Homeಮುಖಪುಟನಿತೀಶ್‌ ಕುಮಾರ್‌ ಬೆಂಗಾವಲು ವಾಹನದ ಮೇಲೆ ದಾಳಿ; 13 ಜನರ ಬಂಧನ

ನಿತೀಶ್‌ ಕುಮಾರ್‌ ಬೆಂಗಾವಲು ವಾಹನದ ಮೇಲೆ ದಾಳಿ; 13 ಜನರ ಬಂಧನ

- Advertisement -
- Advertisement -

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಭದ್ರತಾ ಬೆಂಗಾವಲು ಪಡೆ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ 13 ಜನರನ್ನು ಬಂಧಿಸಲಾಗಿದೆ ಎಂದು ಬಿಹಾರ ಪೊಲೀಸರು ಭಾನುವಾರ ತಿಳಿಸಿದ್ದಾರೆ. ನಿತೀಶ್‌ ಕುಮಾರ್‌ ಅವರು ಆ ವೇಳೆ ಕಾರಿನಲ್ಲಿ ಉಪಸ್ಥಿತರಿರಲಿಲ್ಲ ಎಂದು ವರದಿಯಾಗಿದೆ.

ಆಗಸ್ಟ್ 22 ರಂದು ನಿತೀಶ್‌ ಕುಮಾರ್ ಅವರ ಭೇಟಿಗೆ ಮುನ್ನ ಭದ್ರತಾ ವ್ಯವಸ್ಥೆಗಳನ್ನು ಗಮನಿಸಲು ಬೆಂಗಾವಲು ಪಡೆ ಗಯಾ ನಗರಕ್ಕೆ ತೆರಳುತ್ತಿದ್ದಾಗ ಶನಿವಾರ ಈ ಘಟನೆ ನಡೆದಿದೆ.

ಕಾಣೆಯಾದ ಬಾಲಕನ ಶವ ಚರಂಡಿಯಲ್ಲಿ ಪತ್ತೆಯಾದ ಬಳಿಕ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ತಡೆ ನಡೆಸಿದ ಸ್ಥಳೀಯರು ಸೊಹ್ಗಿ ಗ್ರಾಮದಲ್ಲಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಗ್ರಾಮಸ್ಥರು ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಮರದ ದೊಣ್ಣೆಗಳಿಂದ ಹೊಡೆದಿದ್ದಾರೆ ಎಂದು ವರದಿಯಾಗಿದೆ.

ಆಗಸ್ಟ್ 7ರಂದು ನಾಪತ್ತೆಯಾಗಿದ್ದ ಬಾಲಕನನ್ನು ಸುನ್ನಿ ಕುಮಾರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಕೃಷ್ಣ ಕುಮಾರ್ ತಿಳಿಸಿದ್ದಾರೆ.

“ಬಾಲಕನ ಶವವು ಬೇರ್ ಪೊಲೀಸ್ ಠಾಣೆ ವ್ಯಾಪ್ತಿಯ ಚರಂಡಿಯಲ್ಲಿ ಪತ್ತೆಯಾಗಿದೆ ಎಂದು ಗ್ರಾಮಸ್ಥರು ತಿಳಿದರು. ಆ ಸಮಯದಲ್ಲಿ ಹಾದುಹೋದ ಭದ್ರತಾ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ಜನರು ಪ್ರತಿಭಟನೆಯನ್ನು ಪ್ರಾರಂಭಿಸಿದರು…” ಎಂದು ಕೃಷ್ಣಕುಮಾರ್‌ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬೆಂಗಾವಲು ಪಡೆಯಲ್ಲಿದ್ದ ಕೆಲವು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೂರು ವಾಹನಗಳಿಗೆ ಹಾನಿಯಾಗಿದೆ. ಅರ್ಧ ಗಂಟೆ ತಡವಾಗಿ ಬೆಂಗಾವಲು ಪಡೆ ಗಯಾಕ್ಕೆ ತೆರಳಿತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...