Homeಅಂತರಾಷ್ಟ್ರೀಯಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

- Advertisement -
- Advertisement -

ಕತಾರ್ ರಾಜಧಾನಿ ದೋಹಾದಲ್ಲಿ ಹಮಾಸ್ ನಾಯಕತ್ವದ ಮೇಲೆ ಇಸ್ರೇಲ್ ದಾಳಿ ನಡೆಸಿರುವುದಕ್ಕೆ ಜಾಗತಿಕವಾಗಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ದಾಳಿಯಲ್ಲಿ ಹಿರಿಯ ನಾಯಕ ಖಲೀಲ್ ಅಲ್-ಹಯ್ಯ ಅವರ ಮಗ ಸೇರಿದಂತೆ ತನ್ನ ಐವರು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿದೆ. ಕತಾರ್ ಭದ್ರತಾ ಪಡೆಗಳ ಒಬ್ಬ ಸದಸ್ಯ ಕೂಡ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕತಾರ್, ಇದು ಹೇಡಿತನದ ಕೃತ್ಯ ಅಮೆರಿಕದಿಂದ ದಾಳಿಯ ಬಗ್ಗೆ ಯಾವುದೇ ಪೂರ್ವ ಎಚ್ಚರಿಕೆ ಇರಲಿಲ್ಲ ಎಂದು ಹೇಳಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಮಂಗಳವಾರ ದೋಹಾದಲ್ಲಿ ಹಮಾಸ್ ನಾಯಕರ ವಿರುದ್ಧ ಇಸ್ರೇಲ್ ಸೇನೆ ದಾಳಿ ನಡೆಸಿದೆ ಎಂದು ದೃಢಪಡಿಸಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಮಾತುಕತೆಯಲ್ಲಿ ಪ್ರಮುಖ ಮಧ್ಯವರ್ತಿಯಾಗಿರುವ ಮತ್ತು ಈ ಪ್ರದೇಶದ ಅತಿದೊಡ್ಡ ಯುನೈಟೆಡ್ ಸ್ಟೇಟ್ಸ್ ಮಿಲಿಟರಿ ನೆಲೆಯಾದ ಅಲ್ ಉದೈದ್ ವಾಯುನೆಲೆಯನ್ನು ಹೊಂದಿರುವ ಕತಾರ್ ಮೇಲೆ ಇಸ್ರೇಲ್ ನಡೆಸಿದ ಮೊದಲ ದಾಳಿ ಇದಾಗಿದೆ.

ಇಸ್ರೇಲ್ ಕೃತ್ಯ ಕತಾರ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ‘ಸ್ಪಷ್ಟ ಉಲ್ಲಂಘನೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಗಾಝಾ ಯುದ್ಧದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಪಕ್ಷಗಳು ಶಾಶ್ವತ ಕದನ ವಿರಾಮವನ್ನು ಸಾಧಿಸುವತ್ತ ಕೆಲಸ ಮಾಡಬೇಕು, ಬದಲಾಗಿ ಗಾಝಾದ ಭವಿಷ್ಯವನ್ನು ನಾಶ ಮಾಡಬಾರದು ಎಂದು ಗುಟೆರೆಸ್ ಹೇಳಿದ್ದಾರೆ.

“ದುರದೃಷ್ಟವಶಾತ್ ಕತಾರ್ ರಾಜಧಾನಿ ದೋಹಾದ ಒಂದು ಭಾಗದಲ್ಲಿ ನೆಲೆಗೊಂಡಿದ್ದ” ಹಮಾಸ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಮೆರಿಕ ಮಿಲಿಟರಿಯಿಂದ ಟ್ರಂಪ್ ಆಡಳಿತಕ್ಕೆ ತಿಳಿಸಲಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಸಾರ್ವಭೌಮ ರಾಷ್ಟ್ರ, ಅಮೆರಿಕದ ಆಪ್ತ ಮಿತ್ರ ಹಾಗೂ ಶಾಂತಿ ಸ್ಥಾಪನೆಗಾಗಿ ನಮ್ಮೊಂದಿಗೆ ಕಠಿಣ ಪರಿಶ್ರಮಪಡುತ್ತಿರುವ, ಧೈರ್ಯದಿಂದ ಅಪಾಯಗಳನ್ನು ಎದುರಿಸುತ್ತಿರುವ ರಾಷ್ಟ್ರವಾದ ಕತಾರ್ ಒಳಗೆ ಏಕಪಕ್ಷೀಯವಾಗಿ ಬಾಂಬ್ ದಾಳಿ ನಡೆಸುವುದು ಅಮೆರಿಕ ಶಾಂತಿ ಸ್ಥಾಪನೆಯ ಗುರಿಯನ್ನು ಸಾಧಿಸಲು ಅಡ್ಡಿಯಾಗಲಿದೆ ಎಂದು ಕರೋಲಿನ್ ಲೀವಿಟ್ ಹೇಳಿದ್ದಾರೆ.

ಆದಾಗ್ಯೂ, ಗಾಝಾದ ಜನರ ದುಃಖದಿಂದ ಲಾಭ ಪಡೆದಿರುವ ಹಮಾಸ್ ಅನ್ನು ನಿರ್ಮೂಲನೆ ಮಾಡುವುದು ಯೋಗ್ಯ ಗುರಿಯಾಗಿದೆ ಎಂದಿದ್ದಾರೆ. 

ಸೌದಿ ಅರೇಬಿಯಾ ಕೂಡ ಇಸ್ರೇಲ್ ದಾಳಿಯನ್ನು ‘ಕ್ರೂರ ಆಕ್ರಮಣ’ ಎಂದಿದ್ದು, ಮಿತ್ರ ರಾಷ್ಟ್ರವಾದ ಕತಾರ್‌ನ ಸಾರ್ವಭೌಮತ್ವದ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ. ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ಸೌದಿ ವಿದೇಶಾಂಗ ಸಚಿವಾಲಯ ‘ಕತಾರ್ ಜೊತೆ ಒಗ್ಗಟ್ಟು’ ಪ್ರದರ್ಶಿಸಿದೆ.

ಟರ್ಕಿ, ಕುವೈತ್, ಯುಎಇ, ಜೋರ್ಡಾನ್, ಇರಾನ್, ಇರಾಕ್, ಪ್ಯಾಲೆಸ್ತೀನ್, ಯೆಮನ್‌ನ ಹೌತಿ ಗುಂಪು, ಮಾಲ್ಡೀವ್ಸ್, ಪಾಕಿಸ್ತಾನ, ಲೆಬನಾನ್, ಯುನೈಟೆಡ್ ಕಿಂಗ್‌ಡಂ, ಫ್ರಾನ್ಸ್‌, ಹಮಾಸ್, ಲೆಬನಾನ್, ಮೊರಾಕ್ಕೋ, ಸಿರಿಯಾ, ಸುಡಾನ್‌, ಈಜಿಪ್ಟ್, ಗಲ್ಫ್ ಕೋ ಆಪರೇಷನ್ ಕೌನ್ಸಿಲ್, ಅಲ್‌ಜೀರಿಯಾ, ಕಝಾಕಿಸ್ತಾನ್, ಸ್ಪೇನ್, ಲಿಬಿಯಾ, ಮಾರ್ಷಿಯಸ್, ಒಮಾನ್, ಇಟಲಿ, ಜರ್ಮನಿ, ಯುರೋಪ್ ಒಕ್ಕೂಟ, ಭಾರತ ಸೇರಿದಂತೆ ಬಹುತೇಕ ಎಲ್ಲಾ ಪ್ರಮುಖ ರಾಷ್ಟ್ರಗಳು ಮತ್ತು ಗುಂಪುಗಳು ಇಸ್ರೇಲ್ ದಾಳಿಯನ್ನು ಖಂಡಿಸಿವೆ.

ನೇಪಾಳದ ನೆಪೋ ಕಿಡ್ಸ್ vs ಯುವ ಶಕ್ತಿ: ವ್ಯವಸ್ಥೆ ಬದಲಾವಣೆಯ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...