ಈ ವರ್ಷದ ಫೆಬ್ರವರಿ ತಿಂಗಳಲ್ಲಿ ದೆಹಲಿಯಲ್ಲಿ ಭುಗಿಲೆದ್ದ ಗಲಭೆಯ ಕಾರಣ ಜೈಲು ಪಾಲಾಗಿರುವ ಆರೋಪಿಗಳ ಪರ ವಾದಿಸುತ್ತಿದ್ದ ಹಿರಿಯ ವಕೀಲ ಮೆಹಮೂದ್ ಪ್ರಾಚಾ ಅವರ ಕಚೇರಿ ಮೇಲೆ ದೆಹಲಿ ಪೊಲೀಸರು ಗುರುವಾರ ದಾಳಿ ನಡೆಸಿದೆ. ದೆಹಲಿ ಪೊಲೀಸರ ದಾಳಿಯನ್ನು ಅಖಿಲ ಭಾರತೀಯ ವಕೀಲರ ಒಕ್ಕೂಟ (AILU) ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.
ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!
“ದೆಹಲಿ ಪೋಲಿಸರು ದಾಳಿ ಮಾಡಿ ಲ್ಯಾಪ್‌ಟಾಪ್ ಮತ್ತು ಕಂಪ್ಯೂಟರ್ ವಶಕ್ಕೆ ಪಡೆದಿರುವುದು ಖಂಡನೀಯ. ಆರೋಪಿಗಳನ್ನು ಪ್ರತಿನಿಧಿಸುವ ವಕೀಲರನ್ನೇ ಆರೋಪಿಗಳಾಗಿಸುವ ದೆಹಲಿ ಪೋಲಿಸರ ಕ್ರಮ ಒಪ್ಪುವಂತದಲ್ಲ” ಎಂದು ಅಖಿಲ ಭಾರತೀಯ ವಕೀಲರ ಒಕ್ಕೂಟ (AILU) ರಾಜ್ಯ ಸಮಿತಿ ಕಾರ್ಯದರ್ಶಿ ಶ್ರೀನಿವಾಸ್ ಕುಮಾರ್ ಹೇಳಿದ್ದಾರೆ.
ಪೊಲೀಸರು ಮೆಹಮೂದ್ ಅವರ ಕಚೇರಿಗೆ ದಾಳಿ ನಡೆಸಿ ಲ್ಯಾಪ್‌ಟಾಪ್ ಮತ್ತಿ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ನಡೆಸಲು ಪೊಲೀಸರು ಸ್ಥಳೀಯ ನ್ಯಾಯಾಲಯದಿಂದ ವಾರೆಂಟ್ ಪಡೆದುಕೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್ ಭೂಷಣ್


