HomeUncategorizedಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ಆತ್ಮನಿರ್ಭರ ಭಾರತ ಯೋಜನೆ: ಎರಡನೇ ಹಂತದ ವಿವರಣೆಯ ಮುಖ್ಯಾಂಶಗಳು

ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

- Advertisement -
- Advertisement -

ಪ್ರಧಾನಿ ಮೋದಿ ಘೋಷಿಸಿದ್ದ ಕೊರೊನಾ ವಿಶೇಷ ಪ್ಯಾಕೇಜ್ ಇದರ ಇನ್ನಷ್ಟು ವಿವರಗಳನ್ನು ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ನೀಡಿದ್ದಾರೆ. ಅವರು ನಿನ್ನೆಯಷ್ಟೇ ವಿವಿಧ ವಿಭಾಗಗಳಿಗೆ ಎಷ್ಟು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದರಾದರೂ, ಮುಂದಿನ ದಿನಗಳಲ್ಲೂ ಇದರ ಬಗೆಗಿನ ಮಾಹಿತಿಯನ್ನು ನೀಡಲು ನಮ್ಮ ತಂಡ ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಹೇಳಿದ್ದರು.

ಪತ್ರಿಕಾಗೋಷ್ಟಿಯ ಆರಂಭದಲ್ಲಿಯೆ ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಿ ಮತ್ತು ಸಣ್ಣ ರೈತರ ಮೇಲೆ ಇಂದಿನ ಉಪಕ್ರಮಗಳು ಕೇಂದ್ರೀಕರಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಭಾಷಣದ ಮುಖ್ಯಾಂಶಗಳು:

ಬೆಲೆಯ ಮೇಲಿನ ಸಾಲದ ಬಡ್ಡಿ ಪಾವತಿ ಹಾಗೂ ತ್ವರಿತ ಮರುಪಾವತಿಯನ್ನು ಮೇ 31 ಕ್ಕೆ ವಿಸ್ತರಣೆ.

ವಲಸಿಗ ಕಾರ್ಮಿಕರಿಗೆ ಆಶ್ರಯ ಕಲ್ಪಿಸಲು ಹಾಗೂ ಅವರಿಗೆ ಆಹಾರ ಮತ್ತು ನೀರು ಇತ್ಯಾದಿಗಳನ್ನು ಒದಗಿಸಲು ’ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ’ ಬಳಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಅನುಮತಿ.

ಕೊರೊನಾ ಅವಧಿಯಲ್ಲಿ 12,000 ಸ್ವ-ಸಹಾಯ ಗುಂಪುಗಳು 3 ಕೋಟಿಗೂ ಹೆಚ್ಚು ಮಾಸ್ಕ್‌ಗಳನ್ನು ಮತ್ತು 1.2 ಲಕ್ಷ ಲೀಟರ್ ಸ್ಯಾನಿಟೈಜರ್‌ಗಳನ್ನು ಉತ್ಪಾದಿಸಿವೆ. ಕಳೆದ ಎರಡು ತಿಂಗಳಲ್ಲಿ ನಗರ ಬಡವರಿಗಾಗಿ 7,200 ಹೊಸ ಸ್ವಸಹಾಯ ಸಂಘಗಳನ್ನು ರಚನೆ.

ಮುಂದಿನ 2 ತಿಂಗಳವರೆಗೆ ಎಲ್ಲಾ ವಲಸಿಗರಿಗೆ ಉಚಿತ ಆಹಾರ ಧಾನ್ಯಗಳು ಸರಬರಾಜು. ಇದರ ಉಪಯೋಗ ಕಾರ್ಡ್ ರಹಿತರಿಗೂ ಸಿಗಲಿದ್ದು, ಒಬ್ಬ ವ್ಯಕ್ತಿಗೆ 5 ಕೆಜಿ ಗೋಧಿ / ಅಕ್ಕಿ ಮತ್ತು ಕುಟುಂಬಕ್ಕೆ 1 ಕೆಜಿ ಬೇಳೆಯನ್ನು 2 ತಿಂಗಳವರೆಗೆ ನೀಡಲಾಗುತ್ತದೆ. ಇದಕ್ಕಾಗಿ 3500 ಕೋಟಿ ರೂ. ಖರ್ಚು ಆಗಲಿದ್ದು, ಇದರಿಂದ 8 ಕೋಟಿ ವಲಸಿಗರಿಗೆ ಲಾಭ.

ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಗೆ ಬರಲಿದ್ದು, 23 ರಾಜ್ಯಗಳಲ್ಲಿ 67 ಕೋಟಿ ಫಲಾನುಭವಿಗಳು ಸಾರ್ವಜನಿಕ ವಿತರಣಾ ವ್ಯವಸ್ಥೆಯ 83% ಜನಸಂಖ್ಯೆಯಷ್ಟನ್ನು ಒಳಗೊಂಡಿದೆ. ಇದು ಆಗಸ್ಟ್ 2020 ರ ವೇಳೆಗೆ ಜಾರಿಯಾಗಲಿದೆ.

ನಗರಗಳಲ್ಲಿ ಸರಕಾರದ ಅನುದಾನಿತ ವಸತಿಗಳನ್ನು ರಿಯಾಯಿತಿ ದರದಲ್ಲಿ ಕೈಗೆಟುಕುವ ಬಾಡಿಗೆ ವಸತಿ ಸಂಕೀರ್ಣಗಳಾಗಿ ಪರಿವರ್ತನೆ. ಈ ಮೂಲಕ ವಲಸೆ ಕಾರ್ಮಿಕರು ಹಾಗೂ ನಗರ ಬಡವರಿಗೆ ಕೈಗೆಟುಕುವ ಬಾಡಿಗೆ ದರದಲ್ಲಿ ವಸತಿ ಯೋಜನೆ ಪ್ರಾರಂಭ.

ಮುದ್ರಾ-ಶಿಶು ಯೋಜನೆಯ ಸಾಲ ಪಾವತಿಸುವವರಿಗೆ 12 ತಿಂಗಳ ಅವಧಿಗೆ 2% ಬಡ್ಡಿ ಸಬ್ವೆನ್ಷನ್. ಇದಕ್ಕಾಗಿ 1500 ಕೋಟಿ ರೂ.

50 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ವಿಶೇಷ ಸಾಲ ಸೌಲಭ್ಯ, ಇದಕ್ಕಾಗಿ 5000 ಕೋಟಿ ರೂ.

ವಾರ್ಷಿಕ 6-18 ಲಕ್ಷ ರೂ ಆದಾಯ ಗಳಿಸುವ ಮಧ್ಯಮ ಆದಾಯದ ಗುಂಪುಗಳಿಗೆ ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮನ್ನು ಮಾರ್ಚ್ 2021 ರವರೆಗೆ ವಿಸ್ತರಣೆ. ಇದರಿಂದ 2020-21ರ ಅವಧಿಯಲ್ಲಿ 2.5 ಲಕ್ಷ ಮಧ್ಯಮ ಆದಾಯದ ಕುಟುಂಬಗಳಿಗೆ ಲಾಭ.

ಗ್ರಾಮೀಣ ಸಹಕಾರ ಬ್ಯಾಂಕುಗಳು ಮತ್ತು ಆರ್‌ಆರ್‌ಬಿಗಳ ಬೆಳೆ ಸಾಲದ ಅವಶ್ಯಕತೆಗಾಗಿ ನಬಾರ್ಡ್‌ನಿಂದ 30,000 ಕೋಟಿ ರೂ.ಗಳ ಹೆಚ್ಚುವರಿ ಮರು ಹಣಕಾಸು ಬೆಂಬಲ.

ನಬಾರ್ಡ್ ಮೂಲಕ 30,000 ಕೋಟಿ ರೂ. ಹೆಚ್ಚುವರಿ ತುರ್ತು ಕಾರ್ಯ ಬಂಡವಾಳ ನಿಧಿ. ಇದರಿಂದಾಗಿ 3 ಕೋಟಿ ರೈತರಿಗೆ ಲಾಭ.

ಕಾಂಪೆನ್ಸೇಟರಿ ಅರಣ್ಯೀಕರಣ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಡಿ ಬುಡಕಟ್ಟು ಹಾಗೂ ಆದಿವಾಸಿಗಳಿಗೆ 6000 ಕೋಟಿ ರೂ.ಗಳ ಮೌಲ್ಯದ ಉದ್ಯೋಗಾವಕಾಶ.

ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ 2.5 ಕೋಟಿ ರೈತರಿಗೆ 2 ಲಕ್ಷ ಕೋಟಿ ರೂ.ಗಳ ರಿಯಾಯಿತಿ ಸಾಲ ಹೆಚ್ಚಳ.


ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ!


ಬಿಜೆಪಿಯೇನೋ ದ್ರೋಹ ಮಾಡಿತು; ಆದರೆ ಕಾಂಗ್ರೆಸ್ಸೇಕೆ ಕೈ ಬಿಟ್ಟಿತು? ಸದ್ದು…. ಈ ಸುದ್ದಿಗಳೇನಾದವು? – 09 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...