Homeಅಂತರಾಷ್ಟ್ರೀಯಗಾಜಾ ಮೇಲಿನ ದಾಳಿಗೆ ಹಮಾಸ್ ತಿರುಗೇಟು | ರಾಜಧಾನಿ ಟೆಲ್ ಅವೀವ್ ಮೇಲೆ ರಾಕೆಟ್ ದಾಳಿ

ಗಾಜಾ ಮೇಲಿನ ದಾಳಿಗೆ ಹಮಾಸ್ ತಿರುಗೇಟು | ರಾಜಧಾನಿ ಟೆಲ್ ಅವೀವ್ ಮೇಲೆ ರಾಕೆಟ್ ದಾಳಿ

- Advertisement -
- Advertisement -

ಗಾಜಾ ಮೇಲೆ ಇಸ್ರೇಲ್ ತನ್ನ ದಾಳಿಯನ್ನು ಮತ್ತೆ ಆರಂಭಿಸಿದ್ದಕ್ಕೆ ಪ್ಯಾಲೆಸ್ತೀನ್ ಹೋರಾಟಗಾರ ಸೇನೆ ಹಮಾಸ್‌ ಗುರುವಾರ ಮೊದಲ ತಿರುಗೇಟು ನೀಡಿದ್ದು, ವಸಾಹತುಗಾರ ಇಸ್ರೇಲ್‌ನ ರಾಜಧಾನಿ ಟೆಲ್ ಅವೀವ್ ಕಡೆಗೆ ರಾಕೆಟ್ ದಾಳಿ ನಡೆಸಿದೆ ಎಂದು ಎಎಫ್‌ಪಿ ವರದಿ ಮಾಡಿದೆ. ಗಾಜಾ ಮೇಲಿನ ದಾಳಿಗೆ

ಪ್ಯಾಲೆಸ್ತೀನ್ ಹೋರಾಟಗಾರ ಹಮಾಸ್‌ನ ಸಶಸ್ತ್ರ ವಿಭಾಗವಾದ ಎಜ್ಜೆಡೈನ್ ಅಲ್-ಕಸ್ಸಾಮ್ ಬ್ರಿಗೇಡ್ಸ್ ಈ ಬಗ್ಗೆ ಪ್ರತಿಕ್ರಿಯಿಸಿ, ಗಾಜಾದಲ್ಲಿ ನಾಗರಿಕರ ಮೇಲೆ ಇಸ್ರೇಲ್ ನಡೆಸಿದ “ಹತ್ಯಾಕಾಂಡ” ಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದೆ. ಗಾಜಾದಿಂದ ಹಾರಿಸಲಾದ ಒಂದು ರಾಕೆಟ್‌ ಅನ್ನು ತಡೆಹಿಡಿಯಲಾಗಿದ್ದು, ಇತರ ಎರಡು ರಾಕೆಟ್‌ಗಳು ಜನವಸತಿಯಿಲ್ಲದ ಪ್ರದೇಶಕ್ಕೆ ಬಿದ್ದಿದೆ ಎಂದು ಇಸ್ರೇಲ್ ಹೇಳಿದೆ. ಗಾಜಾ ಮೇಲಿನ ದಾಳಿಗೆ

ಮಂಗಳವಾರ ಗಾಜಾ ಮೇಲಿನ ತನ್ನ ದಾಳಿಯನ್ನು ಇಸ್ರೇಲ್ ಮತ್ತೆ ಆರಂಭಿಸಿದೆ. ಈ ದಾಳಿಯಲ್ಲಿ ಕನಿಷ್ಠ 330 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಸಮಯ ಬೆಳಗಿನ ಜಾವ 2 ಗಂಟೆಗೆ ಈ ದಾಳಿಗಳು ಪ್ರಾರಂಭವಾಗಿದ್ದು, ಜನವರಿ 19 ರಂದು ಕದನ ವಿರಾಮ ಜಾರಿಗೆ ಬಂದ ನಂತರ ಪ್ಯಾಲೆಸ್ತೀನಿ ಪ್ರದೇಶದ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ.

ದಾಳಿಗಳಿಗೆ ಪ್ರತಿಕ್ರಿಯಿಸಿರುವ ಹಮಾಸ್, ಇಸ್ರೇಲ್ ತಮ್ಮ ನಡುವಿನ ಕದನ ವಿರಾಮವನ್ನು ಏಕಪಕ್ಷೀಯವಾಗಿ ಕೊನೆಗೊಳಿಸಿದೆ ಎಂದು ಹೇಳಿದೆ. ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳಲ್ಲಿ 190 ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 504 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ಗುರುವಾರ ತಿಳಿಸಿದೆ.

ಹಗಲಿ ವೇಳೆ ಇಸ್ರೇಲ್ ಸೇನೆಯು ಮಧ್ಯ ಮತ್ತು ದಕ್ಷಿಣ ಗಾಜಾದಲ್ಲಿ ತನ್ನ ಭೂ ಕಾರ್ಯಾಚರಣೆಯನ್ನು ವಿಸ್ತರಿಸಿದೆ ಎಂದು ಹೇಳಿದೆ. “ಕಳೆದ 24 ಗಂಟೆಗಳಲ್ಲಿ, ಉತ್ತರ ಮತ್ತು ದಕ್ಷಿಣ ಭಾಗಗಳ ನಡುವಿನ ಭದ್ರತಾ ವಲಯವನ್ನು ವಿಸ್ತರಿಸುವ ಸಲುವಾಗಿ, ಇಸ್ರೇಲ್ ರಕ್ಷಣಾ ಪಡೆಗಳ ಸೈನಿಕರು ಮಧ್ಯ ಮತ್ತು ದಕ್ಷಿಣ ಗಾಜಾ ಪಟ್ಟಿಯಲ್ಲಿ ಗುರಿಯಿಟ್ಟುಕೊಂಡು ಭೂ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ” ಎಂದು ಸೇನಾ ವಕ್ತಾರ ಅವಿಚೇ ಅಡ್ರೇಯಿ ಹೇಳಿದ್ದಾರೆ.

ಇಸ್ರೇಲ್ ತನ್ನ ಮಿಲಿಟರಿ ದಾಳಿಯನ್ನು ಪುನರಾರಂಭಿಸಿದಾಗಿನಿಂದ, ಗಾಜಾದ ನಾಗರಿಕರ ಮೇಲೆ ಅತ್ಯಂತ ಅಮಾನವೀಯ ಅಗ್ನಿಪರೀಕ್ಷೆಗಳನ್ನು ಅಂತ್ಯವಿಲ್ಲದೆ ನಡೆಸಲಾಗುತ್ತಿದೆ ಎಂದು ಪ್ಯಾಲೆಸ್ತೀನ್‌ ನಿರಾಶ್ರಿತರಿಗಾಗಿ ಕೆಲಸ ಮಾಡುವ ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾರ್ಯ ಸಂಸ್ಥೆಯ ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ.

“ಮೂರನೇ ದಿನವೂ ಇಸ್ರೇಲ್ ಪಡೆಗಳು ವಾಯು ಮತ್ತು ಸಮುದ್ರದಿಂದ ಬಾಂಬ್ ದಾಳಿ ಮುಂದುವರೆಸಿದೆ. ನಮ್ಮ ದೈನಂದಿನ ಕಣ್ಗಾವಲಿನಲ್ಲಿ, ಗಾಜಾದಲ್ಲಿ ಜನರು ಮತ್ತೆ ಮತ್ತೆ ತಮ್ಮ ಕೆಟ್ಟ ದುಃಸ್ವಪ್ನವನ್ನು ಎದುರಿಸುತ್ತಿದ್ದಾರೆ.” ಎಂದು ಅವರು ಘಟನೆಯನ್ನು ಖಂಡಿಸಿದ್ದಾರೆ.

ಗಾಜಾ ಮೇಲಿನ ದಾಳಿಯನ್ನು ಮಂಗಳವಾರ ಸಮರ್ಥಿಸಿಕೊಂಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಪದೇ ಪದೇ ನಿರಾಕರಿಸುವುದು ಮತ್ತು ಕದನ ವಿರಾಮವನ್ನು ವಿಸ್ತರಿಸುವ ಮಾತುಕತೆಗಳಲ್ಲಿ ಪ್ರಗತಿಯ ಕೊರತೆಯ ಕಾರಣಕ್ಕೆ ವಾಯುದಾಳಿಗಳಿಗೆ ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.

“ಇನ್ನು ಮುಂದೆ, ಇಸ್ರೇಲ್ ಹಮಾಸ್ ವಿರುದ್ಧ ಹೆಚ್ಚಿನ ಮಿಲಿಟರಿ ಬಲದೊಂದಿಗೆ ಕ್ರಮ ಕೈಗೊಳ್ಳುತ್ತದೆ. ಕಾರ್ಯಾಚರಣಾ ಯೋಜನೆಯನ್ನು ಸೇನೆ ವಾರಾಂತ್ಯದಲ್ಲಿ ಮಂಡಿಸಿದ್ದು, ಅದಕ್ಕೆ ರಾಜಕೀಯ ನಾಯಕತ್ವವು ಅನುಮೋದಿಸಿತು.” ಎಂದು ನೆತನ್ಯಾಹು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...