Homeಕರ್ನಾಟಕಬಿಜೆಪಿಯ ಆಂತರಿಕ ಕುತಂತ್ರದಿಂದ ಬಿಎಸ್‌ವೈ ಮನೆ ಮೇಲೆ ದಾಳಿ: ಡಿ.ಕೆ.ಶಿವಕುಮಾರ್

ಬಿಜೆಪಿಯ ಆಂತರಿಕ ಕುತಂತ್ರದಿಂದ ಬಿಎಸ್‌ವೈ ಮನೆ ಮೇಲೆ ದಾಳಿ: ಡಿ.ಕೆ.ಶಿವಕುಮಾರ್

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಮೀಸಲಾತಿ ವಿಚಾರದಲ್ಲಿ ಗೊಂದಲ ಮೂಡಿಸಿರುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಜನ ತಮಗೆ ಅನ್ಯಾಯ ಆದಾಗ ಅಧಿಕಾರದಲ್ಲಿರುವವರ ಮೇಲೆ ಆಕ್ರೋಶ ವ್ಯಕ್ತಪಡಿಸುವುದು ಸಹಜ. ಆದರೆ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು, ಸಚಿವರ ಮನೆ ಮೇಲೆ ದಾಳಿ ಆಗದೆ ಯಾವುದೇ ಅಧಿಕಾರ ಇಲ್ಲದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ಆಗಿದೆ ಎಂದರೆ ಇದು ಬಿಜೆಪಿಯ ಕುತಂತ್ರಕ್ಕೆ ಸಾಕ್ಷಿಯಲ್ಲದೆ ಮತ್ತೇನೂ?” ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.

“ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿತ್ತು. ಈಗ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಮನೆಗೆ ಹೋಗಿ ಅವರ ಜತೆ ಉತ್ತಮ ಸಂಬಂಧ ಹೊಂದಿರುವಂತೆ ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಆಂತರಿಕವಾಗಿ ಯಡಿಯೂರಪ್ಪ ಅವರನ್ನು ನಿಯಂತ್ರಿಸಲು ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ನಾನು ಈಗ ಆ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ” ಎಂದಿದ್ದಾರೆ.

“ಈ ಮೀಸಲಾತಿ ವಿಚಾರ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಗೊಂದಲ ಮೂಡಿಸಿದೆ. ಬೇರೆ ರಾಜ್ಯಗಳಲ್ಲಿ ಈಗಾಗಲೇ ಇಂತಹ ಗೊಂದಲದ ಮೀಸಲಾತಿ ತಂದಾಗ ಅದರ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದೆ. ಆದರೂ ಈ ಸರ್ಕಾರ ಜನರಿಗೆ ವಂಚಿಸಲು ಇಬ್ಬರು ಸಚಿವರೇ ಕೂತು ಈ ಸುಳ್ಳು ಮೀಸಲಾತಿಗೆ ಹೆಚ್ಚಳಕ್ಕೆ ಮುಂದಾಗಿದ್ದಾರೆ. ಯಾವ ವರದಿ ಆಧಾರದ ಮೇಲೆ ಸರ್ಕಾರ ಈ ತೀರ್ಮಾನ ಮಾಡಿದೆ? ಹಿಂದುಳಿದ ವರ್ಗಗಳ ಆಯೋಗ ಕಳೆದ ಡಿಸೆಂಬರ್ ನಲ್ಲಿ ನೀಡಿದ ಮಧ್ಯಂತರ ವರದಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಎಂದು ತಿಳಿಸಿದೆಯೇ? ಮಧ್ಯಂತರ ವರದಿ ಮೇಲೆ ಮೀಸಲಾತಿ ಹೆಚ್ಚಳ ಮಾಡಲು ಸಾಧ್ಯವೇ?” ಎಂದು ಕೇಳಿದ್ದಾರೆ.

“ಮೀಸಲಾತಿ ಹೆಚ್ಚಳವಾಗಲಿ ಅಥವಾ ಒಳ ಮೀಸಲಾತಿ ಆಗಲಿ, ಸರಿಯಾದ ಅಧ್ಯಯನ ವರದಿ ಆಧರಿಸಿ, ಸಂವಿಧಾನದಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆ ಹೊರತು ಕೇವಲ ಚುನಾವಣೆ ಗಿಮಿಕ್ ಮಾಡಲು ಏಕಾಏಕಿ ಆದೇಶ ನೀಡಿದರೆ ಜಾರಿಗೆ ಬರುವುದಿಲ್ಲ. ಅಲ್ಪಸಂಖ್ಯಾತರ ಮೀಸಲಾತಿ ಕಸಿದು ನಮಗೆ ನೀಡಿ ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸ್ವಾಮೀಜಿಗಳು ಕೇಳಿದ್ದರೇ? ಒಕ್ಕಲಿಗರು ಹಾಗೂ ಲಿಂಗಾಯತರು ತಮ್ಮ ಜನಸಂಖ್ಯೆ ಆಧಾರದ ಮೇಲೆ ಕ್ರಮವಾಗಿ 12% ಹಾಗೂ 15% ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಮುಸಲ್ಮಾನರಿಂದ ಕಸಿದು 2% ಮೀಸಲಾತಿಗೆ ಬೇಡಿಕೆ ಇಟ್ಟಿರಲಿಲ್ಲ. ಈಗಾಗಲೇ ಮೀಸಲಾತಿ 56% ಆಗಿದ್ದು, ಒಕ್ಕಲಿಗರು ಲಿಂಗಾಯತರು ಮೀಸಲಾತಿ ಸೇರಿಸಿ ವಿಸ್ತರಣೆ ಮಾಡಲಿ” ಎಂದು ಹೇಳಿದ್ದಾರೆ.

“ಅಲ್ಪಸಂಖ್ಯಾತರ ಮೀಸಲಾತಿ ಕಸಿದಿರುವ ಬಗ್ಗೆ ಜೆಡಿಎಸ್ ನಾಯಕರಾದ ಸಿ.ಎಂ. ಇಬ್ರಾಹಿಂ ಅವರು ಇದುವರೆಗೂ ಏನು ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮೀಸಲಾತಿ ಬದಲಾವಣೆ ಮಾಡಬಾರದು ಎಂದು ಆಗ್ರಹಿಸುತ್ತದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರು, ಒಕ್ಕಲಿಗರು, ಲಿಂಗಾಯತರ ಹಿತ ಕಾಯುವ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ಮಾಡಾಳ ವಿರೂಪಾಕ್ಷಪ್ಪ ಅವರ ಬಂಧನದ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಲೋಕಾಯುಕ್ತ ಪೊಲೀಸರು ಕಾನೂನಿನ ಪ್ರಕಾರ ಕರ್ತವ್ಯ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಕೆಲಸ ಅವರು ಮಾಡಲಿ. ಇಷ್ಟು ದಿನ ಬಿಜೆಪಿ ಸರ್ಕಾರ ಅವರನ್ನು ರಕ್ಷಣೆ ಮಾಡಿತ್ತು. ಅವರಿಗೆ ನಿರೀಕ್ಷಣಾ ಜಾಮೀನು ಸಿಗುವವರೆಗೂ ಬಂಧಿಸಿರಲಿಲ್ಲ” ಎಂದು ವಿಷಾದಿಸಿದ್ದಾರೆ.

ಇನ್ನು ಎರಡನೇ ಅಭ್ಯರ್ಥಿ ಪಟ್ಟಿಯಲ್ಲಿ ಗೊಂದಲ ಇದೆಯೇ ಎಂದು ಕೇಳಿದ ಪ್ರಶ್ನೆಗೆ, “ಮಾರ್ಚ್ 30ರ ನಂತರ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಪಟ್ಟಿಯಲ್ಲಿ ಯಾವುದಾದರೂ ಗೊಂದಲ ಕಾಣುತ್ತಿದೆಯೆ? ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ” ಸ್ಪಷ್ಟಪಡಿಸಿದ್ದಾರೆ.

ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮನ್ನು ಸಂಪರ್ಕಿಸಿವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಅದಕ್ಕೆ ಉತ್ತರಿಸಿದ ಶಿವಕುಮಾರ್ ಅವರು, “ಇದು ಸುಳ್ಳು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದ್ದು, ಯಾರ ಬೆಂಬಲವನ್ನು ಪಡೆಯುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷ ಯಾರನ್ನು ಸಂಪರ್ಕ ಮಾಡಿಲ್ಲ. ಅವರನ್ನು ಯಾರೂ ಸಂಪರ್ಕಿಸಿದ್ದಾರೆ ಎಂದು ಹೆಸರು ಬಹಿರಂಗಪಡಿಸಲಿ” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...