ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ನಕಲಿ ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಕುರಿತು ಇಂದು (ಡಿ.25) ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು “ನಕಲಿ ಪ್ರಕರಣದಲ್ಲಿ ಅತಿಶಿ ಅವರ ಬಂಧನಕ್ಕೂ ಮುನ್ನ ಎಎಪಿಯ ಹಿರಿಯ ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ. ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿ ಯೋಜನೆಯಂತಹ ಕಲ್ಯಾಣ ಯೋಜನೆಗಳನ್ನು ಕಂಡು ಕೆಲವರು ನಲುಗಿ ಹೋಗಿದ್ದಾರೆ. ಹೀಗಾಗಿ, ಇಂತಹ ಕೆಲಸಕ್ಕೆ ಕೈ ಹಾಕಬಹುದು” ಎಂದಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಈ ಸಂಬಂಧ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.
महिला सम्मान योजना और संजीवनी योजना से ये लोग बुरी तरह से बौखला गए हैं।
अगले कुछ दिनों में फ़र्ज़ी केस बनाकर आतिशी जी को गिरफ्तार करने का इन्होंने प्लान बनाया है
उसके पहले “आप” के सीनियर नेताओं पर रेड की जायेंगी
आज 12 बजे इस पर प्रेस कांफ्रेंस करूँगा।
— Arvind Kejriwal (@ArvindKejriwal) December 25, 2024
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ಹಿರಿಯ ನಾಗರಿಕರು ಮತ್ತು ಮಹಿಳೆಯರಿಗಾಗಿ ಸಂಜೀವಿನಿ ಮತ್ತು ಮಹಿಳಾ ಸಮ್ಮಾನ್ ಎಂಬ ಯೋಜನೆಗಳನ್ನು ದೆಹಲಿ ಸರ್ಕಾರ ಘೋಷಿಸಿದೆ.
ಸಂಜೀವಿನಿ ಯೋಜನೆಯಡಿ 60 ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಸೇವೆ ನೀಡುವ ಭರವಸೆ ನೀಡಲಾಗಿದೆ. ಮಹಿಳಾ ಸಮ್ಮಾನ್ ಯೋಜನೆಯಡಿ ಅರ್ಹ ಮಹಿಳೆಯರಿಗೆ ಮಾಸಿಕ 1 ಸಾವಿರ ರೂ. ನೀಡಲಾಗುವುದು. ಚುನಾವಣೆ ಬಳಿಕ ಎಎಪಿ ಮತ್ತೆ ಅಧಿಕಾರಕ್ಕೆ ಬಂದರೆ ಈ ಮೊತ್ತವನ್ನು 2,100 ರೂ.ಗೆ ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ, ಆದಿವಾಸಿ, ಎಡಪಕ್ಷಗಳಿಂದ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ


