Homeರಾಷ್ಟ್ರೀಯಕೇರಳ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಮೇಲೆ ದಾಳಿ; ಬಂಧನ

ಕೇರಳ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಮೇಲೆ ದಾಳಿ; ಬಂಧನ

- Advertisement -
- Advertisement -

ಕೇರಳದ ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಅವರು ಪ್ರಯಾಣಿಸುತ್ತಿದ್ದ ಕಾರನ್ನು ದುಷ್ಕರ್ಮಿಯೊಬ್ಬ ಅಡ್ಡಗಟ್ಟಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಗಿ ವರದಿಯಾಗಿದೆ. ಆರೋಪಿಯನ್ನು ತಿಜೊ ಎಂದು ಗುರುತಿಸಲಾಗಿದ್ದು, ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಮುಖ್ಯ ನ್ಯಾಯಮೂರ್ತಿ ಅವರು ಭಾನುವಾರ ರಾತ್ರಿ ನೆಡುಂಬಶ್ಶೇರಿ ವಿಮಾನ ನಿಲ್ದಾಣದಿಂದ ಮನೆಗೆ ಮರಳುತ್ತಿದ್ದಾಗ ಗೋಶ್ರೀ ಸೇತುವೆ ಬಳಿ ಈ ಘಟನೆ ನಡೆದಿದೆ. ಆರೋಪಿಯು ಇಡುಕ್ಕಿ ಸಮೀಪದ ಉಡಂಬಂಚೋಳ ಮೂಲದವರಾಗಿದ್ದು, ಟ್ರಕ್‌ ಚಾಲಕ ಎಂದು ಪೊಲೀಸರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮದ್ಯದ ಅಮಲಿನಲ್ಲಿದ್ದ ಆರೋಪಿಯು ಮುಖ್ಯ ನ್ಯಾಯಮೂರ್ತಿಯವರ ಕಾರಿನ ಮುಂದೆ ಹಾರಿ ಅದನ್ನು ಅಡ್ಡಗಟ್ಟಿದ್ದಾರೆ. ನಂತರ ನ್ಯಾಯಮೂರ್ತಿಯನ್ನು ನಿಂದಿಸಿದ್ದು, ‘ಇದು ತಮಿಳುನಾಡು ಅಲ್ಲ ಎಂಬುವುದು ನೆನಪಿಡಿ’ ಎಂದು ಬೆದರಿಕೆ ಹಾಕಿದ್ದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮುಖ್ಯ ನ್ಯಾಯಾಧೀಶರ ಗನ್‌ಮ್ಯಾನ್ ನೀಡಿದ ದೂರಿನ ಆಧಾರದ ಮೇಲೆ ಮುಳವುಕಾಡ್ ಪೊಲೀಸರು ಆರೋಪಿಯನ್ನು ಬಂಧಿಸಿ ಐಪಿಸಿ 308 ರ ಅಡಿಯಲ್ಲಿ ಆರೋಪಗಳನ್ನು ದಾಖಲಿಸಿದ್ದಾರೆ. ಆರೋಪಿಯು ಪುತ್ತುವೈಪಿಯಲ್ಲಿರುವ ತನ್ನ ಪತ್ನಿಯ ಮನೆಯಲ್ಲಿ ವಾಸವಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಅಪ್ರಾಪ್ತ ಮುಸ್ಲಿಂ ಹುಡುಗಿಯೊಂದಿಗಿನ ವಿವಾಹ ಕೂಡಾ ‘ಪೋಕ್ಸೋ’ ಅಡಿ ಅಪರಾಧ: ಕೇರಳ ಹೈಕೋರ್ಟ್

ಯಾವುದಾದರೂ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆಯೆ ಎಂದು ಪೊಲೀಸರು ದಾಳಿಯ ಹಿಂದಿನ ಉದ್ದೇಶವನ್ನು ತನಿಖೆ ನಡೆಸುತ್ತಿದ್ದು, ಆದರೆ ಈ ಬಗ್ಗೆ ಅವರಿಗೆ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ‘ಆನ್‌‌ಮನೋರಮ’ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...