Homeಕರ್ನಾಟಕಜೈಭೀಮ್ ಹಾಡಿದ ದಲಿತ ಯುವಕರ ಮೇಲೆ ಹಲ್ಲೆ: ಪೊಲೀಸ್‌ ಅಧಿಕಾರಿ ಬಂಧನಕ್ಕೆ ರೈತ ಸಂಘ ಒತ್ತಾಯ

ಜೈಭೀಮ್ ಹಾಡಿದ ದಲಿತ ಯುವಕರ ಮೇಲೆ ಹಲ್ಲೆ: ಪೊಲೀಸ್‌ ಅಧಿಕಾರಿ ಬಂಧನಕ್ಕೆ ರೈತ ಸಂಘ ಒತ್ತಾಯ

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ‌ಗಿಡದ ಮುದ್ದೇನಹಳ್ಳಿಯಲ್ಲಿ ಟಾಟಾ ಎಸಿ ವಾಹನದಲ್ಲಿ ‘ಜೈಭೀಮ್‌’ ಹಾಡು ಹಾಕಿದ್ದರೆಂಬ ಕಾರಣಕ್ಕೆ ದಲಿತ ಯುವಕರ ಮೇಲೆ ಹಲ್ಲೆ ಮಾಡಿದ ರೈಲ್ವೆ ಪೊಲೀಸ್ ಚಂದ್ರಶೇಖರ್‌ ಅವರನ್ನು ಸೇವೆಯಿಂದ ಅಮಾನತು ಮಾಡಿ ಬಂಧಿಸಬೇಕು ಎಂದು ದೇವದಾಸಿ ಮಹಿಳಾ ವಿಮೋಚನಾ ಸಂಘ, ಮಕ್ಕಳ ಹೋರಾಟ ಸಮಿತಿ ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸಿದವು.

ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದ ಸಂಘಟನಾಕಾರರು ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದ್ದು, ಇದೇ ವೇಳೆ ದುರಗಮ್ಮ ಮಾತನಾಡಿ, “ವಾಹನದಲ್ಲಿ ಅಂಬೇಡ್ಕರ್ ಅವರ ಹಾಡು ಹಾಕಿದ್ದಕ್ಕೆ ಮನಸೋ ಇಚ್ಛೆ ಹೊಡೆಯುವ ಹಕ್ಕು ಕೊಟ್ಟವರಾರು? ಅದರಿಂದ ಸಾರ್ವಜನಿವಾಗಿ ತೊಂದರೆಯಾಗಿದ್ದರೆ ತಿಳಿಹೇಳಬೆಕಿತ್ತು‌. ಅವರ ಮೇಲೆ ಕೈ ಮಾಡುವುದು ಮತ್ತು ದಲಿತರ ಯುವಕರ ಜಾತಿ ನಿಂದನೆ ಮಾಡುವುದು, ದೌರ್ಜನ್ಯ ಮಾಡುವುದು ಜಾತಿತಾರತಮ್ಯ ಹಾಗೂ ಅಸ್ಪೃಶ್ಯಾಚರಣೆ ಅಸಹನೆಯ ಪರಾಕಾಷ್ಠೆಯಾಗಿದೆ” ಎಂದು ದೂರಿದರು.

ಪೊಲೀಸ್ ಚಂದ್ರಶೇಖರ್ ಕೇವಲ ದಲಿತ ಯುವಕರ ಮೇಲೆ ಹಲ್ಲೆ ನಡೆಸಿದ್ದಲ್ಲ. ಬದಲಿಗೆ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಅಪಮಾನಿಸಿದ್ದಾನೆ. ಆದ್ದರಿಂದ ಆತನ ಮೇಲೆ ಕೂಡಲೇ ಕಾನೂನು ಕ್ರಮ ಜರುಗಿಸಬೇಕು. ಅದೇ ರೀತಿ, ತೀವ್ರ ಹಲ್ಲೆಗೊಳಗಾಗಿರುವ ಯುವಕರ ಶುಶ್ರೂಷೆಯ ವೆಚ್ಚ ಸೇರಿದಂತೆ ಪರಿಹಾರವನ್ನೂ ಕೂಡಲೇ ಒದಗಿಸಬೇಕು” ಎಂದು ಆಗ್ರಹಿಸಿದರು.

ಕೆಪಿಆರ್‌ಎಸ್ ಸಂಘದ ಖಂದ‌ರ್ ಬಾಷ, ಶಿವಶಂಕರ್, ಜಿ ಪಂಪಗೌಡ ಸೇರಿದಂತೆ ಇತರರು ಇದ್ದರು.

ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...