Homeಮುಖಪುಟಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಮೋದಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೊಲೆ ಯತ್ನ: ನ್ಯೂಸ್ 14 ಸಂಪಾದಕ ಭಾಸ್ಕರ್ ಪ್ರಸಾದ್ ಆರೋಪ

ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಪೊಲೀಸರು FIR ದಾಖಲಿಸುವುದಾಗಲಿ, ನನಗೆ ಭದ್ರತೆ ಒದಗಿಸುವ ಕೆಲಸವನ್ನು ಮಾಡಿಲ್ಲ - ಭಾಸ್ಕರ್ ಪ್ರಸಾದ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಪ್ರಶ್ನೆ ಮಾಡಬಾರದು ಎಂದು ಬೆದರಿಕೆ ಹಾಕಿ ನನ್ನ ಮೇಲೆ ಕೊಲೆ ಯತ್ನ ಮಾಡಲು ಸಂಚು ರೂಪಿಸಿದ್ದಾರೆ” ಎಂದು ನ್ಯೂಸ್ 14 ನ ಸಂಪಾದಕರಾದ ಬಿ.ಆರ್ ಭಾಸ್ಕರ್ ಪ್ರಸಾದ್ ಆರೋಪಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಬಿ.ಆರ್ ಭಾಸ್ಕರ್ ಪ್ರಸಾದ್‌ರವರು ನ್ಯೂಸ್ 14 ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಪ್ರತಿದಿನ ಸಮಾಜದ ಆಗುಹೋಗುಗಳ ಎಲ್ಲಾ ಮಗ್ಗುಲುಗಳನ್ನು ಪರಿಚಯಿಸಿಕೊಡುವ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಅವರು, ತಮ್ಮ ಮೇಲಿನ ಹಲ್ಲೆ ಸಂಚಿಗೆ ಸಂಬಂಧಿಸಿದ ಸಾಕ್ಷಿಗಳನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ನಮ್ಮ ನ್ಯೂಸ್14 ಕಚೇರಿ ಮೇಲೆ ದಾಳಿ ಮಾಡಲು ಯೋಜನೆ ರೂಪಿಸಿಕೊಂಡು, ನನ್ನನ್ನು ಕೊಲ್ಲುವ ಪ್ರಯತ್ನ ಮಾಡಿ, ಕೊನೆಗೆ ಅದು ಸಾಧ್ಯವಾಗದೆ, ಓಡಿ ಹೋಗಿದ್ದಾರೆ. ಫೋನ್ ಮಾಡಿ ನನ್ನ ಕೊಲ್ಲುವ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ವದರಾಡಿಕೊಂಡು ದುಷ್ಕರ್ಮಿಗಳು ಓಡಿ ಹೋಗಿದ್ದಾರೆ. ಪೋಲಿಸ್ ಕಂಪ್ಲೇಂಟ್ ನೀಡಲಾಗಿದೆ‌” ಎಂದು ಮಾಹಿತಿ ನೀಡಿದ್ದಾರೆ.

“ಅದಕ್ಕೂ ಒಂದು ದಿನದ ಮುಂಚೆ ಈ 8088518987 ನಂಬರ್ ಇಂದ ಮಧ್ಯ ರಾತ್ರಿಯಲ್ಲಿ ಒಂದು ಫೋನ್ ಕಾಲ್ ಬಂತು. ಏನೋ ಎಮರ್ಜೆನ್ಸಿ ಇರಬೇಕು ಎಂದು ಫೋನ್ ತೆಗೆದೆ. ಒಂದೇ ನಿಮಿಷಕ್ಕೆ ಕಟ್ ಮಾಡಿದೆ‌. ಕೊಲ್ಲುವ ಮಾತು ಬಿಟ್ಟು ಇವನು ಮತ್ತೇನೂ ಮಾತಾಡಲಿಲ್ಲ. ಮೋದಿ ಬಗ್ಗೆ ನಾನು ಯಾವ ಪ್ರಶ್ನೆಯನ್ನು ಇನ್ಯಾವತ್ತೂ ಮಾಡಬಾರದಂತೆ. ಮಾಡಿದರೆ ಅವತ್ತೇ ನನ್ನ ಕೊಲ್ತಾನಂತೆ. ಸ್ನೇಹಿತರೇ, ನಾನು ಸಾಯೋಕೆ ಯೋಚನೆ ಮಾಡಲ್ಲ. ಆದರದು ನಿಮ್ಮ ಬಲಹೀನತೆಯಾದರೇ,, ಅದು ನಿಮ್ಮ ಸಾವಷ್ಟೇ… Its my real warning” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಅತ್ಯಾಚಾರ ಆರೋಪ ಎದುರಿಸುತ್ತಿರುವ ಸಚಿವನ ಪರ ನಿಂತ ಸರ್ಕಾರ?

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಭಾಸ್ಕರ್ ಪ್ರಸಾದ್, “ನಮ್ಮ ಚಾನೆಲ್‌ನಲ್ಲಿ ಪ್ರತಿದಿನ 6 ರಿಂದ 7 ಗಂಟೆಯವರೆಗೆ ಮತ್ತು 8 ರಿಂದ 9 ಗಂಟೆಯವರೆಗೆ ಸುದ್ದಿ ನೇರ ಪ್ರಸಾರ ಇರುತ್ತದೆ. 7 ರಿಂದ 8 ಗಂಟೆಯವರೆಗೆ ಬಿಡುವಿರುತ್ತದೆ. ಈ ಸಮಯದಲ್ಲಿ ನಾನು ಮನೆಗೆ ಹೋಗಿದ್ದೆ. ಆಗ ಟೊಯೊಟಾ ಕಾರ್‌ನಲ್ಲಿ ಕೆಲವರು ಬಂದು ನಮ್ಮ ಕಛೇರಿಯ ಗೇಟನ್ನು ತೆರೆಯಲು ಪ್ರಯತ್ನಿಸಿದರು. ಅದು ಲಾಕ್ ಆಗಿತ್ತು. ಆಗ ನನ್ನ ಹೆಸರು ಕೂಗಿದ್ದಾರೆ. ನಂತರ ನಮ್ಮ ಸಿಬ್ಬಂದಿ ಹೊರಬಂದು ನಾನು ಕಛೇರಿಯಲ್ಲಿಲ್ಲವೆಂದು ಹೇಳಿದ್ದಾರೆ. ಇದಕ್ಕೆ ಕೆರಳಿದ ದುಷ್ಕರ್ಮಿಗಳು ಕಛೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ನಮ್ಮ ಸಿಬ್ಬಂದಿ ನನಗೆ ಕರೆಯ ಮೂಲಕ ತಿಳಿಸಿದರು. ನಾನು ಪೊಲೀಸರಿಗೆ ತಿಳಿಸಿ ಕಛೇರಿಗೆ ಹೊರಟೆ. 8.30 ರ ಸುಮಾರಿಗೆ ಮತ್ತಷ್ಟು ಜನ ಕಾರು ಮತ್ತು ಬೈಕ್‌ಗಳಲ್ಲಿ ಬಂದು ಗೇಟ್ ತೆಗೆಯಲು ಪ್ರಯತ್ನಿಸಿದರು. ಇದನ್ನು ನಾವು ಫೋಟೋ ತೆಗೆದುಕೊಂಡೆವು. ಜೊತೆಗೆ ಇದು ಸಿಸಿಟಿವಿಯಲ್ಲಿಯೂ ರೆಕಾರ್ಡ್‌ ಆಗಿದೆ” ಎಂದು ಹೇಳಿದರು.

“ನಾವು ಫೋಟೋ ತೆಗೆದಿದ್ದನ್ನು ನೋಡಿದ ದುಷ್ಕರ್ಮಿಗಳು ನಮ್ಮ ವಿರುದ್ಧವೆ ದೂರು ನೀಡಲು ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಹೋಗಿದ್ದಾರೆ. ನಾವು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಇದು ನಮಗೆ ಗೊತ್ತಾಯಿತು. ನಾನು ನಡೆದ ವಿವರಗಳನ್ನು ಹೇಳಿ ದೂರು ನೀಡಿದ್ದೇನೆ. ಆದರೆ ಪೊಲೀಸರು ಇನ್ನೂ ಎಫ್‌ಐಆರ್ ಹಾಕಿಲ್ಲ. ಇದುವರೆಗೂ ನನ್ನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸುಮಾರು 10 ದೂರುಗಳನ್ನು ನೀಡಿದ್ದೇನೆ. ಆದರೆ ಇದಾವುದಕ್ಕೂ ಪೊಲೀಸರು ಎಫ್‌ಐಆರ್ ದಾಖಲಿಸುವುದಾಗಲಿ, ನಮ್ಮ ಕಛೇರಿ ಮತ್ತು ನನಗೆ ಭದ್ರತೆ ಒದಗಿಸುವ ಕೆಲಸವನ್ನಾಗಲಿ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಲವು ದಿನಗಳಿಂದ ನನಗೆ ಕೆಲವು ಬೆದರಿಕೆಯ ಕರೆಗಳು ಬರುತ್ತಿದ್ದು, ಮೋದಿಯ ಬಗ್ಗೆ, ಬಿಜೆಪಿಯ ಬಗ್ಗೆ ಮತ್ತು ಹಿಂದುತ್ವದ ಬಗ್ಗೆ ಮಾತನಾಡಬಾರದೆಂದೂ, ಮಾತನಾಡಿದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದರು.


ಇದನ್ನೂ ಓದಿ: 37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...