Homeಮುಖಪುಟಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ: ಗೃಹ ಸಚಿವಾಲಯದ ಮುಂದೆ ಹಾಜರಾಗಲು ಡಿಜಿಪಿಗೆ ನೋಟಿಸ್!

ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ: ಗೃಹ ಸಚಿವಾಲಯದ ಮುಂದೆ ಹಾಜರಾಗಲು ಡಿಜಿಪಿಗೆ ನೋಟಿಸ್!

ಪ್ರತಿದಿನ ಬಿಜೆಪಿ ಕಾರ್ಯಕರ್ತರು ಬಂದೂಕಿನೊಂದಿಗೆ ರ್ಯಾಲಿಗೆ ಬರುತ್ತಾರೆ. ತಮ್ಮನ್ನು ತಾವೇ ಹೊಡೆದುಕೊಂಡು ನಮ್ಮ ಪಕ್ಷದ ಕಾರ್ಯಕರ್ತರನ್ನು ದೂಷಿಸುತ್ತಿದ್ದಾರೆ- ಮಮತಾ ಬ್ಯಾನರ್ಜಿ

- Advertisement -
- Advertisement -

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ನಿನ್ನೆ ದಾಳಿ ನಡೆದಿದ್ದು, ಕೆಲವು ದುಷ್ಕರ್ಮಿಗಳು ಇಟ್ಟಿಗೆ, ಕಲ್ಲು ಮತ್ತು ಕೋಲುಗಳಿಂದ ಹಲ್ಲೆ ನಡೆಸಿದ್ದರು. ಗೃಹಸಚಿವಾಲಯದ ಆದೇಶದಂತೆ ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಜಗದೀಪ್ ಧಂಕರ್ ಕೇಂದ್ರ ಸರ್ಕಾರಕ್ಕೆ ಇದರ ಕುರಿತು ವರದಿ ಸಲ್ಲಿಸಿದ್ದಾರೆ.

ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಕುರಿತು ವಿಚಾರಣೆಗೆ ನಡೆಸಲು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಡಿಸೆಂಬರ್ 14 ರಂದು ಕರೆಯಲಾಗಿದೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: PFI ಕಚೇರಿಗಳ ಮೇಲೆ ಇಡಿ ದಾಳಿ ಜನರ ಗಮನ ಬೇರೆಡೆಗೆ ಸೆಳೆಯುವ ಯತ್ನ: ಮುಹಮ್ಮದ್ ಶಾಕಿಫ್

ಕೋಲ್ಕತ್ತದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದೆ.

ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಕಾರಿನ ಮೇಲೂ ದಾಳಿ ಮಾಡಲಾಯಿತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.‌ ಬಿಜೆಪಿ ಮುಖಂಡರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮಾಧ್ಯಮದವರಿದ್ದ ವಾಹನಗಳಿಗೂ ಹಾನಿಯಾಗಿದೆ ಎಂದೂ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

ಈ ಘಟನೆ ಬಗ್ಗೆ ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ದಿಲೀಪ್‌ ಘೋಷ್‌ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಇದನ್ನು ‘ಯೋಜಿತ ಪಿತೂರಿ’ ಎಂದು ಕರೆದು, ಭದ್ರತಾ ವೈಫಲ್ಯದ ಆರೋಪ ಕುರಿತಂತೆ ವರದಿ ಸಲ್ಲಿಸಿ ಎಂದು ಪಶ್ಷಿಮ ಬಂಗಾಳ ರಾಜ್ಯಪಾಲರಿಗೆ ಸೂಚನೆ ನೀಡಿದ್ದರು.

ಇದು ಪ.ಬಂಗಾಳದಲ್ಲಿನ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವವುದಕ್ಕೆ ಸ್ಪಷ್ಟ ಉದಾಹರಣೆ ಎಂದಿರುವ ಬಿಜೆಪಿ, ಇದಕ್ಕೆ ಕಾರಣ ಮಮತಾ ಬ್ಯಾನರ್ಜಿಯವರ ಟಿಎಂಸಿ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅರ್ನಾಬ್, ಕಂಗನಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಶಿವಸೇನೆ ಶಾಸಕನ ಮನೆ ಮೇಲೆ ಇ.ಡಿ ದಾಳಿ!

ಅಮಿತ್ ಶಾ ಡಿಸೆಂಬರ್ 19 ಮತ್ತು 20 ರಂದು ಕೋಲ್ಕತ್ತಾಗೆ ಪ್ರಯಾಣಿಸಬಹುದು ಎಂದು ಮೂಲಗಳು ತಿಳಿಸಿವೆ. ಈ ಘಟನೆಯ ಬಗ್ಗೆ ಬಿಜೆಪಿ ಪಕ್ಷವು ಮಮತಾ ಬ್ಯಾನರ್ಜಿ ಸರ್ಕಾರವನ್ನು ಆಕ್ರಮಣಕಾರಿಯಾಗಿ ತರಾಟೆಗೆ ತೆಗೆದುಕೊಳ್ಳಲು ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ ಮಮತಾ, “ಆರು ತಿಂಗಳಲ್ಲಿ ಬಂಗಾಳ ಚುನಾವಣೆ ಬರುತ್ತಿದೆ. ಇದರ ರಾಜಕೀಯ ಪಿತೂರಿಯ ಭಾಗವಾಗಿ ಬಿಜೆಪಿ ಈ ರೀತಿ ಆಧಾರರಹಿತ ದಾಳಿ ನಡೆಸುತ್ತಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ…

“ನೀವು ರಾಜ್ಯದ ಭದ್ರತಾ ಪಡೆಗಳನ್ನು ಅವಲಂಬಿಸುವ ಬದಲು, ಕೇಂದ್ರದ ಭದ್ರತಾ ಪಡೆಗಳನ್ನು ಅವಲಂಬಿಸಿದ್ದೀರಿ. ಈ ದಾಳಿಯು ಯೋಜಿತ ಕೃತ್ಯ ಇರಬಹುದು. ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ. ಆದರೆ, ನಾನು ಎಂದಿಗೂ ಸುಳ್ಳನ್ನು ಹೇಳುವುದಿಲ್ಲ. ಪ್ರತಿದಿನ ಬಿಜೆಪಿ ಕಾರ್ಯಕರ್ತರು ಬಂದೂಕಿನೊಂದಿಗೆ ರ್ಯಾಲಿಗೆ ಬರುತ್ತಾರೆ. ತಮ್ಮನ್ನು ತಾವೇ ಹೊಡೆದುಕೊಂಡು ನಮ್ಮ ಪಕ್ಷದ ಕಾರ್ಯಕರ್ತರನ್ನು ದೂಷಿಸುತ್ತಿದ್ದಾರೆ” ಎಂದು ಮಮತಾ ಬ್ಯಾನರ್ಜಿ ಆಶ್ಚರ್ಯ ವ್ಯಕ್ತಪಡಿಸಿದರು.

 

ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...