Homeಮುಖಪುಟದೇಶದ ಸಮಗ್ರತೆಯ ಮೇಲಿನ ದಾಳಿ ಸಹಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ದೇಶದ ಸಮಗ್ರತೆಯ ಮೇಲಿನ ದಾಳಿ ಸಹಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

- Advertisement -
- Advertisement -

ಸೈನಿಕರ ತ್ಯಾಗವನ್ನು ಮರೆಯುವುದಿಲ್ಲ, ದೇಶದ ಸಮಗ್ರತೆಯ ಮೇಲಿನ ದಾಳಿ ಸಹಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ.

ಕೋವಿಡ್‌ ನಿಯಂತ್ರಣದ ಬಗ್ಗೆ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್‌ ಆರಂಭಕ್ಕೂ ಮುನ್ನ ಪ್ರಧಾನಿ ಮೋದಿ ಮತ್ತು ಹಲವು ರಾಜ್ಯದ ಮುಖ್ಯಮಂತ್ರಿಗಳು ಹುತಾತ್ಮ ಸೈನಿಕರಿಗೆ ಎರಡು ನಿಮಿಷಗಳ ಮೌನಚಾರಣೆ ಸಲ್ಲಿಸಿದ್ದಾರೆ.

ಲಡಾಖ್ ಮುಖಾಮುಖಿ ಕುರಿತು ಮಾತನಾಡಿದ ಪ್ರಧಾನಿ ಮೋದಿಯವರು ನಮ್ಮ ಸೈನಿಕರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ ಎಂದಿದ್ದಾರೆ.

“ಭಾರತವು ಶಾಂತಿಯನ್ನು ಬಯಸುತ್ತದೆ ಆದರೆ ಪ್ರಚೋದಿಸಿದಾಗ, ಯಾವುದೇ ರೀತಿಯ ಪರಿಸ್ಥಿತಿ ಇರಲಿ, ಭಾರತವು ಸೂಕ್ತವಾದ ಉತ್ತರವನ್ನು ನೀಡಲು ಸಮರ್ಥವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಜೂನ್ 19 ರಂದು ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿದ್ದು, ಈ ವರ್ಚುವಲ್ ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ.


ಇದನ್ನೂ ಓದಿ: ಇನ್ನಷ್ಟು ಘರ್ಷಣೆ ನೋಡಲು ಬಯಸುವುದಿಲ್ಲ: ಚೀನಾ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

0
"ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ" ಎಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ. ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆಯನ್ನು ನಾವು...