Homeಮುಖಪುಟಒತ್ತುವರಿ ತೆರವು ಅಭಿಯಾನದ ವೇಳೆ ಪೌರ ಕಾರ್ಮಿಕರ ಮೇಲೆ ದಾಳಿ; 17 ಜನರ ವಿರುದ್ಧ ಪ್ರಕರಣ...

ಒತ್ತುವರಿ ತೆರವು ಅಭಿಯಾನದ ವೇಳೆ ಪೌರ ಕಾರ್ಮಿಕರ ಮೇಲೆ ದಾಳಿ; 17 ಜನರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಮೀರಾ ಭಾಯಂದರ್ ಮುನ್ಸಿಪಲ್ ಕಾರ್ಪೊರೇಷನ್ (ಎಂಬಿಎಂಸಿ) ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ 17 ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಜನವರಿ 4 ರಂದು ಎಂಬಿಎಂಸಿ ವ್ಯಾಪ್ತಿಯ ಶಾಂತಿನಗರ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯವನ್ನು ಸ್ಥಳೀಯ ಪೊಲೀಸರೊಂದಿಗೆ ಪೌರ ಕಾರ್ಮಿಕರು ಮತ್ತು ಅಧಿಕಾರಿಗಳು ಕೈಗೊಂಡರು. ಆದರೆ, ಇದನ್ನು ವಿರೋಧಿಸಿದ ಬೀದಿ ಬದಿ ವ್ಯಾಪಾರಿಗಳು, ಪೌರಕಾರ್ಮಿಕರನ್ನು ನಿಂದಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪೌರಕಾರ್ಮಿಕರನ್ನು ರಕ್ಷಿಸಲು ಮಧ್ಯಪ್ರವೇಶಿಸಿದ ಕೆಲವರ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ನಯಾನಗರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ದಾಳಿಯಲ್ಲಿ ಗಾಯಗೊಂಡವರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿಗಳ ವಿರುದ್ಧ ಸೂಕ್ತ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್ 2023 ರಲ್ಲಿ, ಬೀದಿ ಬದಿ ವ್ಯಾಪಾರಿಗಳು ಅದೇ ಪ್ರದೇಶದಲ್ಲಿ ಅತಿಕ್ರಮಣ ತೆರವು ಅಭಿಯಾನದ ವಿರುದ್ಧ ಪ್ರತಿಭಟಿಸಿದ್ದರು.

ಇದನ್ನೂ ಓದಿ; ರಾಜಸ್ಥಾನ: ‘ಇಂದಿರಾ ರಸೋಯಿ ಯೋಜನೆ’ ಹೆಸರು ಬದಲಿಸಿದ ಬಿಜೆಪಿ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...