Homeಮುಖಪುಟಬಾಲಕಿಯನ್ನು ಅಪಹರಿಸಿ ಬೆಂಕಿ ಹಚ್ಚಿದ ಪ್ರಕರಣ: ಪೂರ್ವ ಯೋಜಿತ ಕೃತ್ಯ ಎಂದ ಪ್ರಾಥಮಿಕ ವರದಿ

ಬಾಲಕಿಯನ್ನು ಅಪಹರಿಸಿ ಬೆಂಕಿ ಹಚ್ಚಿದ ಪ್ರಕರಣ: ಪೂರ್ವ ಯೋಜಿತ ಕೃತ್ಯ ಎಂದ ಪ್ರಾಥಮಿಕ ವರದಿ

- Advertisement -
- Advertisement -

ಒಡಿಶಾದಲ್ಲಿ ವಿದ್ಯಾರ್ಥಿನಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಳಿಕ, ಬಾಲಕಿಯನ್ನು ಅಪಹರಿಸಿ ಬೆಂಕಿ ಹಚ್ಚಿದ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ.

ಪುರಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇದು ಪೂರ್ವ ಯೋಜಿತ ಕೃತ್ಯ ಎಂಬುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಶನಿವಾರ ಬೆಳಿಗ್ಗೆ ಪುರಿಯ ಬಲಂಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕರ ಗುಂಪೊಂದು ಬಾಲಕಿಯನ್ನು ನದಿ ಬದಿಗೆ ಹೊತ್ತೊಯ್ದು ದೇಹದ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ವರದಿಗಳು ಹೇಳಿವೆ.

ಗಂಭೀರ ಸುಟ್ಟಗಾಯಗಳಿಂದ ಬಳಲುತ್ತಿದ್ದ ಬಾಲಕಿಯನ್ನು ಸ್ಥಳೀಯರು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿದ್ದರು. ಆ ಬಳಿಕ ಆಕೆಯನ್ನು ಭುವನೇಶ್ವರದ ಏಮ್ಸ್‌ಗೆ ದಾಖಲಿಸಲಾಗಿದೆ. ಪ್ರಸ್ತುತ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ದಾಳಿಗೊಳಗಾದ ಬಾಲಕಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವಳು ಎಂದು ತಿಳಿದು ಬಂದಿದೆ.

ಸಂತ್ರಸ್ತೆ ತನ್ನ ಸ್ನೇಹಿತೆಯ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ. ಮೂವರು ಯುವಕರು, ಬೈಕ್‌ನಲ್ಲಿ ಬಂದು ಆಕೆಯ ಬಾಯಿಯನ್ನು ಕರವಸ್ತ್ರದಿಂದ ಮುಚ್ಚಿ ಸ್ಥಳೀಯ ಭಾರ್ಗವಿ ನದಿಯ ದಡಕ್ಕೆ ಹೊತ್ತೊಯ್ದಿದ್ದರು. ಅಲ್ಲಿ, ಆಕೆಯ ದೇಹದ ಮೇಲೆ ಬೆಂಕಿ ಹೊತ್ತಿಕೊಳ್ಳುವ ವಸ್ತು ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ಜೀವ ಉಳಿಸಿಕೊಳ್ಳುವ ಪ್ರಯತ್ನದಲ್ಲಿ, ಬಾಲಕಿ ಹತ್ತಿರದ ಹಳ್ಳಿಯ ಕಡೆಗೆ ಓಡಿ ಸಹಾಯ ಯಾಚಿಸಿದ್ದಳು. ಸ್ಥಳೀಯ ನಿವಾಸಿ ದುಃಖಿಶ್ಯಾಮ್ ಸೇನಾಪತಿ ಎಂಬವರು ಆಕೆಯನ್ನು ರಕ್ಷಿಸಿದ್ದಾರೆ. ಬೆಂಕಿ ನಂದಿಸಿ, ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಹೊಸ ಬಟ್ಟೆ ಒದಗಿಸಿದ್ದಾರೆ.

“ದುಷ್ಕರ್ಮಿಗಳು ಬಾಲಕಿಯ ಚಲನವಲನಗಳನ್ನು ಗಮನಿಸುತ್ತಿದ್ದರು ಎಂದನಿಸುತ್ತದೆ. ಹಾಗಾಗಿಯೇ ಅವರು ದಾಳಿಗೆ ಸಿದ್ಧರಾಗಿ ಬಂದಿರಬಹುದು. ನಾವು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಸಂಬಂಧ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಆದರೆ, ತನಿಖೆ ಮುಂದುವರಿದಿದೆ. ಒಂದಷ್ಟು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಪುರಿ ಜಿಲ್ಲೆಯ ಉಸ್ತುವಾರಿ ಎಸ್ಪಿಯೂ ಆಗಿರುವ ಡಿಐಜಿ ಪಿನಕ್ ಮಿಶ್ರಾ ನೇತೃತ್ವದ ಪೊಲೀಸ್ ತಂಡವು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದೆ. ಈ ವೇಳೆ ಕನಿಷ್ಠ ಎರಡು ಬಾಟಲಿಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತು ಪತ್ತೆಯಾಗಿದೆ. ಅದು ಸೀಮೆಎಣ್ಣೆ ಎಂದು ಅಂದಾಜಿಸಲಾಗಿದೆ. ಆ ವಸ್ತುವನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಸರಣಿ ಪ್ರಕರಣ

ಕಳೆದ ಎರಡು ವಾರಗಳಿಂದ ಒಡಿಶಾದಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯದ ಸರಣಿ ಪ್ರಕರಣಗಳು ವರದಿಯಾಗುತ್ತಿವೆ.

ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದರೂ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಳ್ಳದ ಹಿನ್ನೆಲೆ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವಿಗೀಡಾದ ಘಟನೆ ಕಳೆದ ಸೋಮವಾರ ನಡೆದಿತ್ತು.

ಈ ಪ್ರಕರಣ ರಾಜ್ಯಾದ್ಯಂತ ದೊಡ್ಡ ಜನಾಕ್ರೋಶಕ್ಕೆ ಕಾರಣವಾಗಿತ್ತು. ಪ್ರತಿಪಕ್ಷಗಳು ಬೀದಿಗಿಳಿದ್ದು ಸರ್ಕಾರದ ವಿರುದ್ದ ಪ್ರತಿಭಟಿಸಿದ್ದವು. ಈ ಬೆನ್ನಲ್ಲೇ ಇದೀಗ ಬಾಲಕಿಯನ್ನು ಹೊತ್ತೊಯ್ದು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ – ಒಂದು ಕುಟುಂಬದ ನೋವಿನ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...