Homeಮುಖಪುಟಮೋದಿ-ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ: 'ರಾಹುಲ್ ಗಾಂಧಿ ಹಿಂದೂಗಳನ್ನು ಅವಮಾನಿಸಿದ್ದಾರೆ' ಎಂದ ಬಿಜೆಪಿ

ಮೋದಿ-ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ: ‘ರಾಹುಲ್ ಗಾಂಧಿ ಹಿಂದೂಗಳನ್ನು ಅವಮಾನಿಸಿದ್ದಾರೆ’ ಎಂದ ಬಿಜೆಪಿ

- Advertisement -
- Advertisement -

‘ಮೋದಿ-ಆರ್‌ಎಸ್‌ಎಸ್‌ ಮಾತ್ರ ಸಂಪೂರ್ಣ ಹಿಂದೂ ಅಲ್ಲ” ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಭಾರತೀಯ ಜನತಾ ಪಕ್ಷವು ಸಂಸತ್ತಿನಲ್ಲಿ ತಿರುಗೇಟು ನೀಡಿದೆ. ‘ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕರು ಹಿಂದೂಗಳನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿದರು.

ಇದು ಸಂವಿಧಾನದ ಪ್ರತಿ ಮತ್ತು ಭಗವಾನ್ ಶಿವ, ಪ್ರವಾದಿ ಮೊಹಮ್ಮದ್, ಜೀಸಸ್ ಕ್ರೈಸ್ಟ್ ಮತ್ತು ಗುರು ನಾನಕ್ ಸಿಂಗ್ ಸೇರಿದಂತೆ ಧಾರ್ಮಿಕ ವ್ಯಕ್ತಿಗಳ ಫೋಟೋಗಳೊಂದಿಗೆ ಸದನಕ್ಕೆ ಬಂಸಿದ್ದ ರಾಹುಲ್, ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್ ವಿರುದ್ಧ ತೀವ್ರ ದಾಳಿಯನ್ನು ಪ್ರಾರಂಭಿಸಿದರು. ನೀವು ನಿಜವಾಗಿ ಎಲ್ಲಾ ಹಿಂದೂಗಳನ್ನು ಪ್ರತಿನಿಧಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಾಯಕರ ಟೀಕೆಗಳನ್ನು ಖಂಡಿಸಲು ಮೋದಿ ಎರಡು ಬಾರಿ ಎದ್ದುನಿಂತಿದ್ದು ವಿಶೇಷವಾಗಿತ್ತು. “ಇಡೀ ಹಿಂದೂ ಸಮಾಜವನ್ನು ಹಿಂಸಾತ್ಮಕ ಎಂದು ಕರೆಯುವುದು ಗಂಭೀರ ವಿಷಯವಾಗಿದೆ…” ಎಂದು ಮೋದಿ ಮೊದಲ ಬಾರಿಗೆ ಚರ್ಚೆ ಮಧ್ಯದಲ್ಲಿ ಎದ್ದು ಹೇಳಿದರು.

ಅವರ ಎರಡನೆಯ ಹಸ್ತಕ್ಷೇಪದಲ್ಲಿ ರಾಹುಲ್ ಗಾಂಧಿ ಅವರನ್ನು ಗೇಲಿ ಮಾಡಲು ಬಳಸಿಕೊಂಡರು; ಇಂದು ರಾಹುಲ್ ಗಾಂಧಿಯವರು ನಿರ್ವಹಿಸುತ್ತಿರುವ ವಿರೋಧ ಪಕ್ಷದ ನಾಯಕನ ಹುದ್ದೆಯನ್ನು ಗೌರವಿಸಲು ಸಂವಿಧಾನವು ತನಗೆ ಕಲಿಸಿದೆ ಎಂದು ಪ್ರಧಾನಿ ಹೇಳಿದಾ, ಆಡಳಿತ ಪಕ್ಷದ ಸದಸ್ಯರು ನಗುವ ಮೂಲಕ ಬೆಂಬಲ ಸೂಚಿಸಿದರು.

“ಸಂತಸವಾಗುತ್ತಿದೆ… ಬಿಜೆಪಿಯವರು ನನ್ನ ನಂತರ ‘ಜೈ ಸಂವಿಧಾನ್’ ಎಂದು ಪುನರಾವರ್ತನೆ ಮಾಡುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದರು.

ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರದ ಆರೋಪ ಮಾಡಿದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಮೇಲೆ ರಾಹುಲ್ ಗಾಂಧಿಯವರ ಮೊನಚಾದ ದಾಳಿಯೇ ಇಂದಿನ ಗದ್ದಲಕ್ಕೆ ನಿರ್ದಿಷ್ಟ ಪ್ರಚೋದನೆಯಾಗಿದೆ. “ನಮ್ಮ ಮಹಾಪುರುಷರು ಅಹಿಂಸೆಯ ಬಗ್ಗೆ ಮಾತನಾಡಿದ್ದಾರೆ (ಆದರೆ) ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ದ್ವೇಷದ ಬಗ್ಗೆ ಮಾತ್ರ ಮಾತನಾಡುತ್ತಾರೆ … ನೀವು ನಿಜವಾದ ಹಿಂದೂ ಅಲ್ಲವೇ ಅಲ್ಲ” ಎಂದು ಅವರು ಹೇಳಿದರು.

ರಾಹುಲ್ ಗಾಂಧಿಯವರ ಆವೇಶಭರಿತ ಭಾಷಣ

ರಾಹುಲ್ ಗಾಂಧಿಯವರು ತಮ್ಮ ಭಾಷಣವನ್ನು “ಭಾರತದ ಕಲ್ಪನೆಯ ಮೇಲೆ… ಸಂವಿಧಾನದ ಮೇಲೆ ಮತ್ತು ಸಂವಿಧಾನದ ಮೇಲಿನ ದಾಳಿಯನ್ನು ವಿರೋಧಿಸಿದ ಜನರ ಮೇಲೆ ಪೂರ್ಣ ಪ್ರಮಾಣದ ಮತ್ತು ವ್ಯವಸ್ಥಿತ ದಾಳಿ” ಎಂದು ಹೇಳುವುದರ ಪ್ರಾರಂಭಿಸಿದರು. ಅನೇಕ ವಿರೋಧ ಪಕ್ಷದ ನಾಯಕರ ಮೇಲೆ ವೈಯಕ್ತಿಕವಾಗಿ ಹಲ್ಲೆ ಮಾಡಲಾಯಿತು, ಕೆಲವರು ಇನ್ನೂ ಜೈಲಿನಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಗುಡುಗಿದರು.

“ನೀವು ಶಿವನ ಚಿತ್ರವನ್ನು ನೋಡಿದರೆ ಹಿಂದೂಗಳು ಎಂದಿಗೂ ಭಯ ಮತ್ತು ದ್ವೇಷವನ್ನು ಹರಡಲು ಸಾಧ್ಯವಿಲ್ಲ ಎಂದು ನಿಮಗೆ ತಿಳಿದಿದೆ.. ಆದರೆ ಬಿಜೆಪಿ 24×7 ಭಯ ಮತ್ತು ದ್ವೇಷವನ್ನು ಹರಡುತ್ತದೆ” ಎಂದು ಹೇಳಿದ ರಾಹುಲ್ ಗಾಂಧಿ, ಪ್ರವಾದಿ ಮೊಹಮ್ಮದ್ ಮತ್ತು ಗುರುನಾನಕ್ ಸಿಂಗ್ ಅವರ ಚಿತ್ರಗಳನ್ನು ಸಹ ಪ್ರದರ್ಶಿಸಿದರು.

ಇದನ್ನೂ ಓದಿ; ‘ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ..’; ಸದನದಲ್ಲಿ ಕಿಚ್ಚುಹಚ್ಚಿದ ರಾಹುಲ್ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...