Homeಮುಖಪುಟಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

- Advertisement -
- Advertisement -

ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ)ದ ಕರಡು ನಿಯಮಗಳನ್ನು ಹಿಂಪಡೆಯಬೇಕೆಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾನುವಾರ ಒತ್ತಾಯಿಸಿದ್ದು, ಅವುಗಳನ್ನು ಸಂವಿಧಾನದ ಮೇಲಿನ ದಾಳಿ ಎಂದು ಬಣ್ಣಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ವಿಶ್ವವಿದ್ಯಾಲಯಗಳನ್ನು ನಡೆಸುವ ಅಧಿಕಾರವನ್ನು ಈ ನಿಯಮಗಳ ಮೂಲಕ ರಾಜ್ಯ ಸರ್ಕಾರಗಳಿಂದ ಕೇಂದ್ರ ಸರ್ಕಾರವು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯುಜಿಸಿ ಕರಡು ನಿಯಮ

ಜನವರಿ 6 ರಂದು ಬಿಡುಗಡೆಯಾದ ಯುಜಿಸಿ ಕರಡು ನಿಯಮಗಳಲ್ಲಿ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನೆ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿಗಳನ್ನು ಮಾಡುವ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸಿವೆ. ವಿಶ್ವವಿದ್ಯಾಲಯದ ಉಪಕುಲಪತಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಕುಲಪತಿಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಬಗ್ಗೆ ಕೇಂದ್ರ ಸರ್ಕಾರವು ಯೋಚಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಅಡಿಯಲ್ಲಿ ಇರುವ ವಿಶ್ವವಿದ್ಯಾಲಯಗಳ ಕುಲಪತಿಗಳು ಕೇಂದ್ರ ಸರ್ಕಾರದಿಂದ ನೇಮಕಗೊಂಡ ರಾಜ್ಯಪಾಲರಾಗಿದ್ದಾರೆ. ಇದು ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಂದ ಕೇಂದ್ರ ಸರ್ಕಾರವು ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ಆಯ್ಕೆ ಮಾಡಲು ಹೆಚ್ಚಿನ ಅಧಿಕಾರವನ್ನು ಪಡೆಯುತ್ತಿದೆ ಎಂಬ ಆತಂಕಕ್ಕೆ ಕಾರಣವಾಗಿದೆ.

ಶೈಕ್ಷಣಿಕ ಹಿನ್ನೆಲೆ ಇಲ್ಲದ ಅಭ್ಯರ್ಥಿಗಳನ್ನು ಉಪಕುಲಪತಿಗಳನ್ನಾಗಿ ಮಾಡಲು ಅನುಮತಿಸುವ ಕರಡು ನಿಯಮಗಳಲ್ಲಿನ ನಿಬಂಧನೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಹ ಆಕ್ಷೇಪಿಸಿದ್ದಾರೆ. ಇದು ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವವಿಲ್ಲದ ವ್ಯಕ್ತಿಗಳನ್ನು ವಿಶ್ವವಿದ್ಯಾಲಯಗಳ ಮುಖ್ಯಸ್ಥರನ್ನಾಗಿ ನೇಮಿಸಲು ಕಾರಣವಾಗಲಿದೆ ಎಂದು ಅವರು ಕಳೆದ ವಾರ ವಾದಿಸಿದ್ದರು.

ಭಾನುವಾರ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ, ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ ಹೊಸ ನಿಯಮಗಳನ್ನು ಪರಿಚಯಿಸುವ ಪ್ರಸ್ತಾಪದ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ. “ಕೇಂದ್ರವು ವಿಶ್ವವಿದ್ಯಾಲಯಗಳ ಆಡಳಿತವನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆಯು ಕೆಲವು ವ್ಯಕ್ತಿಗಳಿಂದ ಸುಳ್ಳು ಪ್ರಚಾರಕ್ಕೆ ವೇದಿಕೆಗಳಾಗಲು ಕಾರಣವಾಗಲಿದೆ” ಎಂದು ಅವರು ಆರೋಪಿಸಿದ್ದಾರೆ. ಯುಜಿಸಿ ಕರಡು ನಿಯಮ

ಈ ವಿಷಯದ ಬಗ್ಗೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ “ಸಮನ್ವಯ” ಮಾಡಿಕೊಳ್ಳುವುದಾಗಿ ರೇವಂತ್ ರೆಡ್ಡಿ ಹೇಳಿದ್ದು, ಶೀಘ್ರದಲ್ಲೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರೊಂದಿಗೆ ಈ ವಿಷಯವನ್ನು ಚರ್ಚಿಸಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ತಮಿಳುನಾಡು ವಿಧಾನಸಭೆಯು ಜನವರಿ 9 ರಂದು ಕರಡು ನಿಯಮಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತ್ತು. ಜನವರಿ 21 ರಂದು ಕೇರಳ ವಿಧಾನಸಭೆ ಕೂಡಾ ನಿರ್ಣಯ ಅಂಗೀಕರಿಸಿದ್ದು, ಜನವರಿ 9 ರಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕರಡನ್ನು ವಿರೋಧಿಸಿದ್ದಾರೆ. ಅವರು ಇದನ್ನು, ಕನ್ನಡಿಗರಿಗೆ ಬಗೆಯುವ “ದ್ರೋಹ” ಎಂದು ಕರೆದಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ವಿಧಾನಸಭೆಯು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ 2024 ಅನ್ನು ಅಂಗೀಕರಿಸಿತ್ತು. ಈ ಮಸೂದೆಯು, ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ತೆಗೆದುಹಾಕಿದ್ದು, ಈ ಸ್ಥಾನಕ್ಕೆ ಮುಖ್ಯಮಂತ್ರಿಯನ್ನು ಬದಲಾಯಿಸಿತ್ತು.

ಆದಾಗ್ಯೂ, ವಿಶ್ವವಿದ್ಯಾಲಯ ಅನುದಾನ ಆಯೋಗವು ಪ್ರಸ್ತಾವಿತ ನಿಯಮಗಳನ್ನು ಸಮರ್ಥಿಸಿಕೊಂಡಿದ್ದು, ಪರಿಷ್ಕೃತ ಪ್ರಕ್ರಿಯೆಯು “ಅಸ್ಪಷ್ಟತೆಯನ್ನು ನಿವಾರಿಸುತ್ತದೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ” ಎಂದು ಹೇಳಿದೆ. ಜನವರಿ 10 ರಂದು ಮಾತನಾಡಿರುವ ಆಯೋಗದ ಅಧ್ಯಕ್ಷ ಎಂ. ಜಗದೀಶ್, ಹೊಸ ನಿಯಮಗಳು ಕುಲಪತಿ-ಶೋಧನಾ-ಕಮ್-ಆಯ್ಕೆ ಸಮಿತಿಯ ಸಂಯೋಜನೆಯನ್ನು ನಿರ್ದಿಷ್ಟಪಡಿಸುವ ಮೂಲಕ “ತುಂಬಾ ಅಗತ್ಯವಿರುವ ಸ್ಪಷ್ಟತೆ”ಯನ್ನು ತರುತ್ತವೆ ಎಂದು ಹೇಳಿದ್ದಾರೆ.

ಈ ಸಮಿತಿಯು ಮೂವರು ಸದಸ್ಯರನ್ನು ಹೊಂದಿರುತ್ತದೆ – ಒಬ್ಬರು ಕುಲಪತಿಗಳಿಂದ ಆಯ್ಕೆ ಮಾಡಲ್ಪಟ್ಟವರು, ಇನ್ನೊಬ್ಬರು ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷರಿಂದ ಮತ್ತು ಮೂರನೇ ಒಬ್ಬರು ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ ಅಥವಾ ಸೆನೆಟ್‌ನಿಂದ ಆಯ್ಕೆಯಾಗುತ್ತಾರೆ ಎಂದು ಜಗದೀಶ್ ಹೇಳಿದ್ದರು.

ಇದನ್ನೂಓದಿ:  ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...