Homeಮುಖಪುಟಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ವೇಳೆ ದಾಳಿ: ಗಾಂಧೀಜಿ ಭಾವಚಿತ್ರ ಹಾಗೂ ವೇದಿಕೆ ಧ್ವಂಸ,...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ವೇಳೆ ದಾಳಿ: ಗಾಂಧೀಜಿ ಭಾವಚಿತ್ರ ಹಾಗೂ ವೇದಿಕೆ ಧ್ವಂಸ, ಬಿಜೆಪಿ ಯುವ ಮೋರ್ಚಾ ಕೃತ್ಯ ಎಂದು ಸಿಪಿಐ(ಎಂ) ಆರೋಪ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕ್ರಮಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪಶ್ಚಿಮ ಬಂಗಾಳದ ಬಿರಾಟಿಯಲ್ಲಿ ನಡೆದ ಸಭೆಯು ಹಿಂಸಾಚಾರಕ್ಕೆ ತಿರುಗಿದೆ. ಗಾಂಧಿ ಜಯಂತಿಯಂದು (ಅಕ್ಟೋಬರ್ 2) ಸಿಪಿಐ(ಎಂ) ಬೆಂಬಲಿತ ವಿದ್ಯಾರ್ಥಿ ಸಂಘಟನೆ ‘ಎಸ್‌‌‌ಎಫ್‌ಐ’ ಹಮ್ಮಿಕೊಂಡಿದ್ದ ‘ಪ್ರಜಾಪ್ರಭುತ್ವ ರಕ್ಷಿಸಿ’ ಸತ್ಯಾಗ್ರಹ ಸಭೆಯ ಮೇಲೆ ನಡೆದ ದಾಳಿಯಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರವನ್ನು ನೆಲಕ್ಕೆ ಅಪ್ಪಳಿಸಿ ಧ್ವಂಸಗೊಳಿಸಲಾಗಿದ್ದು, 15ಕ್ಕೂ ಹೆಚ್ಚು ಕಾರ್ಯಕರ್ತರು ಭೀಕರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಉತ್ತರ 24 ಪರಗಣ ಜಿಲ್ಲೆಯ ಬಿರಾಟಿಯ ‘ವಣಿಕ್ ಮೋಡ್’ ಪ್ರದೇಶದಲ್ಲಿ ಪೊಲೀಸರ ಪೂರ್ವ ಅನುಮತಿ ಪಡೆದೇ ಈ ಸಭೆಯನ್ನು ಆಯೋಜಿಸಲಾಗಿತ್ತು. ಆದಾಗ್ಯೂ, ಸಭೆ ಪ್ರಾರಂಭವಾಗುವ ಮುನ್ನವೇ ಕೆಲವು ದುಷ್ಕರ್ಮಿಗಳು ಧ್ವನಿವರ್ಧಕ ವ್ಯವಸ್ಥೆಯ ವೈರ್‌ಗಳನ್ನು ಕಡಿತಗೊಳಿಸಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಈ ಅಡೆತಡೆಗಳ ಹೊರತಾಗಿಯೂ ಎಸ್‌ಎಫ್‌ಐ ನಾಯಕರು ಹಿಂಜರಿಯದೆ ಬ್ಯಾಟರಿ ಚಾಲಿತ ಮೈಕ್ ಬಳಸಿ ಧರಣಿ ಸಭೆಯನ್ನು ಮುಂದುವರಿಸಿದ್ದಾರೆ. ಈ ವೇಳೆ ನೂರಾರು ಸಂಖ್ಯೆಯಲ್ಲಿ ಸ್ಥಳಕ್ಕೆ ಆಗಮಿಸಿದ ದುಷ್ಕರ್ಮಿಗಳು ದಿಢೀರನೆ ವೇದಿಕೆಗೆ ನುಗ್ಗಿ ಸಭಾಂಗಣವನ್ನು ಧ್ವಂಸಗೊಳಿಸಿ ಕಬ್ಬಿಣದ ಸರಳುಗಳು ಮತ್ತು ಟ್ಯೂಬ್‌ಲೈಟ್‌ಗಳಿಂದ ಸಭೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ವೇದಿಕೆಯಲ್ಲಿದ್ದ ಪ್ರಮುಖ ನಾಯಕಿ ದೀಪ್ಸಿತಾ ಧರ್ ಅವರತ್ತ ಕುರ್ಚಿಯನ್ನು ಎಸೆದು ದಾಳಿಗೆ ಯತ್ನಿಸಲಾಯಿತು ಎಂದು ವರದಿಯಾಗಿದೆ.

ಈ ಹಠಾತ್ ದಾಳಿಯಲ್ಲಿ ಸಿಪಿಐ(ಎಂ) ಮತ್ತು ಎಸ್‌ಎಫ್‌ಐನ ಹಲವು ಪದಾಧಿಕಾರಿಗಳು ತೀವ್ರವಾಗಿ ರಕ್ತಸಿಕ್ತಗೊಂಡಿದ್ದಾರೆ. ದಾಳಿಕೋರರಿಂದ ತಮ್ಮ ಕಾರ್ಯಕರ್ತರನ್ನು ರಕ್ಷಿಸಲು ಮಧ್ಯಪ್ರವೇಶಿಸಿದ ಜಿಲ್ಲಾ ಕಮಿಟಿ ಸದಸ್ಯ ಶಿವಶಂಕರ್ ಘೋಷ್ ಅವರ ತಲೆಗೆ ಗಂಭೀರ ಏಟು ಬಿದ್ದಿದ್ದು, ವೈದ್ಯರು ಐದು ಹೊಲಿಗೆಗಳನ್ನು ಹಾಕಿದ್ದಾರೆ. ಇನ್ನು ಎಸ್‌ಎಫ್‌ಐ ಕಾರ್ಯಕರ್ತ ಶುಭಂಕರ್ ದಾಸ್ ಅವರ ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದ ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.

ಈ ದಾಂಧಲೆಯ ಹಿಂದೆ ಬಿಜೆಪಿ ಯುವ ಮೋರ್ಚಾ (BJYM) ಕಾರ್ಯಕರ್ತರ ಕೈವಾಡವಿದೆ ಎಂದು ಸಿಪಿಐ(ಎಂ) ತನ್ನ ಅಧಿಕೃತ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಕಟುವಾಗಿ ಆರೋಪಿಸಿದೆ. ದಾಳಿ ನಡೆಸಿದ ನೈಜ ಆರೋಪಿಗಳು ಸ್ವತಂತ್ರವಾಗಿ ಓಡಾಡುತ್ತಿದ್ದರೂ, ಪೊಲೀಸರು ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಮೂವರು ಪ್ರತಿಭಟನಾಕಾರರನ್ನೇ ಬಂಧಿಸಿದ್ದಾರೆ ಎಂದು ಆಡಳಿತ ವ್ಯವಸ್ಥೆಯ ವಿರುದ್ಧ ಪಕ್ಷವು ಆಕ್ರೋಶ ಹೊರಹಾಕಿದೆ. ಆದಾಗ್ಯೂ, ಈ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿರುವ ಸ್ಥಳೀಯ ಬಿಜೆಪಿ ನಾಯಕರು, ಸಭೆಯಲ್ಲಿ ವ್ಯಕ್ತವಾದ ಸಾರ್ವಜನಿಕ ಆಕ್ರೋಶಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಘಟನೆಯ ನಂತರ ಸ್ಥಳಕ್ಕೆ ಸಿಪಿಐ(ಎಂ) ಹಿರಿಯ ನಾಯಕರಾದ ಸುಜನ್ ಚಕ್ರವರ್ತಿ, ಪಲಾಶ್ ದಾಸ್, ಅತ್ರೇಯಿ ಗುಹಾ ಮತ್ತು ಗಾರ್ಗಿ ಚಟರ್ಜಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಸದ್ಯ ನಿಮ್ತಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರಿ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2021 ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಕಾಲಿನ ಗಾಯದ ‘ಸುಳ್ಳು ನಾಟಕ’ ಆಡಿದ್ದರು: ಸುವೇಂದು ಅಧಿಕಾರಿ ಆರೋಪ

"2021 ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಕಾಲಿಗೆ ಗಾಯವಾಗಿದೆ ಎಂದು 'ಸುಳ್ಳು ನಾಟಕ' ಆಡಿದ್ದರು. ಅವರ ಈ ಸುಳ್ಳು ಹಕ್ಕುಗಳ ಕುರಿತು ಸರ್ಕಾರದಿಂದ ತನಿಖೆ ನಡೆಸಲಾಗುವುದು" ಎಂದು ಪಶ್ಚಿಮ...

SIR ಪ್ರಕ್ರಿಯೆಯ ಅಧಿಕೃತ ದತ್ತಾಂಶ ಬಿಡುಗಡೆ ಮಾಡಿದ ಚುನಾವಣಾ ಆಯೋಗ

ರಾಜ್ಯದಲ್ಲಿ ತೀವ್ರ ಚರ್ಚೆ, ರಾಜಕೀಯ ವಿವಾದ ಹಾಗೂ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕೃತ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ....

ಗ್ಯಾನೇಶ್ ವಿರುದ್ಧ ನಿಲ್ಲದ ಪ್ರತಿಭಟನೆ: ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಸೇರಿದಂತೆ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನವೂ ಮುಂದುವರಿಯಿತು. ನವದೆಹಲಿ ಜಿಲ್ಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಣೆ : ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಯೂತ್ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ, ಇಂಡಿಯನ್ ಯೂತ್ ಕಾಂಗ್ರೆಸ್ (ಐವೈಸಿ) ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಐವೈಸಿ...

ಹೈದರಾಬಾದ್‌| ಪ್ರಶ್ನೆ ಕೇಳಿ, ನಿಮ್ಮ ಮತದಾನದ ಹಕ್ಕನ್ನು ಪಡೆದುಕೊಳ್ಳಿ: ನಟ ಪ್ರಕಾಶ್ ರಾಜ್ ಕರೆ

ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಬೇಕು, ಸರ್ಕಾರಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಬಹುಭಾಷಾ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಮತದಾರರಿಗೆ...

ದೆಹಲಿ: ಸಿಇಸಿ ಗ್ಯಾನೇಶ್‌ ಕುಮಾರ್ ವಿರುದ್ಧದ ಹೋರಾಟಕ್ಕೆ ಕಪಿಲ್ ಸಿಬಲ್ – ಪ್ರಶಾಂತ್ ಭೂಷಣ್ ಸೇರ್ಪಡೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಹಿರಿಯ ವಕೀಲ ಕಪಿಲ್ ಸಿಬಲ್, ವಕೀಲ ಪ್ರಶಾಂತ್ ಭೂಷಣ್, ಎಐಎಸ್‌ಎ...

ಫಾರಂ-7 ಮೂಲಕ ಆಕ್ಷೇಪ: ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ವಿಜಯೇಂದ್ರ ಒತ್ತಾಯ

ಚುನಾವಣಾ ಆಯೋಗದ ನಿಯಮಾನುಸಾರ ಫಾರಂ-7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಎಫ್‌ಐಆರ್ (FIR) ದಾಖಲಿಸಿರುವುದನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಈ ಪ್ರಕರಣಗಳನ್ನು ಕೂಡಲೇ...

ಕೇರಳ ಯುಡಿಎಫ್ ಸರ್ಕಾರದಲ್ಲಿ ಭಿನ್ನಮತದ ಹೊಗೆ: ಸಿಎಂ ಸತೀಶನ್ ಏಕಪಕ್ಷೀಯ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರ ಅಸಮಾಧಾನ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳು ಕಳೆಯುವುದರೊಳಗೇ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷದೊಳಗೆ ಭಿನ್ನಮತ ತೀವ್ರಗೊಳ್ಳುತ್ತಿರುವ ಲಕ್ಷಣಗಳು ಗೋಚರಿಸಿವೆ. ಉನ್ನತ...

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ: ದೆಹಲಿ ಪೊಲೀಸರಿಂದ 3 ಪ್ರಕರಣ ದಾಖಲು; 1 ಸಾವಿರ ಜನ ವಶಕ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು...

ರಾಜ್ಯದ ಬರ ಪರಿಹಾರಕ್ಕೆ 3,705 ಕೋಟಿ ರೂ. ನೀಡಲು ಕೇಂದ್ರಕ್ಕೆ ಮನವಿ: ಸಿಎಂ

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯಿಂದಾಗಿ ಕಂಗಾಲಾಗಿರುವ ರೈತರು ಮತ್ತು ಜನಸಾಮಾನ್ಯರ ನೆರವಿಗೆ ಧಾವಿಸಲು ಕೇಂದ್ರ ಸರ್ಕಾರ ತಕ್ಷಣವೇ ಎನ್‌ಡಿಆರ್‌ಎಫ್ (NDRF) ಮಾನದಂಡಗಳನ್ವಯ 3,705.30 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಡಿ.ಕೆ....