Homeಕರ್ನಾಟಕಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ...

ಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ…

- Advertisement -
- Advertisement -

ಭಾರತ ಮಾನವ ಹಕ್ಕುಗಳ ಉಲ್ಲಂಘನೆಯ ರಾಜಧಾನಿಯಾಗುತ್ತಿದೆಯೇ ಎಂಬ ಅನುಮಾನ, ಶಂಕೆ ಬಲವಾಗತೊಡಗಿದೆ. ಯಾವ ವಸುದೈವಂ ಕುಟುಂಬಂ ಎಂಬ ಮಂತ್ರವನ್ನು ಪಠಿಸುತ್ತಾರೋ ಅದೇ ದೇಶದಲ್ಲಿ  ಮಾನವ ಹಕ್ಕುಗಳು ನಿತ್ಯವೂ ಹರಣವಾಗುತ್ತಿವೆ. ಮಕ್ಕಳು, ಮಹಿಳೆಯರು, ಯುವತಿಯರ ಅಪರಹಣ, ಅತ್ಯಾಚಾರ, ಕೊಲೆ ಪ್ರಕರಣಗಳು ನಡೆಯುತ್ತಿರುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಮನೆ-ಭೂಮಿ ಇಲ್ಲದೆ, ಹಸಿವಿನಿಂದ ನರಳುತ್ತಿರುವವ ಸಂಖ್ಯೆಯೂ ಅಧಿಕಗೊಂಡಿರುವುದು ಕಳವಳಕಾರಿ ಸಂಗತಿಯಾಗಿದೆ.

ದೇಶದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಯುವತಿ-ಮಹಿಳೆಯರ ಮೇಲೆ ಅತ್ಯಾಚಾರ-ಕೊಲೆ, ಹೆಣ್ಣು ಮಕ್ಕಳನ್ನು ಶಾಲೆಯಿಂದ ದೂರ ಇಡುವುದು ಮತ್ತು ವೇಶ್ಯಾವಾಟಿಕೆಗೆ ತಳ್ಳುವಂತಹ ಕೆಲಸ ನಡೆದು ಅವಳ ನೈಸರ್ಗಿಕ ಹಕ್ಕುಗಳು, ಮಾನವ ಹಕ್ಕುಗಳ ಉಲ್ಲಂಘನೆ ರಾಜಾರೋಷವಾಗಿ ಮುಂದುವರಿದಿದೆ. ಮಾನವ ಹಕ್ಕುಗಳ ಉಲ್ಲಂಘಿಸುವವ ವಿರುದ್ದ ಕ್ರಮ ಕೈಗೊಳ್ಳಬೇಕಾದ ಸರ್ಕಾರಗಳು ಮತ್ತು ಇಲಾಖೆಗಳು ಯಾರದೋ ಮರ್ಜಿಗೆ ಒಳಗಾಗಿ ಅಥವಾ ಕಾನೂನು ರೀತಿ ನಡೆದುಕೊಳ್ಳದೆ ಮೌನ ವಹಿಸಿರುವುದು ದುರಂತ.

2017ರಲ್ಲಿ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಅಂಕಿಅಂಶಗಳ ಪ್ರಕಾರ ಮಹಿಳೆ ಮತ್ತು ಮಕ್ಕಳ ಮೇಲೆ ಹಲ್ಲೆ, ಅಪಹರಣ, ಅತ್ಯಾಚಾರ ಮತ್ತು ಕೊಲೆಗಳು ಹೆಚ್ಚಾಗಿರುವುದರ ಮೇಲೆ ಬೊಟ್ಟು ಮಾಡುತ್ತವೆ. ಈ ಅವಧಿಯಲ್ಲಿ ಮಧ್ಯಪ್ರದೇಶದಲ್ಲಿ 5599 ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ-ಕೊಲೆ ನಡೆದಿವೆ. ಉತ್ತರ ಪ್ರದೇಶ-4669 ಪ್ರಕರಣಗಳು ದಾಖಲಾಗಿದ್ದರೆ, ರಾಜಸ್ಥಾನದಲ್ಲಿ 3319 ಪ್ರಕರಣಗಳು, ಒರಿಸ್ಸಾ 2082, ಆಂದ್ರಪ್ರದೇಶ 1005 ಪ್ರಕರಣಗಳು, ತೆಲಂಗಾಣದಲ್ಲಿ 699 ದಾಖಲಾಗಿವೆ. ಹೀಗಿದ್ದರೂ ರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗ ಕ್ರಮ ಕೈಗೊಳ್ಳದೆ ನಿಷ್ಕ್ರಿಯವಾಗಿರುವುದು ಕಂಡು ಬರುತ್ತದೆ.

2016ನೇ ಇಸವಿಯಲ್ಲಿ ಹೈದರಾಬಾದ್ ನಲ್ಲಿ 1311 ಅತ್ಯಾಚಾರ ಪ್ರಕರಣಗಳು ನಡೆದಿವೆ. ಅದೇ ವರ್ಷ ದೆಹಲಿಯಲ್ಲಿ 3645 ಅತ್ಯಾಚಾರ ಪ್ರಕರಣಗಳು ನಡೆದಿವೆ. ಒಂದು ಅಂಶ ಸ್ಪಷ್ಟವಾಗುವುದೇನೆಂದರೆ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ನಡೆದಿರುವುದು ಅಂಕಿಅಂಶಗಳಿಂದ ತಿಳಿಯುತ್ತದೆ. ಅತ್ಯಾಚಾರ ಪ್ರಕರಣಗಳು ಮಾನವ ಹಕ್ಕುಗಳ ಉಲ್ಲಂಘನೆಯ ಭಾಗ. ಆದರೂ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುತ್ತಿಲ್ಲ. ಹಲವರು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾಗಿ ಕೆಲವು ದಿನಗಳ ನಂತರ ಆರೋಪಮುಕ್ತರಾಗುವುದೇ ಹೆಚ್ಚು. ಎಲ್ಲೋ ಅಲ್ಲೊಂದು ಇಲ್ಲೊಂದು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿರುವುದು ಅಪರೂಪ.

ಮಹಿಳೆ/ಬಾಲಕಿಯರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ಮೇಲೆ ಐಪಿಸಿ ಮತ್ತು ಸಿಆರ್‌ಪಿಸಿ, ಜುವೆನಲ್ ಜಸ್ಟೀಸ್ ಆಕ್ಟ್ ಕೆಳಗೆ ಕೇಸು ದಾಖಲಿಸುವಾಗ ದುರ್ಬಲವಾದ ಸೆಕ್ಷನ್ ಗಳನ್ನು ಹಾಕುವುದು ಕೂಡ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶವಾಗುತ್ತದೆ. ಆದ್ದರಿಂದ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಸಮರ್ಪಕ ಸೆಕ್ಷನ್ ಗಳಡಿ ಎಫ್ಐಆರ್ ದಾಖಲಿಸಿ ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷ್ಯಗಳನ್ನು ಹಾಜರುಪಡಿಸಿದರೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವುದರಲ್ಲಿ ಆನುಮಾನವೇ ಇಲ್ಲ. ನ್ಯಾಯಾಲದಲ್ಲಿ ಸಂಬಂಧಪಟ್ಟ ಆರೋಪಿಗಳಿಗೆ ಕಠಿಣ ಶಿಕ್ಷೆಯಾದರೆ ಇಂತಹ ಪ್ರಕರಣಗಳು ಮರುಕಳಿಸುವುದು ಕಡಿಮೆಯಾಗುತ್ತದೆ. ಮಾನವ ಹಕ್ಕುಗಳ ಉಲ್ಲಂಘನೆಯೂ ನಿಲ್ಲುತ್ತದೆ.

ಅಂದರೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಹಿಳೆ/ಬಾಲಕಿಯರ ಮೇಲೆ ಸಾಕಷ್ಟು ಅತ್ಯಾಚಾರ ಪ್ರಕರಣಗಳು ನಡೆದಿದ್ದರೂ ಆರೋಪಿಗಳಿಗೆ ಶಿಕ್ಷೆಯಾಗಿರುವುದು ತುಂಬಾ ಕಡಿಮೆ. ಅದೇ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋದ ಅಂಕಿ ಅಂಶಗಳೇ ಆಂಧ್ರಪ್ರದೇಶದಲ್ಲಿ ಶೇಕಡ 68ರಷ್ಟು ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಇದವೆ ಎಂದು ಹೇಳುತ್ತವೆ. ಇದರಲ್ಲಿ 5 ಅಪ್ರಾಪ್ತ ಬಾಲಕಿಯರಿಂದ ಹಿಡಿದು 65 ವರ್ಷದ ಮುದುಕಿಯರ ಮೇಲೂ ಲೈಂಗಿಕ ದೌರ್ಜನ್ಯಗಳು ನಡೆದಿವೆ.

2017ರ ಅಂಕಿ ಅಂಶಗಳಂತೆ ಮಹಿಳೆ/ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮಧ್ಯ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ದೆಹಲಿ ಐದನೇ ಸ್ಥಾನದಲ್ಲಿದೆ. ಈ ಅಂಕಿಅಂಶಗಳು ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸುವಂತೆ ಮಾಡುತ್ತವೆ. ಮಧ್ಯರಾತ್ರಿ ಒಬ್ಬ ಹೆಣ್ಣು ಸ್ವಚ್ಚಂದವಾಗಿ ತಿರುಗಬಲ್ಲಳೋ ಅಂದು ನಮಗೆ ಪೂರ್ಣ ಸ್ವಾತಂತ್ರ್ಯ ಸಿಗುತ್ತದೆ ಎಂದು ಮಹಾತ್ಮ ಗಾಂಧೀ ಹೇಳಿದ್ದರು. ಮಧ್ಯರಾತ್ರಿಯ ಮಾತು ಬಿಡಿ ಮಟಮಟ ಮಧ್ಯಾಹ್ನದ ವೇಳೆಯಲ್ಲೂ ಜನವಿರಳ ಪ್ರದೇಶದಲ್ಲಿ ಒಬ್ಬ ಹೆಣ್ಣು ಸ್ವತಂತ್ರವಾಗಿ ತಿರುಗಲೂ ಆಗದಂತಹ ಪರಿಸ್ಥಿತಿ ಇದೆ. ಹೀಗಾದರೆ ಯಾವ ಕಾನೂನು ಏನು ಮಾಡುತ್ತದೆ. ಜನರಿಗೆ ನ್ಯಾಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ಮೇಲೆ ಹೇಗೆ ನಂಬಿಕೆ ಬರುತ್ತದೆ. ಇದು ನಮ್ಮ ಮುಂದಿರುವ ಪ್ರಶ್ನೆ.

ಭಾರತ ಯಾವ ಉದ್ದೇಶಗಳನ್ನು ಇಟ್ಟುಕೊಂಡು ಮಾನವ ಹಕ್ಕುಗಳ ಸಂರಕ್ಷಣೆ ಒಪ್ಪಂದಕ್ಕೆ ಸಹಿ ಹಾಕಿತೋ, ಆ ಉದ್ದೇಶ ಇಂದು ಮಣ್ಣು ಪಾಲಾಗಿದೆ. ಜಾತಿ, ವರ್ಣ, ಲಿಂಗ, ಜನ್ಮಸ್ಥಳ, ಧರ್ಮ, ದೇವರ ಹೆಸರಿನಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳು ಉಲ್ಲಂಘನೆ ತಡೆಗೆ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲದಂತಾಗುತ್ತದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ಅವರ ಸ್ವಂತದ್ದಾಗಿರುತ್ತವೆ. ಅವು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಪೊಲೀಸರು ಮತ್ತು ಸರ್ಕಾರಗಳು ತಮ್ಮ ಕರ್ತವ್ಯಲೋಪಗಳನ್ನು ಮರೆಮಾಚುವ ಸಲುವಾಗಿ ಹೆಚ್ಚು ಪ್ರಚಾರಕ್ಕೆ ಬರುವ ಯಾವುದೋ ಒಂದು ಪ್ರಕರಣದಲ್ಲಿ, ಸಂಚಿನಿಂದ ಎನ್ಕೌಂಟರ್ ನಡೆಸಿ ಸಾರ್ವಜನಿಕರ ಕೋಪವನ್ನು ತಣಿಸುವ ಪ್ರಯತ್ನ ನಡೆದಿದೆ.

  2. ಪೊಲೀಸ್ ಏರ್ಪಾಡಿನಲ್ಲಿ ಮತ್ತು ಇತರ ಅಂಗಳಗಳಲ್ಲಿ ಕಸುಬುದಾರಿಕೆ ಕಡಿಮೆಯಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...