Homeಮುಖಪುಟಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರ ಮೇಲೆ ಇದೇ ರೀತಿಯ ದಾಳಿ ಮುಂದುವರೆಸಿದ್ದಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರು ರಸ್ತೆಯಲ್ಲಿ ಓಡಾಡಲು ಸಹ ಜನರು ಬಿಡುವುದಿಲ್ಲ. - ರಾಕೇಶ್ ಟಿಕಾಯತ್

- Advertisement -
- Advertisement -

ನಿನ್ನೆ ರಾಜಸ್ಥಾನದ ಅಲ್ವಾರ್‌ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಸ್ಥಳೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಸೇರಿದಂತೆ ಇತರ ಮೂವರನ್ನು ಮುಂಜಾಗ್ರತ ಕ್ರಮವಾಗಿ ಪೊಲೀಸರು ಬಂಧಿಸಿದ್ದಾರೆ.

ಇನ್ನು ಘಟನೆಗೆ ಬಿಜೆಪಿಯೇ ನೇರ ಕಾರಣ ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಆರೋಪಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರ ಮೇಲೆ ಇದೇ ರೀತಿಯ ದಾಳಿ ಮುಂದುವರೆಸಿದ್ದಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರು ರಸ್ತೆಯಲ್ಲಿ ಓಡಾಡಲು ಸಹ ಜನರು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ದಾಳಿಕೋರರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ಯ ಸಕ್ರಿಯ ಸದಸ್ಯರಾಗಿದ್ದಾರೆ ಮತ್ತು ಸ್ಥಳೀಯ ಸಂಸದ ಬಾಲಕ್ ನಾಥ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪುನಿಯಾ ಅವರ ಆಪ್ತರಾಗಿದ್ದಾರೆ ಎಂದು ಟಿಕಾಯತ್ ಹೇಳಿದ್ದಾರೆ.

“ನಾವು ಮುಂದಿನ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸುತ್ತೇವೆ ಮತ್ತು ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ. ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ ಮತ್ತು ನಮ್ಮ ಕಾರ್ಯಕ್ರಮಗಳು ಯೋಜಿಸಿದಂತೆ ಮುಂದುವರಿಯುತ್ತದೆ ಎಂದಿರುವ ಟಿಕಾಯತ್, ಈ ದಾಳಿಯ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ” ಅವರು ಎಲ್ಲಾ ರೈತರಿಗೆ ಮನವಿ ಮಾಡಿದ್ದಾರೆ.

“ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್‌ರವರ ಬೆಂಗಾವಲು ವಾಹನದ ಮೇಲಿನ ಬಿಜೆಪಿ ಗೂಂಡಾಗಳ ಹಲ್ಲೆ ಖಂಡನೀಯ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರೈತ ಹೋರಾಟ ಆರಂಭವಾದಾಗಿನಿಂದಲೂ ಬಿಜೆಪಿಯು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವುದರ ಮೂಲಕ ಹಿಂಸೆಗೆ ಪ್ರಚೋದನೆ ನೀಡುತ್ತಿದೆ. ರೈತರ ಹಕ್ಕುಗಳ ಪರವಾಗಿ ಹೋರಾಡುತ್ತಿರುವವರ ವಿರುದ್ಧ ಅಪ್ರಜಾತಾಂತ್ರಿಕ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಸಂಯುಕ್ತ ಹೋರಾಟ – ಕರ್ನಾಟಕವು ರಾಕೇಶ್ ಟಿಕಾಯತ್ ಮೇಲಿನ ದಾಳಿಯನ್ನು ಖಂಡಿಸಿದೆ. ಈ ಎಲ್ಲಾ ಅನ್ಯಾಯಗಳ ಫಲವನ್ನು ಮೋದಿ ಸರ್ಕಾರ ಸದ್ಯದಲ್ಲಿಯೇ ಅನುಭವಿಸಲಿದೆ ಎಂದು ಹೇಳಿಕೆಯಲ್ಲಿ ಸಂಯುಕ್ತು ಹೋರಾಟ ಕರ್ನಾಟಕದ ಪರವಾಗಿ ಬಡಗಲಪುರ ನಾಗೇಂದ್ರ, ಜಿ.ಸಿ ಬಯ್ಯಾರೆಡ್ಡಿ ಮತ್ತು ಪಿ.ಗೋಪಾಲ್ ತಿಳಿಸಿದ್ದಾರೆ.

ದೆಹಲಿ-ಉತ್ತರ ಪ್ರದೇಶದ ಗಾಜಿಪುರ ಗಡಿಯಲ್ಲಿ ಕೇಂದ್ರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಅವರು ನಾಲ್ಕು ತಿಂಗಳಿನಿಂದ ಮುನ್ನಡೆಸುತ್ತಿದ್ದಾರೆ. ದೇಶದಾದ್ಯಂತ ನಡೆಯುತ್ತಿರುವ ರೈತ ಮಹಾಪಂಚಾಯತ್‌ಗಳಲ್ಲಿ ಭಾಗವಹಿಸಿ ಹೋರಾಟಕ್ಕೆ ಹುರುಪು ತುಂಬುತ್ತಿದ್ದಾರೆ.


ಇದನ್ನೂ ಓದಿ: ರಾಜಸ್ಥಾನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬಿಜೆಪಿ ಬೆಂಬಲಿಗರ ಹಲ್ಲೆ- ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...