Homeಮುಖಪುಟಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

ಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

- Advertisement -
- Advertisement -

ಸೋಮವಾರ ಮಹಾರಾಷ್ಟ್ರದ ಅಕೋಲಾದಲ್ಲಿ ಸ್ವರಾಜ್ ಪಕ್ಷದ ನಾಯಕ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ.

ಸುಮಾರು 40-50 ಜನರ ಗುಂಪು ಅವರು ಮಾತನಾಡದಂತೆ ತಡೆಯಲು ವೇದಿಕೆಗೆ ನುಗ್ಗಿದೆ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಈ ಘಟನೆ ನಡೆದ ಸ್ವಲ್ಪ ಸಮಯದ ನಂತರ ಪೊಲೀಸರು ಬಂದು ಕಾರ್ಯಕ್ರಮವನ್ನು ನಿಲ್ಲಿಸಲು ಸೂಚಿಸಿದರು ಎಂದಿದ್ದಾರೆ.

ತಮ್ಮ ಮೇಲಿನ ಹಲ್ಲೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಯಾದವ್, “ಕಾರ್ಯಕ್ರಮದಲ್ಲಿ ‘ಸಂವಿಧಾನ ರಕ್ಷಣೆ ಮತ್ತು ನಮ್ಮ ಮತ’ ಎಂಬ ಚರ್ಚೆ ನಡೆಯುತ್ತಿತ್ತು. ಈ ವೇಳೆ ಭಾರತ್ ಜೋಡೋ ಅಭಿಯಾನದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಮತ್ತು ನನ್ನ ಮೇಲೆ ಹಲ್ಲೆ ನಡೆದಿದೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವವರ ಮೇಲೆ ಇಂತಹ ಹಲ್ಲೆಗಳು ನಡೆಯುತ್ತಲೇ ಇವೆ. ಪೊಲೀಸರು ಮಧ್ಯಪ್ರವೇಶಿಸಿದರೂ, ದಾಳಿಕೋರರು ತಮ್ಮ ವಿಧ್ವಂಸಕತೆಯನ್ನು ಮುಂದುವರೆಸಿದರು. ಪರಿಣಾಮ ಕಾರ್ಯಕ್ರಮ ರದ್ದುಗೊಳಿಸಬೇಕಾಯಿತು” ಎಂದು ತಿಳಿಸಿದ್ದಾರೆ.

“ಮಹಾರಾಷ್ಟ್ರಕ್ಕೆ ಕಳೆದ 25 ವರ್ಷಗಳಿಂದ ಆಗಾಗ್ಗೆ ಭೇಟಿ ನೀಡುತ್ತಿದ್ದೇವೆ. ಹಲವು ಕಾರ್ಯಕ್ರಮಗಳಲ್ಲಿ ಮಾತನಾಡಿದ್ದೇನೆ. ಇಂತಹ ಘಟನೆಯನ್ನು ಎಂದಿಗೂ ಎದುರಿಸಿರಲಿಲ್ಲ. ಈ ಘಟನೆಯು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಇಂತಹ ಘಟನೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದಿದ್ದಾರೆ.

‘ವಂಚಿತ್ ಬಹುಜನ್ ಅಘಾಡಿ (ವಿಬಿಎ)’ ಗುಂಪಿನಿಂದ ಹಲ್ಲೆ?

ಹಲ್ಲೆಯ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೇಂದ್ರ ಯಾದವ್ “ಹಲ್ಲೆ ನಡೆಸಿದವರು ವಂಚಿತ್ ಬಹುಜನ್ ಅಘಾಡಿ ಪಕ್ಷ (ಎಬಿವಿ)ದ ಕಾರ್ಯಕರ್ತರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ ಮತ್ತು ಕಾರ್ಯಕರ್ತರು ಹೇಳಿದ್ದಾರೆ. ಆದರೆ, ನನಗೆ ಆ ಬಗ್ಗೆ ಮಾಹಿತಿಯಿಲ್ಲ” ಎಂದಿದ್ದಾರೆ.

“ನನಗೆ ದಾಳಿ ನಡೆಸಿದ ಯಾರೊಬ್ಬರೂ ತಿಳಿದಿಲ್ಲ, ಆದರೆ ಸ್ಥಳೀಯ ಸಹೋದ್ಯೋಗಿಗಳು 24 ಹೆಸರುಗಳನ್ನು ಹೇಳಿದ್ದಾರೆ. ಅವರು ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಎಂದಿದ್ದಾರೆ. ಕಾರ್ಯಕ್ರಮಕ್ಕೆ ದಾಳಿ ನಡೆಸಿದಾಗ ನಮ್ಮ ಸಹೋದ್ಯೋಗಿಯೊಬ್ಬರು ಏಕೆ ದಾಳಿ ಮಾಡಿದ್ದೀರಿ? ಎಂದು ಕೇಳಿದ್ದಾರೆ. ಆಗ ದಾಳಿಗೆ ಬಂದ ವ್ಯಕ್ತಿಯೊಬ್ಬರು “ಸಾಬ್ ಆದೇಶ, ನಮಗೆ ಏನೂ ಗೊತ್ತಿಲ್ಲ” ಎಂದಿದ್ದಾರೆ ಎಂದು ಯಾದವ್ ಘಟನೆ ಕುರಿತು ವಿವರಿಸಿದ್ದಾರೆ.

ದಾಳಿಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಯಾದವ್, “ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಒಂದು ವೇಳೆ ದಾಳಿ ನಡೆಸಿದ್ದರೆ ತುಂಬಾ ಆಶ್ಚರ್ಯದ ವಿಷಯ. ಯೋಗೇಂದ್ರ ಯಾದವ್ ಬಹಳ ಸಣ್ಣ ಮನುಷ್ಯ; ನೀವು ಅವರ ಮೇಲೆ ದಾಳಿ ಮಾಡಿಲ್ಲ, ಬಾಬಾ ಸಾಹೇಬರ ಸಂವಿಧಾನದ ಮೇಲೆ ದಾಳಿ ಮಾಡಿದ್ದೀರಿ. ಹಗಲಿರುಳು ಮಾತನಾಡುವ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಿದ್ದೀರಿ ಮತ್ತು ನಿಮ್ಮ ನಾಯಕ ಪ್ರಕಾಶ್ ಅಂಬೇಡ್ಕರ್ ಅವರು ನಾಚಿಕೆ ಪಡುವಂತೆ ಮಾಡಿದ್ದೀರಿ” ಎಂದಿದ್ದಾರೆ.

“ಪ್ರಕಾಶ್ ಅಂಬೇಡ್ಕರ್ ಅವರ ಚಿಂತನೆ ಮತ್ತು ನಮ್ಮ ಆಲೋಚನೆಗಳು ವಿಭಿನ್ನವಾಗಿವೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ, ಭಿನ್ನಾಭಿಪ್ರಾಯಗಳಿಂದಾಗಿ ಇಂತಹ ದಾಳಿ ನಡೆಸಲಾಗದು. ಇದು ನನ್ನ ಕಲ್ಪನೆಗೂ ಮೀರಿದ್ದು. ಪ್ರಕಾಶ್ ಅಂಬೇಡ್ಕರ್ ಅವರು ಇಂತಹ ಕೃತ್ಯವೆಸಗುವ ವ್ಯಕ್ತಿ ಎಂದು ನಂಬುವುದಿಲ್ಲ” ಎಂದು ಹೇಳಿದ್ದಾರೆ.

ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು?

ಘಟನೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ “ಫುಲೆ, ಶಾಹು, ಅಂಬೇಡ್ಕರ್, ಗೋಖಲೆ, ತಿಲಕ್, ರಾನಡೆ, ಅಗರ್ಕರ್ ಅವರ ನಾಡಿನಲ್ಲಿ ಇದು ಸಂಭವಿಸಿದೆ. ಅಕೋಲಾದಲ್ಲಿ ವಿಬಿಎ ಕಾರ್ಯಕರ್ತರು ಯೋಗೇಂದ್ರ ಯಾದವ್ ಸಭೆಗೆ ಅಡ್ಡಿಪಡಿಸಿದ್ದಾರೆ. ಅವರಿಂದ ಮೈಕ್ ಕಿತ್ತುಕೊಂಡಿದ್ದಾರೆ. ಕುರ್ಚಿಗಳನ್ನು ಎಸೆದಿದ್ದಾರೆ. ಯಾದವ್ ಭಾಷಣ ಮಾಡಲು ಬಂದಾಗ ಅವರನ್ನು ತಳ್ಳಿದ್ದಾರೆ. ಇದನ್ನು ಪ್ರಶ್ನಿಸುವ ಹಕ್ಕು ಅವರಿಗೆ ಇಲ್ಲವೇ? ನಿಮಗೆ ಇಷ್ಟವಿಲ್ಲದಿದ್ದರೆ ಅವರ ಮಾತನ್ನು ಕೇಳಬೇಡಿ. ಆದರೆ, ಈ ಹಿಂಸೆ ಏಕೆ? ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು ಎಂದು ಆಶ್ಚರ್ಯವಾಗುತ್ತಿದೆ. ಇದು ನಮ್ಮ ಮಹಾರಾಷ್ಟ್ರ ಧರ್ಮವೇ? ಎಂದು ಪ್ರಶ್ನಿಸಿದ್ದಾರೆ.

ಆರೋಪ ತಳ್ಳಿ ಹಾಕಿದ ವಿಬಿಎ :

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿಬಿಎ “ಭೀಮರಾವ್ ಅಂಬೇಡ್ಕರ್ ಮತ್ತು ಮೀಸಲಾತಿ ನೀತಿಗಳ ಬಗ್ಗೆ ನೀಡಿದ ಹೇಳಿಕೆಗೆ ಅತೃಪ್ತಿ ವ್ಯಕ್ತಪಡಿಸಿ, ವಂಚಿತ್ ಬಹುಜನ್ ಅಘಾಡಿಯ ಬೆಂಬಲಿಗರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವರದಿಯಾಗಿದೆ”.

“ಹಿಂದುಳಿದ ಸಮುದಾಯಗಳಿಂದ ಬೆಂಬಲವನ್ನು ಪಡೆದಿದ್ದರೂ, ಚುನಾವಣೆಯ ನಂತರ ಕಾಂಗ್ರೆಸ್‌ನ ಆಪಾದಿತ ಮೀಸಲಾತಿ ವಿರೋಧಿ ಕ್ರಮಗಳ ಕುರಿತು ಯಾದವ್ ಮತ್ತು ಹೋರಾಟಗಾರ್ತಿ ಉಲ್ಕಾ ಮಹಾಜನ್‌ಗೆ ಪ್ರೇಕ್ಷಕರು  ಪ್ರಶ್ನೆಗಳನ್ನು ಹಾಕಿದ್ದಾರೆ ಎಂದು ವಿಬಿಎ ತಿಳಿಸಿದೆ. ಈ ಮೂಲಕ ಹಲ್ಲೆ ಆರೋಪವನ್ನು ತಳ್ಳಿ ಹಾಕಿದೆ.

ವಿಬಿಎಗೆ ಸಂಬಂಧಿಸಿದ ಪತ್ರಿಕೆಯಾದ ಪ್ರಬುದ್ಧ್ ಭಾರತ್‌ನಲ್ಲಿ “ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೌದ್ಧರು, ದಲಿತರು, ಬುಡಕಟ್ಟುಗಳು, ಮುಸ್ಲಿಮರು, ಒಬಿಸಿಗಳ ಮತಗಳನ್ನು ತೆಗೆದುಕೊಂಡಿತು. ಆದರೆ, ಕಾಂಗ್ರೆಸ್ ಬಿಜೆಪಿಯ ಕೆಲಸವನ್ನು ಮಾಡುತ್ತಿದೆ. ಯಾವುದೇ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ನೀಡಲು ಸಾಧ್ಯವಾಗದೆ, ಮಹಾರಾಷ್ಟ್ರ ಡೆಮಾಕ್ರಟಿಕ್ ಫ್ರಂಟ್ ಮತ್ತು ಭಾರತ್ ಜೋಡೋ ಅಭಿಯಾನದ ಜನರು ಪ್ರಶ್ನೆಗಳನ್ನು ಕೇಳುವ ಜನರನ್ನು ಮೌನಗೊಳಿಸಲು ಪ್ರಯತ್ನಿಸಿದರು. ಯೋಗೇಂದ್ರ ಯಾದವ್ ಮತ್ತು ಉಲ್ಕಾ ಮಹಾಜನ್ ಯಾವುದೇ ಪ್ರಶ್ನೆಗೆ ಉತ್ತರವಿಲ್ಲದ ಕಾರಣ ಕಾರ್ಯಕ್ರಮದಿಂದ ಹಿಂದೆ ಸರಿದರು” ಎಂದು ವಿಬಿಎ ಬರೆದುಕೊಂಡಿದೆ.

ಇದನ್ನೂ ಓದಿ : ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...