Homeಅಂತರಾಷ್ಟ್ರೀಯಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ- ಬಂಧಿತರ ಸಂಖ್ಯೆ 55 ಕ್ಕೆ ಏರಿಕೆ

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ- ಬಂಧಿತರ ಸಂಖ್ಯೆ 55 ಕ್ಕೆ ಏರಿಕೆ

ಟೆರ್ರಿ ಗ್ರಾಮದಲ್ಲಿರುವ ದೇವಾಲಯದ ವಿಸ್ತರಣೆ ನಡೆಯುತ್ತಿರುವುದನ್ನು ವಿರೋಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.

- Advertisement -
- Advertisement -

ಪಾಕಿಸ್ತಾನದ ಖೈಬರ್ ಪಾಖ್ತುನ್‌‌ಟ್ವಾ ಪ್ರಾಂತ್ಯದಲ್ಲಿ ಮೂಲಭೂತವಾದಿ ಪಕ್ಷದ ಸದಸ್ಯರ ನೇತೃತ್ವದಲ್ಲಿ ಜನಸಮೂಹವೊಂದು ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಪಾಕಿಸ್ತಾನ ಪೊಲೀಸರು ಮತ್ತೆ 10 ಜನರನ್ನು ಬಂಧಿಸಿದ್ದಾರೆ.

ಈ 10 ಮಂದಿಯ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 55 ಕ್ಕೆ ಏರಿದೆ. ಕಳೆದ  ಬುಧವಾರ ಖೈಬರ್ ಪಾಖ್ತುನ್‌‌ಟ್ವಾದ ಕರಕ್ ಜಿಲ್ಲೆಯ ಟೆರ್ರಿ ಗ್ರಾಮದಲ್ಲಿರುವ ದೇವಾಲಯವನ್ನು ಧ್ವಂಸಗೊಳಿಸಿದ ನಂತರ ಪೊಲೀಸರು ಪ್ರಕರಣದಲ್ಲಿ 350 ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ.

ಟೆರ್ರಿ ಗ್ರಾಮದಲ್ಲಿರುವ ದೇವಾಲಯದ ವಿಸ್ತರಣೆ ನಡೆಯುತ್ತಿರುವುದನ್ನು ವಿರೋಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಇತರ ಆರೋಪಿಗಳನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ ಬೆಂಬಲಿಗರು

ಹಿಂದೂ ಧಾರ್ಮಿಕ ಮುಖಂಡರ ಸಮಾಧಿ ಹೊಂದಿರುವ ದಶಕಗಳಷ್ಟು ಹಳೆಯದಾದ ಈ ದೇವಾಲಯವು ತನ್ನ ಕಟ್ಟಡವನ್ನು ನವೀಕರಿಸಲು ಸ್ಥಳೀಯ ಅಧಿಕಾರಿಗಳಿಂದ ಅನುಮತಿ ಪಡೆದಿತ್ತು. ಇದರಿಂದ ಕ್ರೋಧಗೊಂಡ  ಜನಸಮೂಹ ದಾಳಿ ನಡೆಸಿದೆ.

ಕೆಲವು ಸ್ಥಳೀಯ ಮೌಲ್ವಿಗಳು ಮತ್ತು ಜಾಮಿಯತ್ ಉಲೆಮಾ-ಇ-ಇಸ್ಲಾಂ ಪಕ್ಷದ (ಫಜಲ್ ಉರ್ ರೆಹಮಾನ್ ಗುಂಪು) ಬೆಂಬಲಿಗರ ನೇತೃತ್ವದಲ್ಲಿ ಜನಸಮೂಹವು ಹೊಸದಾಗಿ ನಿರ್ಮಿಸಿದ ದೇವಾಲಯದ ಕಟ್ಟಡವನ್ನು  ನೆಲಸಮಗೊಳಿಸಿದೆ.

ದೇವಾಲಯದ ಮೇಲಿನ ದಾಳಿಯನ್ನು ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಭಾರತ ಕೂಡ ಪ್ರತಿಭಟನೆ ಮೂಲಕ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ಜನವರಿ 5 ರಂದು ಸ್ಥಳೀಯ ಅಧಿಕಾರಿಗಳಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಆದೇಶಿಸಿದೆ. ಜನವರಿ 4 ರೊಳಗೆ ವರದಿಯನ್ನು ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಅಹ್ಮದ್ ಅವರು ಅಲ್ಪಸಂಖ್ಯಾತರ ಹಕ್ಕುಗಳ ಆಯೋಗದ ಅಧ್ಯಕ್ಷರು, ಪೊಲೀಸ್ ಮುಖ್ಯಸ್ಥರು ಮತ್ತು ಪ್ರಾಂತ್ಯದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.

ಸರ್ಕಾರವು ಹಾನಿಗೊಳಗಾದ ದೇವಾಲಯ ಮತ್ತು ಸಮಾಧಿಯನ್ನು ಆದಷ್ಟು ಕಡಿಮೆ ಸಮಯದಲ್ಲಿ ಪುನರ್‌ ನಿರ್ಮಿಸುವುದಾಗಿ ಭರವಸೆ ನೀಡುತ್ತೇವೆ. ಪ್ರಾಂತ್ಯದಲ್ಲಿ ಧಾರ್ಮಿಕ ಸಹಿಷ್ಣುತೆಯನ್ನು ಕಾಪಾಡಲಾಗುವುದು ಎಂದು ಖೈಬರ್ ಪಾಖ್ತುನ್‌‌ಟ್ವಾ ಮುಖ್ಯಮಂತ್ರಿ ಮಹಮೂದ್ ಖಾನ್ ಹೇಳಿದ್ದಾರೆ.

ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ಬಗ್ಗೆ ಭಾರತದ ಪ್ರತಿಭಟನೆ “ಸಂಪೂರ್ಣವಾಗಿ ಅನಗತ್ಯ” ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ಶನಿವಾರ ಹೇಳಿದೆ.


ಇದನ್ನೂ ಓದಿ: ಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿದ್ದಾರೆ: ಮುಂಬೈ ಸಿವಿಲ್ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...