Homeಅಂತರಾಷ್ಟ್ರೀಯಖಮೇನಿ ಮೇಲಿನ ದಾಳಿಯು 'ಸಂಪೂರ್ಣ ಯುದ್ಧ'ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

ಖಮೇನಿ ಮೇಲಿನ ದಾಳಿಯು ‘ಸಂಪೂರ್ಣ ಯುದ್ಧ’ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

- Advertisement -
- Advertisement -

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮೇಲಿನ ಯಾವುದೇ ದಾಳಿಯನ್ನು ಇರಾನ್ ರಾಷ್ಟ್ರದ ವಿರುದ್ಧ “ಸಂಪೂರ್ಣ ಯುದ್ಧ” ಘೋಷಣೆ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ.

“ಇರಾನ್‌ನಲ್ಲಿ ಹೊಸ ನಾಯಕತ್ವವನ್ನು ಹುಡುಕುವ ಸಮಯ” ಎಂದು ಟ್ರಂಪ್ ಶನಿವಾರ ಪೊಲಿಟಿಕೊಗೆ ಹೇಳಿದ ನಂತರ ಉದ್ವಿಗ್ನತೆ ಹೆಚ್ಚಿದೆ. ಈ ನಡುವೆ, ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪೆಜೆಶ್ಕಿಯಾನ್ ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ.

“ನಮ್ಮ ಮಹಾನ್ ನಾಯಕನ ಮೇಲಿನ ಯಾವುದೇ ದಾಳಿಯು ಇರಾನ್ ರಾಷ್ಟ್ರದ ವಿರುದ್ಧ ಸಂಪೂರ್ಣ ಯುದ್ಧಕ್ಕೆ ಸಮಾನವಾಗಿರುತ್ತದೆ” ಎಂದು ಪೆಜೆಶ್ಕಿಯಾನ್ ಬರೆದಿದ್ದಾರೆ.

ಇರಾನ್ ಅಧ್ಯಕ್ಷರು ದೇಶದ ಆರ್ಥಿಕ ಸಂಕಷ್ಟಗಳಿಗೆ ವಾಷಿಂಗ್ಟನ್ ಅನ್ನು ದೂಷಿಸಿದರು. “ದೀರ್ಘಕಾಲದ ದ್ವೇಷ ಮತ್ತು ಯುನೈಟೆಡ್ ಸ್ಟೇಟ್ಸ್, ಅದರ ಮಿತ್ರರಾಷ್ಟ್ರಗಳು ವಿಧಿಸಿರುವ ಅಮಾನವೀಯ ನಿರ್ಬಂಧಗಳು ಇರಾನಿನ ಜನರಿಗೆ ಸಂಕಷ್ಟಕ್ಕೆ ಪ್ರಾಥಮಿಕವಾಗಿ ಕಾರಣ” ಎಂದು ಉಲ್ಲೇಖಿಸಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶನಿವಾರ ಖಮೇನಿ ಟ್ರಂಪ್ ಅವರನ್ನು ಅಪರಾಧಿ ಎಂದು ಕರೆದಾಗ ಉಭಯ ರಾಷ್ಟ್ರಗಳ ರಾಜತಾಂತ್ರಿಕ ತಿಕ್ಕಾಟ ತೀವ್ರಗೊಂಡಿದೆ. ಇರಾನ್‌ನಲ್ಲಿ ಇತ್ತೀಚಿನ ದೇಶೀಯ ಅಶಾಂತಿಯ ಅವಧಿಯಲ್ಲಿ ಉಂಟಾದ ಸಾವುನೋವುಗಳು ಮತ್ತು ಹಾನಿಗಳಿಗೆ ಅವರನ್ನು ಹೊಣೆಗಾರರನ್ನಾಗಿ ಮಾಡಿದರು.

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ದಶಕಗಳ ಆಡಳಿತವನ್ನು ಕೊನೆಗೊಳಿಸಲು ಟ್ರಂಪ್ ಕರೆ ನೀಡಿದರು. ದೇಶವು ನಿರಂತರ ಸಾರ್ವಜನಿಕ ಅಶಾಂತಿಯನ್ನು ಎದುರಿಸುತ್ತಿರುವ ಕಾರಣ ದೇಶಕ್ಕೆ ಹೊಸ ನಾಯಕತ್ವದ ಅಗತ್ಯವಿದೆ ಎಂದು ಹೇಳಿದರು.

ಶನಿವಾರ ಪೊಲಿಟಿಕೊ ಜೊತೆ ಮಾತನಾಡಿದ ಟ್ರಂಪ್, “ಇರಾನ್‌ನಲ್ಲಿ ಹೊಸ ನಾಯಕತ್ವವನ್ನು ಹುಡುಕುವ ಸಮಯ ಬಂದಿದೆ” ಎಂದು ಹೇಳಿದರು. ರಾಜಕೀಯ ದಬ್ಬಾಳಿಕೆ, ಆರ್ಥಿಕ ಸಂಕಷ್ಟ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ಮೇಲಿನ ಸಾರ್ವಜನಿಕ ಕೋಪದಿಂದ ಈ ಪ್ರದರ್ಶನಗಳು ನಡೆದಿವೆ ಎಂದು ಹೇಳಿದ್ದರು.

ಹಿಂಸೆ ಮತ್ತು ಭಯದ ಮೂಲಕ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ ಟ್ರಂಪ್, ಇರಾನ್ ನಾಯಕತ್ವವನ್ನು ತೀವ್ರವಾಗಿ ಟೀಕಿಸಿದರು. ಮರಣದಂಡನೆ ವಿಧಿಸಲಾಗಿದೆ ಎಂದು ಆರೋಪಿಸುತ್ತಾ, “ಎರಡು ದಿನಗಳ ಹಿಂದೆ 800 ಕ್ಕೂ ಹೆಚ್ಚು ಜನರನ್ನು ಗಲ್ಲಿಗೇರಿಸದಿರುವುದು ಅವರು ತೆಗೆದುಕೊಂಡ ಅತ್ಯುತ್ತಮ ನಿರ್ಧಾರ” ಎಂದರು.

ಇರಾನ್‌ನ ಪ್ರಸ್ತುತ ನಾಯಕತ್ವವು ಅಧಿಕಾರದಲ್ಲಿ ಉಳಿಯಲು ದಮನವನ್ನು ಅವಲಂಬಿಸಿದೆ ಎಂದು ಅಮೆರಿಕ ಅಧ್ಯಕ್ಷರು ವಾದಿಸಿದರು. ದೇಶದ ಪತನಕ್ಕೆ ಖಮೇನಿ ಅವರನ್ನು ದೂಷಿಸಿದ ಟ್ರಂಪ್, “ದೇಶದ ಸಂಪೂರ್ಣ ವಿನಾಶ”ದ ಅಧ್ಯಕ್ಷತೆಯನ್ನು ಸರ್ವೋಚ್ಚ ನಾಯಕ ವಹಿಸಿದ್ದಾರೆ. ಭಿನ್ನಾಭಿಪ್ರಾಯವನ್ನು ನಿಗ್ರಹಿಸಲು ಭಾರೀ ಹಿಂಸಾಚಾರವನ್ನು ಬಳಸುತ್ತಿದ್ದಾರೆ ಎಂದು ಟ್ರಂಪ್ ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...