Homeಮುಖಪುಟತಮಿಳುನಾಡು: 2 ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಸ್ಪೋಟ; 9 ಮಂದಿ ಸಾವು

ತಮಿಳುನಾಡು: 2 ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಸ್ಪೋಟ; 9 ಮಂದಿ ಸಾವು

- Advertisement -
- Advertisement -

ತಮಿಳುನಾಡಿನ ಎರಡು ಕಡೆಗಳಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಅವಳಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ.

ತಮಿಳುನಾಡಿನ ವಿರುದುನಗರ ಜಿಲ್ಲೆಯ ಕಮ್ಮಪಟ್ಟಿ ಗ್ರಾಮದಲ್ಲಿರುವ ಎರಡು ಪಟಾಕಿ ಕಾರ್ಖಾನೆಗಳಲ್ಲಿ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಸ್ಪೋಟ ಸಂಭವಿಸಿದ ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ಅಧಿಕಾರಿಗಳನ್ನು ಕಳುಹಿಸಲಾಗಿತ್ತು. ಇದರ ಬೆನ್ನಲ್ಲೇ ಅದೇ ಜಿಲ್ಲೆಯ ಮತ್ತೊಂದು ಘಟಕದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ.

ತಮಿಳುನಾಡಿನಲ್ಲಿ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಮೊದಲ ಸ್ಫೋಟ ಸಂಭವಿಸಿದ್ದು, ಇದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದಾದ ಕೆಲವೇ ನಿಮಿಷಗಳಲ್ಲಿ ಕಮ್ಮಪಟ್ಟಿ ಗ್ರಾಮದ ಇದೇ ಘಟಕದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಎರಡು ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಳಿಕ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಸ್ಫೋಟಕ್ಕೆ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಅತ್ತಿಬೆಲೆ ಬಳಿ ಪಟಾಕಿ ಕಾರ್ಖಾನೆಯಲ್ಲಿ ದುರಂತ ಸಂಭವಿಸಿ 14 ಮಂದಿ ಕಾರ್ಮಿಕರು ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಐವರ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು.

 ಇದನ್ನು ಓದಿ: ಜಾತಿ ತಾರತಮ್ಯದ ವಿರುದ್ಧ ಮಾತನಾಡುವುದು ಸಂವಿಧಾನ ಬಾಹಿರವಲ್ಲ: ಹೈಕೋರ್ಟ್‌ಗೆ ಉದಯನಿಧಿ ಸ್ಟಾಲಿನ್ ಅಫಿಡವಿಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...