Homeಮುಖಪುಟಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: 'ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು:...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

- Advertisement -
- Advertisement -

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಏಷ್ಯಾ ಸಂಘರ್ಷ ಭಾರತೀಯ ಉಪಖಂಡದ ಹತ್ತಿರ ಬಂದಿದ್ದರೂ ಅವರು ಮೌನವಾಗಿದ್ದಾರೆ ಎಂದು ಆರೋಪಿಸಿದ್ದಾರೆ. 

“ದೇಶಕ್ಕೆ ಈ ಸಮಯದಲ್ಲಿ ಸ್ಥಿರವಾದ ಮತ್ತು ದೃಢವಾದ ನಾಯಕತ್ವ ಬೇಕು, ಆದರೆ ನಮಗೆ ಸಿಕ್ಕಿರುವುದು ‘ರಾಜಿ ಮಾಡಿಕೊಂಡ ದುರ್ಬಲ ಪ್ರಧಾನಿ’,  ಅವರು ನಮ್ಮ ಕಾರ್ಯತಂತ್ರದ ಸ್ವಾಯತ್ತತೆಯನ್ನು (ಸ್ವತಂತ್ರ ನಿರ್ಧಾರ ಶಕ್ತಿ) ಬಿಟ್ಟುಕೊಟ್ಟಿದ್ದಾರೆ.” ಎಂದು ಹೇಳಿದ್ದಾರೆ. 

ಜಗತ್ತು ಅಸ್ಥಿರ ಹಂತವನ್ನು ಪ್ರವೇಶಿಸಿದೆ ಮತ್ತು “ಬಿರುಗಾಳಿಯ ಸಮುದ್ರಗಳು ಮುಂದಿವೆ” ಎಂದು ಹೇಳಿರುವ ರಾಹುಲ್ ಗಾಂಧಿ “ಭಾರತದ ತೈಲ ಸರಬರಾಜು ಅಪಾಯದಲ್ಲಿದೆ, ನಮ್ಮ ಆಮದುಗಳಲ್ಲಿ 40% ಕ್ಕಿಂತ ಹೆಚ್ಚು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತವೆ. LPG ಮತ್ತು LNG ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ” ಎಂದು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಬರೆದುಕೊಂಡಿದ್ದಾರೆ. 

ಜೊತೆಗೆ “ಸಂಘರ್ಷವು ನಮ್ಮ ಹಿತ್ತಲನ್ನು ತಲುಪಿದೆ, ಇರಾನಿನ ಯುದ್ಧನೌಕೆ ಹಿಂದೂ ಮಹಾಸಾಗರದಲ್ಲಿ ಮುಳುಗಿದೆ. ಆದರೂ ಪ್ರಧಾನಿ ಏನನ್ನೂ ಹೇಳಿಲ್ಲ” ಎಂದು ಗಾಂಧಿ ಆರೋಪಿಸಿದ್ದಾರೆ. ಇಂತಹ ಸಮಯದಲ್ಲಿ ಭಾರತಕ್ಕೆ ಒಂದು ಸದೃಢ ನಾಯಕನ ಅಗತ್ಯವಿದೆ, ಆದರೆ “ಬದಲಾಗಿ, ಭಾರತವು ನಮ್ಮ ಕಾರ್ಯತಂತ್ರದ ಸ್ವಾಯತ್ತತೆಯನ್ನು ಬಿಟ್ಟುಕೊಟ್ಟ ರಾಜಿ ಮಾಡಿಕೊಂಡ ಪ್ರಧಾನಿಯನ್ನು ಹೊಂದಿದೆ” ಎಂದು ಗಾಂಧಿ ಹೇಳಿದ್ದಾರೆ.

ಭಾರತ ಆಯೋಜಿಸಿದ್ದ ಬಹುಪಕ್ಷೀಯ ಯುದ್ಧನೌಕೆಯಾದ ಮಿಲನ್ ನೌಕಾ ವ್ಯಾಯಾಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಶ್ರೀಲಂಕಾದ ಕರಾವಳಿಯ ಅಂತರರಾಷ್ಟ್ರೀಯ ನೀರಿನಲ್ಲಿ ಅಮೆರಿಕದ ಜಲಾಂತರ್ಗಾಮಿ ನೌಕೆಯೊಂದು ಇರಾನ್ ಯುದ್ಧನೌಕೆಯನ್ನು ಟಾರ್ಪಿಡೊ ಮಾಡಿ ಮುಳುಗಿಸಿದ ಒಂದು ದಿನದ ನಂತರ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...