Homeಅಂತರಾಷ್ಟ್ರೀಯಸೌದಿ ಅರೇಬಿಯಾದ ದಮ್ಮಾಮ್‌ ವಿಮಾನ ನಿಲ್ದಾಣದ ಮೇಲೆ ದಾಳಿ : ಭಾರತೀಯ ಪ್ರಜೆ ಸೇರಿ ಇಬ್ಬರು...

ಸೌದಿ ಅರೇಬಿಯಾದ ದಮ್ಮಾಮ್‌ ವಿಮಾನ ನಿಲ್ದಾಣದ ಮೇಲೆ ದಾಳಿ : ಭಾರತೀಯ ಪ್ರಜೆ ಸೇರಿ ಇಬ್ಬರು ಸಾವು, 8 ಮಂದಿಗೆ ಗಾಯ

- Advertisement -
- Advertisement -

ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿರುವ ಕಿಂಗ್ ಫಹದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಒಬ್ಬರು ಭಾರತೀಯ ಪ್ರಜೆ, ಮತ್ತೊಬ್ಬರು ಸೌದಿ ಪ್ರಜೆ ಮೃತಪಟ್ಟಿದ್ದಾರೆ ಎಂದು ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಗುರುವಾರ (ಅ.22) ತಿಳಿಸಿದೆ.

ಅಧಿಕಾರಿಗಳ ಪ್ರಕಾರ, ಭಾರತ, ಯೆಮೆನ್ ಮತ್ತು ಬಾಂಗ್ಲಾದೇಶದವರು ಸೇರಿದಂತೆ ಇತರ ಎಂಟು ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳು ಹಾನಿಯನ್ನು ಪರಿಶೀಲಿಸುತ್ತಿದ್ದರೂ, ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ ಮತ್ತು ವಿಮಾನ ಸಂಚಾರವು ಸಹಜ ಸ್ಥಿತಿಗೆ ಮರಳಿದೆ.

ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು, ಈ ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ಪಡೆಯಲು ಪ್ರಯತ್ನಿಸುತ್ತಿರುವುದಾಗಿಯೂ ಹಾಗೂ ಸಂತ್ರಸ್ತ ಕುಟುಂಬಗಳನ್ನು ಸಂಪರ್ಕಿಸುತ್ತಿರುವುದಾಗಿಯೂ ತಿಳಿಸಿದೆ. ಮೃತಪಟ್ಟ ಭಾರತೀಯ ವ್ಯಕ್ತಿಯ ಕುಟುಂಬಕ್ಕೆ ಸಂತಾಪ ಸೂಚಿಸಿರುವ ರಾಯಭಾರ ಕಚೇರಿಯು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದೆ.

ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳು, ಇಂಧನ ಸ್ಥಾವರಗಳು ಮತ್ತು ಇತರ ಮೂಲಸೌಕರ್ಯಗಳ ಮೇಲೆ ಯೆಮನ್‌ನ ಇರಾನ್-ಬೆಂಬಲಿತ ಹೂತಿ ಸಂಘಟನೆಯು ನಡೆಸುತ್ತಿರುವ ದಾಳಿಗಳು ತೀವ್ರಗೊಂಡಿವೆ. ಅ. 8ರಂದು ರಿಯಾದ್‌ನಲ್ಲಿರುವ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆದಿತ್ತು.

ತೈಲ ಘಟಕವೊಂದನ್ನು ಗುರಿಯಾಗಿಸಿಕೊಂಡಿದ್ದ ಡ್ರೋನ್ ಅನ್ನು ತಡೆಹಿಡಿದಾಗ ಅವಶೇಷಗಳು ಬಿದ್ದಿದ್ದರಿಂದ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಸೌದಿ ಅರೇಬಿಯಾದ ಇಂಧನ ಸಚಿವಾಲಯ ಬುಧವಾರ ತಿಳಿಸಿತ್ತು.

ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವುದನ್ನು ಉಲ್ಲೇಖಿಸಿ, ಸೌದಿ ಅರೇಬಿಯಾದಲ್ಲಿರುವ ರಾಯಭಾರ ಕಚೇರಿಯ ಅತ್ಯಗತ್ಯವಲ್ಲದ ಸಿಬ್ಬಂದಿ ಹಾಗೂ ಅವರ ಕುಟುಂಬದವರು ಅಲ್ಲಿಂದ ನಿರ್ಗಮಿಸಬೇಕೆಂದು ಅಮೆರಿಕವು ಬುಧವಾರ ನಿರ್ದೇಶನ ನೀಡಿತ್ತು.

ನಾಗರಿಕ ವಿಮಾನ ನಿಲ್ದಾಣಗಳು ಮತ್ತು ಪ್ರಮುಖ ಮೂಲಸೌಕರ್ಯಗಳ ಮೇಲೆ ಹೂತಿಗಳು ನಡೆಸುತ್ತಿರುವ ದಾಳಿಗಳು ಹೆಚ್ಚಾಗುತ್ತಿದ್ದು, ಇದರಿಂದ ನಾಗರಿಕ ಸಾವುನೋವುಗಳು ಸಂಭವಿಸಿವೆ ಮತ್ತು ಪ್ರಯಾಣ ವ್ಯವಸ್ಥೆಗೆ ಭಾರಿ ಅಡಚಣೆ ಉಂಟಾಗಿದೆ ಎಂದು ಅಮೆರಿಕದ ಸ್ಟೇಟ್ ಡಿಪಾರ್ಟ್‌ಮೆಂಟ್ ವಕ್ತಾರ ಟಾಮಿ ಪಿಗೋಟ್ ತಿಳಿಸಿದ್ದರು.

ಭಾರತೀಯ ರಾಯಭಾರ ಕಚೇರಿಯು ಭಾನುವಾರದಂದು ಪ್ರತ್ಯೇಕವಾಗಿ ಸುರಕ್ಷತಾ ಸಲಹೆಯೊಂದನ್ನು ನೀಡಿದ್ದು, ತುರ್ತು ಎಚ್ಚರಿಕೆಗಳು ಬಂದಾಗ ಸೌದಿ ಅಧಿಕಾರಿಗಳ ಸೂಚನೆಗಳನ್ನು ಪಾಲಿಸುವಂತೆ ತನ್ನ ಪ್ರಜೆಗಳನ್ನು ಕೋರಿದೆ.

ಜನರು ಶಾಂತವಾಗಿರುವಂತೆ, ತಕ್ಷಣವೇ ಕಟ್ಟಡದೊಳಗೆ ಹತ್ತಿರದ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮತ್ತು ಹೊರಹೋಗುವುದು ಸುರಕ್ಷಿತವೆಂದು ಅಧಿಕಾರಿಗಳು ಸೂಚಿಸುವವರೆಗೂ ಕಟ್ಟಡದ ಒಳಗೇ ಇರುವಂತೆ ಸಲಹೆ ನೀಡಲಾಗಿದೆ.

ಅಧಿಕೃತ ಅಂಕಿಅಂಶಗಳ ಆಧಾರದ ಮೇಲೆ ಎಎಫ್‌ಪಿ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಈ ತಿಂಗಳು ಸೌದಿ ವಿಮಾನ ನಿಲ್ದಾಣಗಳ ಮೇಲೆ ನಡೆದ ದಾಳಿಗಳಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆ.

ಯೆಮನ್‌ನ ಅಂತರ್ಯುದ್ಧದಲ್ಲಿ ಹಲವು ವರ್ಷಗಳಿಂದ ಜಾರಿಯಲ್ಲಿದ್ದ ಕದನ ವಿರಾಮವು ಜುಲೈ ತಿಂಗಳಲ್ಲಿ ಮುರಿದುಬಿದ್ದ ನಂತರ, ಈಗ ಸಂಘರ್ಷ ತೀವ್ರಗೊಂಡಿದೆ. ಸೌದಿ ನೇತೃತ್ವದ ಮೈತ್ರಿಕೂಟದ ಬೆಂಬಲ ಹೊಂದಿರುವ ಯೆಮನ್ ಸರ್ಕಾರದ ವಿರುದ್ಧ ಹೂತಿಗಳು ಹೋರಾಡುತ್ತಿದ್ದಾರೆ.

ಈ ಹಿಂದೆ ಹೂತಿ ಗುಂಪು ಸೌದಿ ಅರೇಬಿಯಾವನ್ನು ಗುರಿಯಾಗಿಸಿಕೊಂಡು ಕಡಲ ದಿಗ್ಬಂಧನವನ್ನು ಘೋಷಿಸಿತ್ತು ಮತ್ತು ಸೌದಿಯ ಹಡಗುಗಳು, ಭೂಪ್ರದೇಶ ಹಾಗೂ ತೈಲ ಮೂಲಸೌಕರ್ಯಗಳ ಮೇಲೆ ದಾಳಿಗಳನ್ನು ನಡೆಸಿತ್ತು. ಸೆಪ್ಟೆಂಬರ್‌ನಲ್ಲಿ, ಹೂತಿಗಳು ಯೆಮನ್‌ನ ಕೆಂಪು ಸಮುದ್ರದ ಕರಾವಳಿಯುದ್ದಕ್ಕೂ, ಈ ಹಿಂದೆ ಸರ್ಕಾರಿ ಪಡೆಗಳ ನಿಯಂತ್ರಣದಲ್ಲಿದ್ದ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದಾರೆ.

ಸೌದಿ ಅರೇಬಿಯಾವು ಹೂತಿಗಳ ನಿಯಂತ್ರಣದಲ್ಲಿರುವ ಪ್ರದೇಶದ ಮೇಲೆ ಪದೇಪದೇ ವೈಮಾನಿಕ ದಾಳಿಗಳನ್ನು ನಡೆಸುವ ಮೂಲಕ ಪ್ರತಿಕ್ರಿಯಿಸಿದೆ. ಹೂತಿ ಗುಂಪು ಯೆಮನ್‌ನ ಬಹುಭಾಗವನ್ನು ತನ್ನ ನಿಯಂತ್ರಣದಲ್ಲಿಯೇ ಇರಿಸಿಕೊಂಡಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧದ ಮುಂಚೂಣಿ ರೇಖೆಗಳ ಸ್ಥಗಿತಕ್ಕೆ ಸಿದ್ಧ..’; ಉಕ್ರೇನ್‌ನ ಶೇ. 25ರಷ್ಟು ಭೂಭಾಗವನ್ನು ರಷ್ಯಾಕ್ಕೆ ಬಿಟ್ಟುಕೊಡಲು ಒಪ್ಪಿದರೇ ಝೆಲೆನ್‌ಸ್ಕಿ?

ರಷ್ಯಾದೊಂದಿಗಿನ ಶಾಂತಿ ಒಪ್ಪಂದದ ಭಾಗವಾಗಿ ಪ್ರಸ್ತುತ ಯುದ್ಧದ ಮುಂಚೂಣಿ ರೇಖೆಗಳನ್ನು ಸ್ಥಗಿತಗೊಳಿಸಲು ಸಿದ್ಧವಿರುವುದಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. 2022ರ ಫೆಬ್ರವರಿಯಲ್ಲಿ ಆರಂಭವಾದ ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಅಗತ್ಯ...

ಸಿಇಸಿ ಗ್ಯಾನೇಶ್ ಕುಮಾರ್ ಸಹೋದರನ ನೇತೃತ್ವದ ದೆಹಲಿ ಕಸ್ಟಮ್ಸ್‌ನಲ್ಲಿ ಪಂಜಾಬ್‌ ಮುಖ್ಯಮಂತ್ರಿಯನ್ನು ತಡೆದು ದಂಡ ವಿಧಿಸಲಾಯಿತೇ?

ಪ್ರಸ್ತುತ ಇಡೀ ದೇಶದ ಜನರ ಆಕ್ರೋಶಕ್ಕೆ ಗುರಿಯಾಗಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಸಹೋದರ ಮನೀಶ್ ಕುಮಾರ್ ಮುಖ್ಯ ಆಯುಕ್ತರಾಗಿರುವ ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್‌ನಲ್ಲಿ ಪಂಜಾಬ್ ಮುಖ್ಯಮಂತ್ರಿ...

ಸಂಸತ್ತಿನ ಅನುಮೋದನೆ ಇಲ್ಲದೆ ಕೇಂದ್ರ ಸರ್ಕಾರ ಫಾರ್ಮ್‌-6 ತಿದ್ದುಪಡಿ ಮಾಡಬಹುದೇ?

ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಹೆಸರನ್ನು ನೋಂದಾಯಿಸಲು ಬಳಸುವ ಫಾರ್ಮ್‌-6 ಅನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬಹುದು. ಆದರೆ, ಇಂತಹ ಬದಲಾವಣೆಗಳನ್ನು ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆಯ ಅನುಸಾರವೇ ಕೈಗೊಳ್ಳಬೇಕು. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ ಆಂಧ್ರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಗಿತ

ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹಿನ್ನೆಲೆ, ಅಕ್ಟೋಬರ್ 14ರಂದು ಅಧಿಸೂಚನೆ ಹೊರಡಿಸಲಾಗಿದ್ದ ಎಲ್ಲಾ 100 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯುವಂತೆ ಆಂಧ್ರ ಪ್ರದೇಶ ರಾಜ್ಯ ಚುನಾವಣಾ ಆಯುಕ್ತ (ಎಸ್‌ಇಸಿ) ಅನಿಲ್...

ಜೆಎನ್‌ಯು ಪಿಎಚ್‌ಡಿ ಪ್ರವೇಶದಲ್ಲಿ ಪಾಲನೆಯಾಗದ ಮೀಸಲಾತಿ ಮಾನದಂಡ; 56 ಕೋರ್ಸ್‌ಗಳಲ್ಲಿ ಇಲ್ಲ ಒಂದೇ ಒಂದು ಎಸ್‌ಟಿ ಸೀಟ್

ಮೀಸಲಾತಿ ಸೀಟುಗಳ ಹಂಚಿಕೆ ವ್ಯತ್ಯಾಸಕ್ಕೆ ವಿವರಣೆ ನೀಡುವಂತೆ ಬಾಪ್ಸಾ ಆಗ್ರಹ 2026-27ನೇ ಶೈಕ್ಷಣಿಕ ಸಾಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪಿಎಚ್‌ಡಿ ಪ್ರವೇಶ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣದಲ್ಲಿ ಕೊರತೆಯಾಗಿದೆ ಎಂದು...

ಜೀವನ ನಿರ್ವಹಣಾ ವೆಚ್ಚದ ಏರಿಕೆ ವಿರುದ್ಧ ಫ್ರಾನ್ಸ್‌ನಲ್ಲಿ ಪ್ರತಿಭಟನೆ: ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ

ಜೀವನ ನಿರ್ವಹಣಾ ವೆಚ್ಚದ ಏರಿಕೆಯ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಿಗೆ ತಿರುಗಿದ ಹಿನ್ನೆಲೆಯಲ್ಲಿ, ಪಶ್ಚಿಮ ಯುರೋಪಿಯನ್ ದೇಶದಲ್ಲಿರುವ ಮತ್ತು ಅಲ್ಲಿಗೆ ಪ್ರಯಾಣಿಸುತ್ತಿರುವ ತಮ್ಮ ನಾಗರಿಕರು ಎಚ್ಚರಿಕೆಯಿಂದಿರಬೇಕು ಎಂದು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು...

ನ್ಯಾಯಾಂಗ ಬಂಧನದಿಂದ ಬಿಡುಗಡೆ ಬೆನ್ನಲ್ಲೇ ಸಿಜೆಪಿ ನಾಯಕರಿಗೆ ದೆಹಲಿ ಕ್ರೈಮ್ ಬ್ರಾಂಚ್ ಸಮನ್ಸ್

ದೆಹಲಿ ಪೊಲೀಸ್ ಅಪರಾಧ ವಿಭಾಗವು (ಕ್ರೈಮ್ ಬ್ರಾಂಚ್) ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಗುರುವಾರ (ಅ.22) ಮಧ್ಯಾಹ್ನ 12...

ಸನಾತನ ಧರ್ಮದ ಅನುಯಾಯಿಗಳಿಗೆ ಮಾತ್ರ ದೇವಿ ವಿಗ್ರಹಗಳನ್ನು ಸ್ಪರ್ಶಿಸಲು ಅನುಮತಿ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ

ಹುಗ್ಲಿ ನದಿಯಲ್ಲಿ ದುರ್ಗಾ ವಿಸರ್ಜನೆಯ ಸಮಯದಲ್ಲಿ ಸನಾತನ ಧರ್ಮದ ಅನುಯಾಯಿಗಳಿಗೆ ಮಾತ್ರ ದೇವಿಯ ವಿಗ್ರಹಗಳನ್ನು ಸ್ಪರ್ಶಿಸಲು ಅನುಮತಿ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಬುಧವಾರ ಹೇಳಿದ್ದಾರೆ. ಸುರಕ್ಷತಾ ಕಾಳಜಿಗಳು ಮತ್ತು...

ಮಹಾರಾಷ್ಟ್ರ ಸಿಇಒ ಮನವಿಗೆ ಸ್ಪಂದಿಸಿದ ಚುನಾವಣಾ ಆಯೋಗ: ‘ಇಸಿಐನೆಟ್’ ಸಾಫ್ಟ್‌ವೇರ್‌ನಲ್ಲಾಯಿತು 4 ಪ್ರಮುಖ ಬದಲಾವಣೆ!

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಂತ್ರಿಕ ಸಾಫ್ಟ್‌ವೇರ್‌ನ ಅತಿಯಾದ ನಿಯಂತ್ರಣವು ಸ್ಥಳೀಯ ನೋಂದಣಿ ಅಧಿಕಾರಿಗಳ ಶಾಸನಬದ್ಧ ಅಧಿಕಾರವನ್ನೇ ಕಸಿದುಕೊಳ್ಳುತ್ತಿದೆ ಎಂಬ ತೀವ್ರ ಕಳವಳದ ಬೆನ್ನಲ್ಲೇ, ಭಾರತೀಯ ಚುನಾವಣಾ ಆಯೋಗವು ತನ್ನ 'ಇಸಿಐನೆಟ್' (ECINet)...

ಮಸೀದಿಯಲ್ಲಿ ಚುಂಬಿಸಿದ್ದಕ್ಕೆ ಮರಣದಂಡನೆ? ಸೌದಿ ಅಮಾನವೀಯ ತೀರ್ಪಿಗೆ ತೀವ್ರ ಆಕ್ರೋಶ

ಮುಸ್ಲಿಂ ಸಮುದಾಯದ ಪವಿತ್ರ ನಗರವಾದ ಮೆಕ್ಕಾದ ಮಸೀದಿಯೊಂದರಲ್ಲಿ ಅನೈತಿಕ ಕೃತ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ಸೌದಿ ಅರೇಬಿಯಾ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳಿಗೆ ಮರಣದಂಡನೆ ವಿಧಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಮರಣದಂಡನೆಗಳು...