Homeಮುಖಪುಟಮುಂದುವರೆದ ಇಸ್ರೇಲ್ ಆಕ್ರಮಣ: ಮತ್ತೆ 67 ಜನರ ಮಾರಣಹೋಮ

ಮುಂದುವರೆದ ಇಸ್ರೇಲ್ ಆಕ್ರಮಣ: ಮತ್ತೆ 67 ಜನರ ಮಾರಣಹೋಮ

- Advertisement -
- Advertisement -

ಭಯೋತ್ಪಾದನೆ ನಿರ್ಮೂಲನೆಯ ನೆಪದಲ್ಲಿ ಮುಗ್ದ ಪ್ಯಾಲೆಸ್ತೀನ್ ನಾಗರಿಕರ ಮೇಲೆ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣಕ್ಕೆ ಸೋಮವಾರ 67 ಜನರು ಬಲಿಯಾಗಿದ್ದಾರೆ.

ಗಾಝಾದ ಅತ್ಯಂತ ಜನ ನಿಬಿಡ ನಗರವಾದ ರಫಾದಲ್ಲಿ ಇಸ್ರೇಲ್ ಅಟ್ಟಹಾಸ ಮೆರೆದಿದ್ದು, ಕಂದಮ್ಮಗಳು ಸೇರಿದಂತೆ 67 ಜನರು ಕೊನೆಯುಸಿರೆಳೆದಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಘಟನೆಯ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳು ಪ್ರಕಟಿಸಿರುವ ಫೋಟೋಗಳು ಕಣ್ಣೀರು ತರಿಸುತ್ತಿವೆ.

ಸೋಮವಾರ ಗಾಝಾದ ದಕ್ಷಿಣದ ನಗರವಾದ ರಫಾದ ವಿವಿಧ ಭಾಗಗಳಲ್ಲಿ 14 ಮನೆಗಳು ಮತ್ತು ಮೂರು ಮಸೀದಿಗಳನ್ನು ಇಸ್ರೇಲ್ ಸೇನೆ ಹೊಡೆದುರುಳಿಸಿವೆ ಎಂದು ಹಮಾಸ್ ಸರ್ಕಾರ ವರದಿ ಮಾಡಿದೆ.

“ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಶಬೌರಾ ಪ್ರದೇಶದಲ್ಲಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ಸರಣಿ ದಾಳಿ ನಡೆಸಲಾಗಿದೆ” ಎಂದು ಇಸ್ರೇಲಿ ಮಿಲಿಟರಿ ಹೇಳಿಕೊಂಡಿದೆ.

ಯುಎಸ್‌ನ ಎಬಿಸಿ ನ್ಯೂಸ್‌ ಜೊತೆ ಮಾತನಾಡಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, “ಹಮಾಸ್ ಅನ್ನು ನಿರ್ಮೂಲನೆ ಮಾಡುವವರೆಗೆ ರಫಾದಲ್ಲಿ ಕಾರ್ಯಾಚರಣೆ ಮುಂದುವರಿಯಲಿದೆ. ಅಲ್ಲಿಂದ ಹೊರ ಬರಲು ಬಯಸುವ ನಾಗರಿಕರಿಗೆ ನಾವು ವ್ಯವಸ್ಥೆಗಳನ್ನು ಮಾಡಿ ಕೊಡುತ್ತೇವೆ” ಎಂದಿದ್ದಾರೆ.

ಸುಮಾರು 130 ದಿನಗಳ ಕಾಲ ರಫಾದಲ್ಲಿ ಹಮಾಸ್ ವಶದಲ್ಲಿದ್ದ ಇಬ್ಬರನ್ನು ರಕ್ಷಿಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ ಸೋಮವಾರ ಮುಂಜಾನೆ ಘೋಷಿಸಿದೆ. ಫೆರ್ನಾಂಡೋ ಸೈಮನ್ ಮರ್ಮನ್ ಮತ್ತು ಲೂಯಿಸ್ ಹರ್ ಎಂಬ ಇಬ್ಬರನ್ನುಅಕ್ಟೋಬರ್ 7ರಂದು ಹಮಾಸ್ ಕಿಬ್ಬುಟ್ಜ್ ನಿರ್ ಯಿಟ್ಜಾಕ್‌ನಿಂದ ಅಪಹರಿಸಿತ್ತು. ಅವರನ್ನು ರಕ್ಷಿಸಿದ್ದೇವೆ. ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದೆ.

ಅಲ್‌ ಜಝೀರಾ ವರದಿಯ ಪ್ರಕಾರ, ಪ್ರಸ್ತುತ ಸುಮಾರು 1.4 ಮಿಲಿಯನ್ ಪ್ಯಾಲೆಸ್ತೀನಿಯನ್ನರು ರಫಾದಲ್ಲಿ ಆಶ್ರಯ ಪಡೆದಿದ್ದಾರೆ. ಅನೇಕರು ಡೇರೆಗಳಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ಆಹಾರ, ನೀರು ಮತ್ತು ಔಷಧ ಆಹಾಕಾರ ಉಂಟಾಗಿದೆ.

ಇಸ್ರೇಲ್ ಮತ್ತು ಯುಎಸ್‌ ಜಂಟಿಯಾಗಿ ರಫಾದ ಜನರಿಗೆ ಅಗತ್ಯ ಸಾಮಾಗ್ರಿ ಒದಗಿಸುವ ಜವಬ್ದಾರಿ ವಹಿಸಿಕೊಂಡಿದೆ. ಜನರಿಗೆ ಪುನರ್ವಸತಿ ಕಲ್ಪಿಸಿರುವ ರಫಾ ನಗರದಲ್ಲೂ ಇಸ್ರೇಲ್ ಆಕ್ರಮಣ ಪ್ರಾರಂಭಿಸಿರುವುದಕ್ಕೆ ಮಾನವ ಹಕ್ಕುಗಳ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ. ಮಾಧ್ಯಮ ವರದಿಗಳ ಪ್ರಕಾರ, ಇಸ್ರೇಲ್ ದಾಳಿಯಿಂದ ಮೃತಪಟ್ಟ ಗಾಝಾ ನಾಗರಿಕರ ಸಂಖ್ಯೆ 28 ಸಾವಿರ ದಾಟಿದೆ.

ಇದನ್ನೂ ಓದಿ: ರೈತರಿಂದ ಇಂದು ‘ದಿಲ್ಲಿ ಚಲೋ’: ಕೇಂದ್ರದ ಮನವೊಲಿಸುವ ತಂತ್ರ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...