Homeಮುಖಪುಟಅಸ್ಸಾಂ DSP ಆಗಿ ನೇಮಕಗೊಂಡ ಓಟಗಾರ್ಟಿ ಹಿಮಾ ದಾಸ್!

ಅಸ್ಸಾಂ DSP ಆಗಿ ನೇಮಕಗೊಂಡ ಓಟಗಾರ್ಟಿ ಹಿಮಾ ದಾಸ್!

ಭತ್ತದ ಗದ್ದೆಯ ತೆವರಿಗಳ ಮೇಲೆ ಬರಿಗಾಲಲ್ಲಿ ಓಡುತ್ತಿದ್ದ ಹಿಮಾದಾಸ್ ಈಗ ವಿಶ್ವ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‍ಶಿಪ್‍ನ ಚಿನ್ನದ ಪದಕ ಮುಡಿಗೇರಿಸಿಕೊಂಡ ಓಟದ ಜಿಂಕೆ.

- Advertisement -
- Advertisement -

ಭಾರತದ ಖ್ಯಾತ ಓಟಗಾರ್ತಿ ಹಿಮಾ ದಾಸ್ ಅವರನ್ನು ಅಸ್ಸಾಂ ಸರ್ಕಾರ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (DSP) ನೇಮಕ ಮಾಡಿದೆ. ಪ್ರಸ್ತುತ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಬಯಸುತ್ತಿರುವ ಹಿಮಾ ದಾಸ್ ಅದಕ್ಕಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

ತನ್ನನ್ನು DSP ಆಗಿ ನೇಮಿಸಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಕ್ರೀಡಾ ಸಚಿವ ಸರ್ಬಾನಂದ ಸೋನೊವಾಲ್ ಅವರಿಗೆ ಹಿಮಾ ಧನ್ಯವಾದ ಅರ್ಪಿಸಿದ್ದು, ಇದು ತನ್ನನ್ನು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಹಿಮಾ ದಾಸ್ ಅವರನ್ನು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲು ನಿರ್ಧರಿಸಿದೆ ಎಂದು ಅಸ್ಸಾಂ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಕಳೆದ ವರ್ಷವೇ ಘೋಷಿಸಿದ್ದರು. 2020-21ರ ಹಣಕಾಸು ವರ್ಷದ ರಾಜ್ಯ ಬಜೆಟ್ ಅನ್ನು ಶುಕ್ರವಾರ ಮಂಡಿಸುವಾಗ ಈ ಘೋಷಣೆ ಮಾಡಿದ್ದರು. ಇಂದು ಅಧಿಕೃತವಾಗಿ ನೇಮಿಸಲಾಗಿದೆ.

ಧಿಂಗ್ ಎಕ್ಸ್‌ಪ್ರೆಸ್ ಎಂದು ಖ್ಯಾತಿಯ ಅಸ್ಸಾಂನ 21 ವರ್ಷದ ಹಿಮಾ ದಾಸ್ ಪ್ರಸ್ತುತ ಎನ್‌ಐಎಸ್-ಪಟಿಯಾಲದಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಗುರಿಯಲ್ಲಿ ತಲ್ಲೀನಳಾಗಿದ್ದಾಳೆ.

ಹಿಮಾ ದಾಸ್ ಹಿನ್ನೆಲೆ

ಭತ್ತದ ಗದ್ದೆಯ ತೆವರಿಗಳ ಮೇಲೆ ಬರಿಗಾಲಲ್ಲಿ ಓಡುತ್ತಿದ್ದ ಹಿಮಾದಾಸ್ ಈಗ ವಿಶ್ವ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‍ಶಿಪ್‍ನ ಚಿನ್ನದ ಪದಕ ಮುಡಿಗೇರಿಸಿಕೊಂಡ ಓಟದ ಜಿಂಕೆ. ಅಸ್ಸಾಂನ ನಾಗಾಂವ ಜಿಲ್ಲೆಯ ಧಿಂಗ್ ಹಳ್ಳಿಯ ಬಡರೈತ ಕುಟುಂಬದ ಈ ಕೂಸಿಗೆ ಕ್ರೀಡಾ ಹಿನ್ನೆಲೆ ಇಲ್ಲ. ಹುಟ್ಟಿದೂರಿನಲ್ಲಿ ಕ್ರೀಡೆಯ ಮೂಲ ಸೌಕರ್ಯದ ಯಾವ ಸವಲತ್ತೂ ಇರಲಿಲ್ಲ. ಇಂಥಾ ಹುಡುಗಿ ಇಡೀ ಜಗತ್ತೇ ನಿಬ್ಬೆರಗಾಗುವಂಥ ಸಾಧನೆ ಮಾಡಿದ್ದಾಳೆ. ಭಾರತದ ಕ್ರೀಡಾ ಇತಿಹಾಸದಲ್ಲೇ ಅಥ್ಲೆಟಿಕ್ಸ್‌ನಲ್ಲಿ ಪ್ರಪ್ರಥಮ ಬಾರಿಗೆ ಚಿನ್ನ ಪಡೆದವಳು ಹಿಮಾ ದಾಸ್!

ಇನ್ನು ಹಿಮಾಳ ವೈಯುಕ್ತಿಕ ಹಿನ್ನೆಲೆಯನ್ನು ಗಮನಿಸಿದರೆ ಅವಳ ಸಾಧನೆಯ ಮಹತ್ವ ನಮ್ಮ ಅರಿವಿಗೆ ಬರುತ್ತದೆ. ಶಾಲಾ ದಿನಗಳಲ್ಲಿ ಹುಡುಗರ ತಂಡದಲ್ಲಿ ಪುಟ್ಬಾಲ್ ಆಡುತ್ತಿದ್ದ ಹಿಮಾ ಫಿನ್ಲೆಂಡ್‍ನಲ್ಲಿ ನಡೆದ 20 ವರ್ಷದೊಳಗಿನ ವಿಶ್ವ ಅಥ್ಲೇಟಿಕ್ ಜೂನಿಯರ್ಸ್ ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಕೇವಲ 51.46 ಸೆಕೆಂಡುಗಳಲ್ಲಿ ಚಿನ್ನದ ಜಯ ಸಾಧಿಸಿ ದಾಖಲೆ ಬರೆದ ಭಾರತದ ಮೊದಲ ಅಥ್ಲೇಟ್.

16 ಜನರ ಅವಿಭಕ್ತ ಕುಟುಂಬದಲ್ಲಿ ಜೋನಿಲಾ ಮತ್ತು ರಂಜಿತ ದಾಸ್ ರೈತ ದಂಪತಿಗಳ ಕೂಸು ಹಿಮ. ಇಡೀ ಕುಟುಂಬ ಇರುವ ಭತ್ತದ ಗದ್ದೆಯಲ್ಲಿ ದುಡಿದರಷ್ಟೇ ಆದಾಯ. ಆದರೆ ಇದಾವುದು ಹಿಮಾ ಸಾಧನೆಗೆ ಅಡ್ಡಿಯಾಗಲೇ ಇಲ್ಲ. ಫುಟ್ಬಾಲ್ ಕನಸು ಕಂಡು, ವಾಸ್ತವದಲ್ಲಿ ಅಥ್ಳೇಟಿಕ್ಸ್‍ನಲ್ಲಿ ಹೆಜ್ಜೆಯಿರಿಸಿದ ಹಿಮಾಗೆ ಗುವಾಹಟಿಯ ಯುವಜನ ಕ್ರೀಡಾ ಇಲಾಖೆಯ ತರಬೇತುದಾರ ನಿಪೋ ದಾಸ್ ಬೆಂಬಲವಾಗಿ ನಿಂತರು. ರಾಷ್ಟ್ರೀಯ ತಂಡದ ಕೋಚ್ ಬಸಂತ ಸಿಂಗ್ ಹಿಮಾಳ ಹಾದಿಯನ್ನು ಮತ್ತಷ್ಟು ಸ್ಪಷ್ಟ ಮತ್ತು ನಿಚ್ಚಳವಾಗಿಸಿದರು. ಪಿ.ಟಿ.ಉಷಾ ಕೂಡ ಹಿಮಾಳ ಜೊತೆಯಲ್ಲೇ ಇದ್ದು ಆಕೆಯನ್ನು ಹುರಿದುಂಬಿಸಿದ್ದರು. ಈ ಎಲ್ಲರ ಶ್ರಮವನ್ನು ನಾವು ಗೌರವದಿಂದ ನೆನೆಯಬೇಕು.

ಕೊರೊನಾಕ್ಕೂ ಮೊದಲು ಯೂರೋಪ್ ನಲ್ಲಿ ಹಿಮಾ ದಾಸ್ ರವರ ಸಾಧನೆಯ ವಿವರ ಹೀಗಿದೆ.

ಜುಲೈ 02 ರಂದು ಪೋಲಾಂಡ್ ನಲ್ಲಿ ನಡೆದ ಪ್ರೊಜ್ನಾನ್ ಗ್ರ್ಯಾನ್ ಫ್ರಿ ರೇಸ್ ನಲ್ಲಿ 200 ಮೀಟರ್ ಓಟದಲ್ಲಿ ಚಿನ್ನದ ಗೆಲುವು

ಜುಲೈ 07 ರಂದು ಪೋಲಾಂಡ್ ನಲ್ಲಿ ನಡೆದ ಕುಂಟೋ ಅಥ್ಲೆಟಿಕ್ ಕ್ರೀಡಾಕೂಟದ 200 ಮೀಟರ್ ಓಟದಲ್ಲಿ ಚಿನ್ನದ ಸಾಧನೆ

ಜುಲೈ 13 ರಂದು ಜೆಕ್ ರಿಪಬ್ಲಿಕ್ ನಲ್ಲಿ ನಡೆದ ಕ್ಲಾಡೋ ಅಥ್ಲೆಟಿಕ್ ಕ್ರೀಡಾಕೂಟದ 200 ಮೀಟರ್ ಓಟದಲ್ಲಿ ಚಿನ್ನದ ಪದಕ

ಜುಲೈ 17 ರಂದು ಜೆಕ್ ರಿಪಬ್ಲಿಕ್ ನಲ್ಲಿ ನಡೆದ ತಬೂರ್ ಅಥ್ಲೆಟಿಕ್ ಕೂಟದಲ್ಲಿ ಚಿನ್ನದ ಗೆಲುವು

ಜುಲೈ 20 ರಂದು ಪ್ರಾಗ್ ನಲ್ಲಿ ನಡೆದ ನೊವಾ ಮೆಸ್ಟೊ ಅಥ್ಲೆಟಿಕ್ ಕೂಟದಲ್ಲಿ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ್ದರು.

ಆಗಸ್ಟ್ 19 ರಂದು ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ ಮಿಟಿಂಗ್ ರೇಟರ್ ಸ್ಪರ್ಧೆಯ 300 ಮೀಟರ್ ಓಟದ ವಿಭಾಗದಲ್ಲಿ ಅವರು ಚಿನ್ನ ಗೆದ್ದಿದ್ದಾರೆ.


ಇದನ್ನೂ ಓದಿ: ಭತ್ತದ ಗದ್ದೆಯಿಂದ ವಿಶ್ವ ಅಥ್ಲೆಟಿಕ್ಸ್‌ವರೆಗೆ ಓಡಿದ ಚಿನ್ನದ ಹುಡುಗಿ ಹಿಮಾ ದಾಸ್ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...