Homeಮುಖಪುಟಅಂಬೇಡ್ಕರ್ ಮನೆ ಮೇಲೆ ದಾಳಿ ಪ್ರಕರಣ: ಇಬ್ಬರು ಶಂಕಿತರ ಬಂಧನ

ಅಂಬೇಡ್ಕರ್ ಮನೆ ಮೇಲೆ ದಾಳಿ ಪ್ರಕರಣ: ಇಬ್ಬರು ಶಂಕಿತರ ಬಂಧನ

ನಾವು ಇಬ್ಬರು ಶಂಕಿತರನ್ನು ಬಂಧಿಸಿದ್ದೇವೆ. ಅದರಲ್ಲಿ ಒಬ್ಬ ಬಹುತೇಕ ಕೃತ್ಯವನ್ನ ಒಪ್ಪಿಕೊಂಡಿದ್ದಾನೆ. ಹೇಳಿಕೆ ಪಡೆಯುತ್ತಿದ್ದೇವೆ ಎಂದು ಝೋನ್‌ 4ರ ಡಿಸಿಪಿ ಸೌರಭ್ ತ್ರಿಪಾಠಿ ತಿಳಿಸಿದ್ದಾರೆ.

- Advertisement -
- Advertisement -

ಮುಂಬೈನ ದಾದರ್ ಪ್ರದೇಶದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಮನೆ ‘ರಾಜ್‌ಗೃಹ’ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ದಾಳಿಗೊಳಗಾದ ಎರಡು ಅಂತಸ್ತಿನ ಪಾರಂಪರಿಕ ಬಂಗಲೆಗೆ 24 ಗಂಟೆಗಳ ರಕ್ಷಣೆ ನೀಡುಲು ಮಹಾರಾಷ್ಟ್ರ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇದರಲ್ಲಿ ಅಂಬೇಡ್ಕರ್ ಮ್ಯೂಸಿಯಂ ಇದ್ದು, ಅಲ್ಲಿ ಬಾಬಾಸಾಹೇಬರ ಪುಸ್ತಕಗಳು, ಭಾವಚಿತ್ರ, ಚಿತಾಭಸ್ಮ ಮತ್ತು ಹಡಗುಗಳು ಕಲಾಕೃತಿಗಳು ಇವೆ.

ಮುಖ್ಯ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಬಂಧಿಸಲಾಗಿದ್ದು, ಆತನ ಹಿನ್ನೆಲೆ ಮತ್ತು ದಾಳಿಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ನಾನು ಸೋಮವಾರ ಹೊರಹೋಗುವಾಗ ಕೆಲವರು ಬಂಗಲೆ ಸುತ್ತ ಅಲೆದಾಡುತ್ತಿದ್ದರು ಎಂದು ಅಂಬೇಡ್ಕರ್‌ರವರ ಮೊಮ್ಮಗ ಭೀಮ್‌ರಾವ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟೆನೆಗೆ ಸಂಬಂಧಿಸಿದಂತೆ ಪೊಲೀಸರು ಅನಾಮಿಕರ ಮೇಲೆ ಸೆಕ್ಷನ್ 427, ಮತ್ತು 447ರ (50ರೂಗು ಮೇಲ್ಪಟ್ಟ ವಸ್ತುಗಳಿಗೆ ಹಾನಿ ಮತ್ತು ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ನಾವು ಇಬ್ಬರು ಶಂಕಿತರನ್ನು ಬಂಧಿಸಿದ್ದೇವೆ. ಅದರಲ್ಲಿ ಒಬ್ಬ ಬಹುತೇಕ ಕೃತ್ಯವನ್ನ ಒಪ್ಪಿಕೊಂಡಿದ್ದಾನೆ. ಹೇಳಿಕೆ ಪಡೆಯುತ್ತಿದ್ದೇವೆ ಎಂದು ಝೋನ್‌ 4ರ ಡಿಸಿಪಿ ಸೌರಭ್ ತ್ರಿಪಾಠಿ ತಿಳಿಸಿದ್ದಾರೆ.

ಮನೆ ಮೇಲಿನ ದಾಳಿಯನ್ನು ಹಲವಾರು ರಾಜಕೀಯ ನಾಯಕರು ಖಂಡಿಸಿದ್ದಾರೆ. ಸಿಎಂ ಉದ್ಧವ್ ಠಾಕ್ರೆ ಘಟೆನಯನ್ನು ಶಾಂಕಿಂಗ್ ಎಂದು ಕರೆದಿದ್ದು, ಶೀಘ್ರ ತನಿಖೆ ಮತ್ತು ಆರೋಪಿಗಳ ಪತ್ತೆಗೆ ಪೊಲೀಸರನ್ನುಒತ್ತಾಯಿಸಿದ್ದಾರೆ. ಅಂಬೇಡ್ಕರ್‌ರವರು ಬರೆದ ಎಲ್ಲಾ ಪುಸ್ತಕಗಳು ಅಲ್ಲಿವೆ. ಇದು ಮಹಾರಾಷ್ಟ್ರದ ಜನರಿಗೆ ತೀರ್ಥಯಾತ್ರೆಯ ಕೇಂದ್ರವಿದ್ದಂತೆ ಎಂದು ಉದ್ಧವ್ ಹೇಳಿದ್ದಾರೆ.

ಅಪರಿಚಿತ ಕಿಡಿಗೇಡಿಗಳು ಮಂಗಳವಾರ ಸಂಜೆ ರಾಜ್‌ಗೃಹದ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿದ್ದಾರೆ. ಮನೆಯ ಕಿಟಕಿ ಗಾಜುಗಳು ಮತ್ತು ಸಿಸಿಟಿವಿ ಕ್ಯಾಮೆರ ಮೇಲೆ ಮನಬಂದಂತೆ ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಮನೆ ಮುಂದಿನ ಗಿಡಗಳನ್ನು ಕಿತ್ತೆಸೆದು ಚೆಲ್ಲಾಪಿಲ್ಲಿ ಮಾಡಲಾಗಿದೆ.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...