Homeದಲಿತ್ ಫೈಲ್ಸ್ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

- Advertisement -
- Advertisement -

ಕೋಲಾರ ಜಿಲ್ಲೆಯ ಪೆತ್ತಾಂಡ್ಲಹಳ್ಳಿಯಲ್ಲಿ ನಡೆದ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಕೋಲಾರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ದೌರ್ಜನ್ಯ ಪೀಡಿತ ಯುವಕನ ಆತ್ಮಹತ್ಯೆಗೆ ಪ್ರಚೋದನೆ ನೀಡಿದವರು ಮತ್ತು ದೌರ್ಜನ್ಯಕ್ಕೆ ಕಾರಣರಾದ ವ್ಯಕ್ತಿಗಳನ್ನು ಕೂಲಂಕುಷ ತನಿಖೆಗೊಳಪಡಿಸಬೇಕು. ಇನ್ನೆಂದು ಇಂತಹ ಪ್ರಕರಣಗಳು ಜರುಗದಂತೆ ಕೋಲಾರ ಜಿಲ್ಲಾಡಳಿತಕ್ಕೆ ದೂರವಾಣಿ ಕರೆ ಮೂಲಕ ಆದೇಶ ನೀಡಲಾಗಿದೆ” ಎಂದಿದ್ದಾರೆ.

ಈ ಪ್ರಕರಣವನ್ನು ಗೃಹಮಂತ್ರಿ ಆರಗ ಜ್ಞಾನೇಂದ್ರರವರ ಗಮನಕ್ಕೆ ತಂದಿದ್ದೇವೆ. ಯಾವ ಕಾರಣಕ್ಕೂ ದಲಿತರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ನವೆಂಬರ್ 30ರಂದು ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕ ಉದಯ್ ಕಿರಣ್‌ರವರ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಸವರ್ಣೀಯರು ಮರಕ್ಕೆ ಕಟ್ಟಿ ಥಳಿಸಿದ್ದರು. ಮೂರು ಬಾರಿ ಹಲ್ಲೆ ಮಾಡಿದ್ದರು. ಆ ಅವಮಾನ ತಾಳಲಾರದೆ ಉದಯ್ ಕಿರಣ್ ಆತ್ಮಹತ್ಯೆ ಮಾಡಿಕೊಂಡಿರುವ ಜಾತಿ ದೌರ್ಜನ್ಯದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಜರುಗಿತ್ತು.

ಪೆತಾಂಡ್ಲಹಳ್ಳಿ ಗ್ರಾಮದ ಸವರ್ಣೀಯ ಜನಾಂಗಕ್ಕೆ ಸೇರಿದ ರಾಜು ಬಿನ್ ಗೋಪಾಲಕೃಷ್ಣಪ್ಪ, ಶಿವರಾಜ್ ಬಿನ್ ಮುನಿವೆಂಕಟಪ್ಪ, ಗೋಪಾಲಕೃಷ್ಣಪ್ಪ ಬಿನ್ ಮುನಿಸ್ವಾಮಿ, ಮತ್ತು ಮುನಿವೆಂಕಟಪ್ಪ ಬಿನ್ ಮುನಿಸ್ವಾಮಿ ಎಂಬುವವರೆ ದೌರ್ಜನ್ಯ ನಡೆಸಿರುವ ಆರೋಪಿಗಳಾಗಿದ್ದು ಸದ್ಯಕ್ಕೆ ತಲೆ ಮರೆಸಿಕೊಂಡಿದ್ದಾರೆ. ಇವರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 341, 34, 504, 306 ಮತ್ತು 323ರ ಅಡಿಯಲ್ಇ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ್ದಕ್ಕೆ ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿತ: ಅವಮಾನ ತಾಳಲಾರದೆ ಆತ್ಮಹತ್ಯೆ

ನಿನ್ನೆ ಗ್ರಾಮಕ್ಕೆ ಭೇಟಿ ನೀಡಿ ದಲಿತ ಮತ್ತು ಪ್ರಗತಿಪರ ಸಂಘಟನೆಯ ಮುಖಂಡರು ಸಭೆ ಸೇರಿ ಪೆತ್ತಾಂಡ್ಲಹಳ್ಳಿ ಬೈಕ್ ಜಾಥಾ ನಡೆಸಲು ತೀರ್ಮಾನಿಸಿದ್ದಾರೆ.

ಪೊಲೀಸರು 24 ಗಂಟೆಗಳ ಒಳಗಾಗಿ ಆರೋಪಿಗಳನ್ನು ಬಂಧಿಸಬೇಕು. ಈ ರೀತಿಯ ಘಟನೆಗಳು ನಡೆಯದಂತೆ ತಡೆಯಬೇಕು. ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ಪರಿಹಾರ, ಮನೆ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು. ಈ ಬೇಡಿಕೆಗಳ ಈಡೇರಿಕೆಗಾಗಿ ಮುಳಬಾಗಿಲಿನಿಂದ ಪೆತ್ತಾಂಡ್ಲಹಳ್ಳಿಗೆ ಬೈಕ್ ಜಾಥ ನಡೆಸಲಾಗುವುದು. ಆರೋಪಿಗಳ ಮನೆ ಎದುರೆ ಸ್ವಾಭಿಮಾನಿ ಸಮಾವೇಶ ನಡೆಸಲಾಗುವುದು. ಪೆತ್ತಾಂಡ್ಲಹಳ್ಳಿ ಜಾಥಾದ ದಿನಾಂಕವನ್ನು ಡಿಸೆಂಬರ್ 6 ರ ಅಂಬೇಡ್ಕರ್ ಪರಿನಿರ್ವಾಣ ದಿನದಂದು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

“ಇದು ಆತ್ಮಹತ್ಯೆ ಎನ್ನುವುದಕ್ಕಿಂತ ಕೊಲೆ ಎಂದು ಕರೆಯಬೇಕಾಗಿದೆ. ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ. ಘಟನೆ ನಡೆದು ಎರಡು ದಿನಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಕೋಲಾರ ಜಿಲ್ಲೆಯಲ್ಲಿನ ಜನಪ್ರತಿನಿಧಿಗಳು ಪ್ರಕರಣವನ್ನು ಖಂಡಿಸಿಲ್ಲ. ಮೂರು ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕರು, ಜಿಲ್ಲೆಯ ದಲಿತ ಸಂಸದರು ಬಾಯಿ ಮುಚ್ಚಿ ಕುಳಿತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಕೋಲಾರದ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಪೆತ್ತಾಂಡ್ಲಹಳ್ಳಿ ಚಲೋಗೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...