದ ಕಾರಣ ಅವರನ್ನು ಬಂಧಿಸಲಾಯಿತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಭಾರೀ ಪೊಲೀಸ್ ಪಡೆಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಪ್ರತಿಭಟನಾಕಾರರು ಜಂತರ್-ಮಂತರ್‌ಗೆ ಬರುತ್ತಿದ್ದಂತೆ ದೆಹಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಇನ್ನು ಪುಣೆ ನಗರದ ಕೆಲವೆಡೆ ರಸ್ತೆಗಳಲ್ಲಿ ಇಸ್ರೇಲ್ ಧ್ವಜದ ಚಿತ್ರವಿರುವ ಸ್ಟಿಕ್ಕರ್‌ಗಳನ್ನು ಅಂಟಿಸಿರುವುದು ಕಂಡುಬಂದಿದ್ದು, ಪೊಲೀಸರು ಈ ಬಗ್ಗೆ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಪೊಲೀಸರ ಪ್ರಕಾರ ಹಮಾಸ್-ಇಸ್ರೇಲ್ ಸಂಘರ್ಷದ ವೇಳೆ ಸಾಮಾಜಿಕ ಸಾಮರಸ್ಯ ಕದಡುವ ಉದ್ದೇಶದಿಂದ ಕೆಲವರು ಇಸ್ರೇಲ್ ಧ್ವಜದ ಸ್ಟಿಕ್ಕರ್‌ಗಳನ್ನು ಕೊಂಡ್ವಾ, ಭವಾನಿ ಪೇಠ್, ನಾನಾ ಪೇಠ್ ಮತ್ತು ಪುಣೆ ಕಂಟೋನ್ಮೆಂಟ್ ಪ್ರದೇಶಗಳಲ್ಲಿ ಅಂಟಿಸಿದ್ದಾರೆ.

ಆರೋಪಿಗಳ ವಿರುದ್ಧ ಸಮರ್ಥ್, ಖಡಕ್, ಲಷ್ಕರ್ ಮತ್ತು ಕೊಂಡ್ವಾ ಪೊಲೀಸ್ ಠಾಣೆಗಳಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 153ರಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆ ಉಪ ಪೊಲೀಸ್ ಆಯುಕ್ತ ಸಂದೀಪ್ ಸಿಂಗ್ ಗಿಲ್ ಈ ಕುರಿತು ಪ್ರತಿಕ್ರಿಯಿಸಿದ್ದು, ಸಮರ್ಥ್ ಮತ್ತು ಖಡಕ್ ಪೊಲೀಸ್ ಠಾಣೆ ವ್ಯಾಪ್ತಿಯ ರಸ್ತೆಗಳಲ್ಲಿ ಕೆಲವರು ಇಸ್ರೇಲ್ ಧ್ವಜದ ಸ್ಟಿಕ್ಕರ್‌ಗಳನ್ನು ಅಂಟಿಸಿದ್ದಾರೆ. ನಾವು ಈ ಬಗ್ಗೆ ಎರಡು ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ.

ಲಷ್ಕರ್ ಪೊಲೀಸ್ ಠಾಣೆ ಮತ್ತು ಕೊಂಡ್ವಾ ಪೊಲೀಸ್ ಠಾಣೆಯಲ್ಲಿ ಕೂಡ ಇಸ್ರೇಲ್ ಧ್ವಜದ ಚಿತ್ರವಿರುವ ಸ್ಟಿಕ್ಕರ್‌ಗಳನ್ನು ಅಂಟಿಸಿದ್ದಕ್ಕೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮತೋರ್ವ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿ: ಪಂಜಾಬ್‌: ಪೊಲೀಸ್ ಪೇದೆಯನ್ನು ಥಳಿಸಿ ಕೊಲೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...